Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:19 - ಕನ್ನಡ ಸತ್ಯವೇದವು C.L. Bible (BSI)

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸುವನು ಬಡವ-ಬಲ್ಲಿದನೆಂಬ ಭೇದವನ್ನು ಮಾಡನು. ಏಕೆಂದರೆ ಅವರೆಲ್ಲರು ಆ ದೇವನಿಂದಲೇ ಸೃಷ್ಟಿಯಾದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ, ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಅಧಿಪತಿಗಳಿಗೆ ಮುಖದಾಕ್ಷಿಣ್ಯವನ್ನು ತೋರಿಸದೆ ಬಡವರು ಬಲ್ಲಿದರು ಎಂಬ ಭೇದವನ್ನು ಮಾಡದೆ ಇರುವನು; ಅವರೆಲ್ಲರೂ ಆತನ ಸೃಷ್ಟಿಯಾಗಿದ್ದಾರಷ್ಟೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ದೇವರಲ್ಲಿ ಸಾಮಾನ್ಯರು ಮತ್ತು ಪ್ರಮುಖರು ಎಂದಾಗಲಿ ಬಡವರು ಮತ್ತು ಶ್ರೀಮಂತರು ಎಂದಾಗಲಿ ಭೇದಭಾವವಿಲ್ಲ. ಯಾಕೆಂದರೆ ಎಲ್ಲರನ್ನೂ ಸೃಷ್ಟಿಮಾಡಿದವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ದೇವರು ಅಧಿಪತಿಗಳಿಗೆ ಮುಖದಾಕ್ಷಿಣ್ಯ ತೋರಿಸುವರೋ? ಧನಿಕನನ್ನು ಬಡವನಿಗಿಂತ ಹೆಚ್ಚೆಂದು ದೇವರು ಲಕ್ಷಿಸುವರೋ? ಏಕೆಂದರೆ ಅವರೆಲ್ಲರೂ ದೇವರ ಸೃಷ್ಟಿಯಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:19
28 ತಿಳಿವುಗಳ ಹೋಲಿಕೆ  

ನನ್ನ ಪ್ರಿಯ ಸಹೋದರರೇ, ಪ್ರಪಂಚದ ದೃಷ್ಟಿಗೆ ಬಡವರಾಗಿ ಕಾಣುವವರನ್ನು ವಿಶ್ವಾಸದಲ್ಲಿ ಸಿರಿವಂತರನ್ನಾಗಿಸಲು ದೇವರು ಆರಿಸಿಕೊಳ್ಳಲಿಲ್ಲವೇ? ತಮ್ಮನ್ನು‍ ಪ್ರೀತಿಸುವವರು ಸ್ವರ್ಗಸಾಮ್ರಾಜ್ಯಕ್ಕೆ ಬಾಧ್ಯಸ್ಥರೆಂದು ದೇವರೇ ವಾಗ್ದಾನ ಮಾಡಿಲ್ಲವೇ?


ನಿಮ್ಮ ದೇವರಾದ ಸರ್ವೇಶ್ವರ ದೇವಾದಿದೇವರು, ಸರ್ವೇಶ್ವರಾಧಿ ಸರ್ವೇಶ್ವರ. ಅವರು ಪರಮ ದೇವರೂ ಪರಾಕ್ರಮಿಯೂ ಭಯಂಕರರೂ ಆಗಿದ್ದಾರೆ. ಅವರು ಮುಖದಾಕ್ಷಿಣ್ಯ ನೋಡುವವರಲ್ಲ, ಲಂಚ ತೆಗೆದುಕೊಳ್ಳುವವರಲ್ಲ.


ಆಗ ಪೇತ್ರನು ಹೀಗೆಂದು ಉಪದೇಶ ಮಾಡಿದನು: “ದೇವರು ಪಕ್ಷಪಾತಿಯಲ್ಲ. ಈ ವಿಷಯ ನನಗೆ ಮನದಟ್ಟಾಗಿದೆ.


ಅನ್ಯಾಯ ಮಾಡುವವನು ತಾನು ಮಾಡಿದ ಅನ್ಯಾಯಕ್ಕೆ ತಕ್ಕ ಶಿಕ್ಷೆಯನ್ನು ಪಡೆಯುವನು. ದೇವರು ಪಕ್ಷಪಾತಿಯಲ್ಲ.


ನೀವು ದೇವರಿಗೆ ಪ್ರಾರ್ಥನೆಮಾಡುವಾಗ, ಅವರನ್ನು “ತಂದೆಯೇ” ಎಂದು ಸಂಬೋಧಿಸುತ್ತೀರಿ. ಅವರು ಪಕ್ಷಪಾತಿ ಅಲ್ಲ. ಎಲ್ಲರಿಗೂ ಅವರವರ ಕೃತ್ಯಗಳಿಗೆ ತಕ್ಕಂತೆ ನ್ಯಾಯತೀರ್ಪು ನೀಡುವವರು. ಆದ್ದರಿಂದ ನಿಮ್ಮ ಇಹಲೋಕದ ಯಾತ್ರೆಯನ್ನು ಭಯಭಕ್ತಿಯಿಂದ ಸಾಗಿಸಿರಿ.


ಯಜಮಾನರೇ, ನೀವು ಕೂಡ ನಿಮ್ಮ ಸೇವಕರೊಡನೆ ಯೋಗ್ಯವಾದ ರೀತಿಯಲ್ಲಿ ವರ್ತಿಸಿರಿ. ಅವರನ್ನು ಬೆದರಿಸುವುದನ್ನು ಬಿಟ್ಟುಬಿಡಿ. ಸ್ವರ್ಗಲೋಕದಲ್ಲಿ ನಿಮಗೂ ಅವರಿಗೂ ಒಬ್ಬ ಯಜಮಾನ ಇರುತ್ತಾನೆ. ಆತ ಪಕ್ಷಪಾತಿಯಲ್ಲ ಎಂಬುದನ್ನು ಮರೆಯದಿರಿ.


ಹೀಗಿರುವಲ್ಲಿ, ನಿಮಗೆ ಅವರ ಭಯಭಕ್ತಿಯಿರಲಿ. ನಿಮ್ಮ ದೇವರಾದ ಸರ್ವೇಶ್ವರನಲ್ಲಿ ಅನ್ಯಾಯ, ಮುಖದಾಕ್ಷಿಣ್ಯ ಹಾಗು ಲಂಚಕೋರತನ ಇಲ್ಲ. ಆದುದರಿಂದ ಜಾಗರೂಕತೆಯಿಂದ ಕೆಲಸಮಾಡಿ,” ಎಂದು ಎಚ್ಚರಿಸಿದನು.


ಅಲ್ಲಿದ್ದ ಗಣ್ಯವ್ಯಕ್ತಿಗಳು ಕೂಡ (ಅವರು ಹಿಂದೆ ಎಂಥವರಾಗಿದ್ದರು ಎಂಬುದು ನನಗೆ ಮುಖ್ಯವಲ್ಲ; ದೇವರು ಮುಖನೋಡಿ ಮಣೆ ಹಾಕುವವರಲ್ಲ) ನನಗೆ ಯಾವ ಹೊಸ ಸಲಹೆ ನೀಡಲಿಲ್ಲ.


ನಾಡಿನಲ್ಲಿ ಬಡವರ ಶೋಷಣೆಯನ್ನೂ ನ್ಯಾಯನೀತಿಯ ಉಲ್ಲಂಘನೆಯನ್ನೂ ನೀನು ನೋಡಿದರೆ ಆಶ್ಚರ್ಯಪಡಬೇಡ. ಒಬ್ಬ ಅಧಿಕಾರಿಯ ಮೇಲೆ ಇನ್ನೊಬ್ಬ ಅಧಿಕಾರಿ ಉಸ್ತುವಾರಿ ನಡೆಸುತ್ತಾನೆ. ಆ ಇಬ್ಬರು ಅಧಿಕಾರಿಗಳ ಮೇಲೆ ಇನ್ನೂ ಉನ್ನತ ಅಧಿಕಾರಿಗಳು ಇದ್ದಾರೆ.


ಬಡವರನ್ನು ಹಿಂಸಿಸುವವನು ತನ್ನ ಸೃಷ್ಟಿಕರ್ತನನ್ನೇ ಹೀನೈಸುತ್ತಾನೆ; ನಿರ್ಗತಿಕನಿಗೆ ದಯೆತೋರಿಸುವವನು ಆತನನ್ನು ಘನಪಡಿಸುತ್ತಾನೆ.


ತಾಯಗರ್ಭದಲ್ಲಿ ನನ್ನ ನಿರ್ಮಿಸಿದಾತನೆ ಅವರನೂ ನಿರ್ಮಿಸಲಿಲ್ಲವೆ? ತಾಯಗರ್ಭದಲ್ಲಿ ನಮ್ಮನು ರೂಪಿಸಿದಾತ ಅದೇ ದೇವರಲ್ಲವೆ?


“ವ್ಯಾಜ್ಯತೀರಿಸುವಾಗ ಅನ್ಯಾಯವಾದ ತೀರ್ಪನ್ನು ಕೊಡಬೇಡ. ಬಡವನ ಬಡತನವನ್ನಾಗಲಿ, ದೊಡ್ಡವನ ಘನತೆಯನ್ನಾಗಲಿ ಲಕ್ಷ್ಯಮಾಡದೆ ಪಕ್ಷಪಾತವಿಲ್ಲದ ತೀರ್ಪನ್ನು ಕೊಡು.


ಬಡವರು ಬಲ್ಲಿದರು ಸ್ಥಿತಿಯಲ್ಲಿ ಎದುರುಬದುರು; ಅವರೆಲ್ಲರನ್ನು ಸೃಷ್ಟಿಸಿದಾತ ಸರ್ವೇಶ್ವರನು.


ಆದ್ದರಿಂದ ಯಾರಿಂದಲೂ ಕದಲಿಸಲಾಗದ ಸಾಮ್ರಾಜ್ಯವನ್ನು ಪಡೆದಿರುವ ನಾವು ದೇವರಿಗೆ ಕೃತಜ್ಞತೆಯನ್ನು ಸಲ್ಲಿಸೋಣ. ಅವರಿಗೆ ಚಿರಋಣಿಗಳಾಗಿದ್ದು, ಭಯಭಕ್ತಿಯಿಂದ ಸಮರ್ಪಕ ಆರಾಧನೆಯನ್ನು ಸಲ್ಲಿಸೋಣ.


ಸ್ವಾಮಿ ಜನರ ನಾಯಕರನ್ನೂ ಅಧಿಪತಿಗಳನ್ನೂ ನ್ಯಾಯವಿಚಾರಣೆಗೆ ಗುರಿಪಡಿಸುವರು. “ನೀವು ದ್ರಾಕ್ಷಾತೋಟವನ್ನು ಕಬಳಿಸಿದ್ದೀರಿ. ಬಡವರಿಂದ ಕೊಳ್ಳೆಹೊಡೆದದ್ದನ್ನು ಮನೆಗಳಲ್ಲಿ ತುಂಬಿಸಿಕೊಂಡಿದ್ದೀರಿ.


ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.


ಅವರಿಗೆ ಮುಖದಾಕ್ಷಿಣ್ಯ ತೋರುವಿರೋ? ದೇವರ ಪರವಾಗಿ ನೀವು ವಾದಿಸುವಿರೋ?


ಅಧಿಪತಿಗಳಿಗೆ ಉಂಟುಮಾಡುತ್ತಾನೆ ಅವಮಾನವನ್ನು ಬಿಚ್ಚಿಬಿಡುತ್ತಾನೆ ಬಲಾಢ್ಯರ ನಡುಕಟ್ಟನ್ನು.


ಯಾಜಕರನ್ನು ಬರಿಬತ್ತಲೆಯಾಗಿ ನಡೆಸುತ್ತಾನೆ ಅಚಲ ಶಕ್ತಿಶಾಲಿಗಳನ್ನು ಕೆಡವಿಬಿಡುತ್ತಾನೆ.


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಲೋಕದ ದೃಷ್ಟಿಯಲ್ಲಿ ಗಣ್ಯವಾದುದನ್ನು ನಿರ್ನಾಮಗೊಳಿಸಲು ಗಣನೆಗೆ ಬಾರದುದನ್ನು, ಕೀಳಾದುದನ್ನು, ಬೀಳಾದುದನ್ನು ಆರಿಸಿಕೊಂಡರು.


ನೀವು ಗುಟ್ಟಾಗಿ ಪಕ್ಷಪಾತಮಾಡಿದರೂ ಆತ ನಿಮ್ಮನ್ನು ಖಂಡಿಸದೆ ಬಿಡನು.


ನಾನಾರಿಗೂ ಮುಖದಾಕ್ಷಿಣ್ಯ ತೋರುವುದಿಲ್ಲ ಯಾವ ಮಾನವನಿಗೂ ಮುಖಸ್ತುತಿ ಸಲ್ಲಿಸುವುದಿಲ್ಲ.


ದೇವರು ರಾಜನಿಗೆ “ಮೂರ್ಖ’ ಎಂದು ಹೇಳಬಲ್ಲನು ಪ್ರಭುಗಳನ್ನು “ದುಷ್ಟರು” ಎಂದು ಕರೆಯಬಲ್ಲನು.


ಪ್ರಾಣರಕ್ಷಣೆಯ ಈ ತೆರಿಗೆಯನ್ನು ನನಗೆ ಕೊಡುವವರಲ್ಲಿ ಐಶ್ವರ್ಯವಂತರು ಅರ್ಧನಾಣ್ಯಕ್ಕಿಂತ ಹೆಚ್ಚು ಕೊಡಬಾರದು; ಬಡವರು ಕಮ್ಮಿ ಕೊಡಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು