Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:18 - ಕನ್ನಡ ಸತ್ಯವೇದವು C.L. Bible (BSI)

18 ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಆತನು ರಾಜನಿಗೆ, ‘ನೀನು ಮೂರ್ಖ’ ಪ್ರಭುಗಳಿಗೆ, ‘ನೀವು ಕೆಟ್ಟವರು’ ಎಂದು ಹೇಳಬಲ್ಲನೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ಆತನು ರಾಜನಿಗೆ - ನೀನು ಮೂರ್ಖ, ಪ್ರಭುಗಳಿಗೆ - ನೀವು ಕೆಟ್ಟವರು ಎಂದು ಹೇಳಬಲ್ಲನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ‘ನೀವು ಅಯೋಗ್ಯರು!’ ಎಂದು ರಾಜರುಗಳಿಗೆ ಹೇಳುವವನು ದೇವರೊಬ್ಬನೇ. ‘ನೀವು ಕೆಡುಕರು!’ ಎಂದು ನಾಯಕರುಗಳಿಗೆ ಹೇಳುವವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ದೇವರು ಅರಸನಿಗೆ, ‘ನೀನು ಮೂರ್ಖ,’ ಎಂದು ಹೇಳಬಲ್ಲರು. ದೇವರು ಪ್ರಧಾನರಿಗೆ, ‘ನೀವು ದುಷ್ಟರು’ ಎಂದು ಕರೆಯಬಲ್ಲರು ಅಲ್ಲವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:18
10 ತಿಳಿವುಗಳ ಹೋಲಿಕೆ  

“ದೇವರನ್ನು ದೂಷಿಸಬಾರದು; ನಿಮ್ಮ ಜನನಾಯಕನನ್ನು ಶಪಿಸಬಾರದು.


ನೀತಿವಂತನಿಗೆ ದಂಡ ಸರಿಯಲ್ಲ; ಸಜ್ಜನನಿಗೆ ಶಿಕ್ಷೆ ನ್ಯಾಯವಲ್ಲ.


ಈ ದುರ್ಬೋಧಕರು ಕೂಡ ಹಾಗೆಯೇ ವರ್ತಿಸುತ್ತಾರೆ. ಕನಸು ಕಾಣುವವರಂತೆ ತಮ್ಮ ಶರೀರವನ್ನು ಪಾಪಕಳಂಕದಿಂದ ಮಲಿನವಾಗಿಸಿಕೊಳ್ಳುತ್ತಾರೆ. ಪ್ರಭುವಿನ ಅಧಿಕಾರವನ್ನು ಅಸಡ್ಡೆಮಾಡುತ್ತಾರೆ. ಸ್ವರ್ಗನಿವಾಸಿಗಳನ್ನು ದೂಷಿಸುತ್ತಾರೆ.


ಆದ್ದರಿಂದ ಸಲ್ಲಿಸಬೇಕಾದುದನ್ನು ಅವರಿಗೆ ಸಲ್ಲಿಸಿರಿ. ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ವಿಧೇಯತೆಯೋ ಅವರಿಗೆ ವಿಧೇಯತೆಯನ್ನು, ಯಾರಿಗೆ ಗೌರವವೋ ಅವರಿಗೆ ಗೌರವವನ್ನು ಸಲ್ಲಿಸಿರಿ.


ಪ್ರತ್ಯುತ್ತರವಾಗಿ ಪೌಲನು, “ಸಹೋದರರೇ, ಇವರು ಪ್ರಧಾನ ಯಾಜಕರೆಂದು ನನಗೆ ತಿಳಿಯದೆ ಹೋಯಿತು. ‘ನಿಮ್ಮ ಪ್ರಜಾಪಾಲನನ್ನು ದೂಷಿಸಬೇಡ’ ಎಂದು ಪವಿತ್ರಗ್ರಂಥದಲ್ಲೇ ಬರೆದಿದೆ ಅಲ್ಲವೆ?” ಎಂದನು.


ಪೌಲನು ಅವನಿಗೆ, ‘ಸುಣ್ಣಬಳಿದ ಗೋಡೆ ನೀನು; ದೇವರು ನಿನ್ನನ್ನು ಹೊಡೆಯದೆ ಬಿಡರು; ಧರ್ಮಶಾಸ್ತ್ರದ ಪ್ರಕಾರ ನ್ಯಾಯವಿಚಾರಣೆ ಮಾಡಲು ಕುಳಿತಿರುವ ನೀನು ಅದೇ ಧರ್ಮಶಾಸ್ತ್ರವನ್ನು ಉಲ್ಲಂಘಿಸಿ ನನ್ನನ್ನು ಹೊಡೆಯುವಂತೆ ಆಜ್ಞಾಪಿಸುತ್ತಿರುವೆಯಾ?” ಎಂದನು.


ಮುಖ್ಯವಾಗಿ, ತುಚ್ಛವಾದ ದೈಹಿಕ ವ್ಯಾಮೋಹಗಳಿಗೆ ಬಲಿಯಾಗಿರುವವರನ್ನು ಮತ್ತು ದೇವರ ಅಧಿಕಾರವನ್ನು ತೃಣೀಕರಿಸುವವರನ್ನು ಅವರು ಶಿಕ್ಷಿಸದೆ ಬಿಡುವುದಿಲ್ಲ.


ಸರ್ವರನ್ನೂ ಸನ್ಮಾನಿಸಿರಿ, ಸಹೋದರರನ್ನು ಸ್ನೇಹಿಸಿರಿ, ದೇವರಲ್ಲಿ ಭಯಭಕ್ತಿ ಇಡಿ, ದೇಶಾಧಿಕಾರಿಗಳಿಗೆ ಗೌರವ ನೀಡಿ.


ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?


ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು