Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:21 - ಕನ್ನಡ ಸತ್ಯವೇದವು C.L. Bible (BSI)

21 ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

21 ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು, ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

21 ಆತನು ಮನುಷ್ಯನ ಮಾರ್ಗಗಳ ಮೇಲೆ ಕಣ್ಣಿಟ್ಟು ಅವನ ಹೆಜ್ಜೆಗಳನ್ನೆಲ್ಲಾ ನೋಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

21 “ಮನುಷ್ಯರ ಕಾರ್ಯಗಳನ್ನು ದೇವರು ಗಮನಿಸುತ್ತಾನೆ. ಅವನ ಪ್ರತಿಯೊಂದು ಹೆಜ್ಜೆ ಆತನಿಗೆ ಗೊತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

21 “ಏಕೆಂದರೆ ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಇರುತ್ತದೆ; ದೇವರು ಮನುಷ್ಯನ ಪ್ರತಿಯೊಂದು ಹೆಜ್ಜೆಯನ್ನೂ ನೋಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:21
18 ತಿಳಿವುಗಳ ಹೋಲಿಕೆ  

ಸರ್ವೇಶ್ವರನ ದೃಷ್ಟಿ ಸರ್ವವ್ಯಾಪ್ತ; ಕೆಟ್ಟವರ ಮೇಲೂ ಒಳ್ಳೆಯವರ ಮೇಲೂ ಆತನ ನೋಟ.


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ಈ ಜನರ ನಡತೆ ನನ್ನ ಮುಖಕ್ಕೆ ಮರೆಯಾಗಿಲ್ಲ, ಎಲ್ಲವು ನನ್ನ ಕಣ್ಣಿಗೆ ಕಟ್ಟಿದಂತಿದೆ. ಅವರ ಅಕ್ರಮ ನನಗೆ ಗುಟ್ಟೇನೂ ಅಲ್ಲ, ಎಲ್ಲವು ಬಟ್ಟಬಯಲಾಗಿದೆ.


ನರನ ಮಾರ್ಗ ಸರ್ವೇಶ್ವರನ ಕಣ್ಣಿಗೆ ಮರೆಯಲ್ಲ; ಆತ ವೀಕ್ಷಿಸುತ್ತಾನೆ ಮನುಷ್ಯನ ನಡತೆಯನ್ನೆಲ್ಲಾ.


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ತಿಳಿದುಕೋ ದೇವಾ, ನನ್ನ ಹೃದಯವನು ಪರೀಕ್ಷಿಸಿ I ಅರಿತುಕೋ ನನ್ನ ಆಲೋಚನೆಗಳನು ಪರಿಶೋಧಿಸಿ II


ಹಾಗರಳು, “ನನ್ನನ್ನು ನೋಡುವಾತ ದೇವರನ್ನು ನಾನಿಲ್ಲೇ ನೋಡಿಬಿಟ್ಟೆನಲ್ಲಾ!” ಎಂದುಕೊಂಡು ತನ್ನ ಸಂಗಡ ಮಾತನಾಡಿದ ಸರ್ವೇಶ್ವರ ಸ್ವಾಮಿಗೆ, “ಎಲ್ಲವನ್ನು ನೋಡುವಾತ ದೇವರು" ಎಂದು ಹೆಸರಿಟ್ಟಳು.


ಸರ್ವೇಶ್ವರನಾದ ನಾನು ಹೃದಯ ಪರಿಶೀಲಕ ಹೌದು, ಅಂತರಿಂದ್ರಿಯಗಳನ್ನು ಪರಿಶೋಧಿಸುವಾತ.


ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಒಡೆಯ ಸರ್ವೇಶ್ವರನಾದ ನಾನು ಈ ಪಾಪಮಯ ರಾಜ್ಯದ ಮೇಲೆ ಕಣ್ಣಿಟ್ಟಿದ್ದೇನೆ ಎಂಬುದನ್ನು ಗಮನಿಸಿರಿ. ಇದನ್ನು ಭೂಮಂಡಲದಿಂದ ನಾಶಮಾಡುವೆನು. ಆದರೆ ಯಕೋಬ ಮನೆತನವನ್ನು ಸಂಪೂರ್ಣವಾಗಿ ನಾಶಮಾಡೆನು.” ಇದು ಸರ್ವೇಶ್ವರಸ್ವಾಮಿಯ ನುಡಿ.


ಮನುಜರಂಥ ಕಣ್ಣುಗಳು ನಿನಗಿದೆಯೋ? ಮನುಷ್ಯರಂತೆ ನೀನು ನೋಡುತ್ತೀಯೋ?


ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.


ಭಕ್ತಿಹೀನನು ಆತನ ಮುಂದೆ ಬರಲಾರ ನಾನು ಉದ್ಧಾರವಾಗುವೆನೆಂಬುದಕ್ಕೆ ಇದೇ ಆಧಾರ.


ಆಗ ನನ್ನ ಹೆಜ್ಜೆಹೆಜ್ಜೆಗಳನು ನೀ ಲೆಕ್ಕಿಸುವೆ ನನ್ನ ಪಾಪ ಹುಡುಕಲು ನೀ ಕಾವಲು ಇಡಲಾರೆ.


ಅವರು ಆಧರಿಸಿ ನಿಂತಿರುವುದು ದೇವರಿತ್ತ ಅಭಯದ ನಿಮಿತ್ತ ಆತನ ಕಟಾಕ್ಷ ಅವರ ಮಾರ್ಗದತ್ತ.


ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II


ನನ್ನ ಕಣ್ಣಿಗೆ ಬೀಳದಂತೆ ಯಾವನಾದರು ಗುಪ್ತಸ್ಥಳಗಳಲ್ಲಿ ಮರೆಮಾಚಿಕೊಳ್ಳಲು ಸಾಧ್ಯವೇ? ನಾನು ಭೂಮ್ಯಾಕಾಶಗಳಲ್ಲಿ ವ್ಯಾಪಿಸಿರುವವನಲ್ಲವೆ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು