Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:23 - ಕನ್ನಡ ಸತ್ಯವೇದವು C.L. Bible (BSI)

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ ಅವನನ್ನು ನ್ಯಾಯವಿಚಾರಣೆಗೆ ಕರೆಯುವ ಅವಶ್ಯಕತೆ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನವಿಡುವುದೂ, ಮನುಷ್ಯನೂ ಆತನ ನ್ಯಾಯವಿಚಾರಣೆಗೆ ಬರುವುದೂ, ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನು ಮನುಷ್ಯನ ಮೇಲೆ ಹೆಚ್ಚು ಗಮನವಿಡುವದೂ ಮನುಷ್ಯನು ಆತನ ನ್ಯಾಯವಿಚಾರಣೆಗೆ ಬರುವದೂ ಅವಶ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರು ಮನುಷ್ಯರನ್ನು ಪರೀಕ್ಷಿಸಲು ಸಮಯವನ್ನು ಗೊತ್ತು ಪಡಿಸಬೇಕಿಲ್ಲ; ನ್ಯಾಯತೀರ್ಪು ನೀಡಲು ಅವರನ್ನು ತನ್ನ ಮುಂದೆ ಕರೆಸಬೇಕಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರು ಮನುಷ್ಯನ ಮೇಲೆ ಹೆಚ್ಚು ಗಮನ ಇಡಬೇಕಾಗಿಲ್ಲ. ಮನುಷ್ಯನು ನ್ಯಾಯವಿಚಾರಣೆಗೆ ಬರಬೇಕೆಂದು ದೇವರು ಕರೆಯುವ ಅವಶ್ಯಕತೆಯೂ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:23
14 ತಿಳಿವುಗಳ ಹೋಲಿಕೆ  

ಹುಲುಮಾನವಾ, ದೇವರೊಡನೆ ವಾದಿಸಲು ನೀನಾರು? ಮಡಿಕೆಯು ತನ್ನನ್ನು ಮಾಡಿದವನನ್ನು ನೋಡಿ, “ನನ್ನನ್ನು ಹೀಗೇಕೆ ಮಾಡಿದೆ” ಎಂದು ಕೇಳುವುದುಂಟೇ?


ಹೇ ಪ್ರಭೂ, ನೀನು ಸತ್ಯವಂತ I ನಿನ್ನ ವಿಧಿಯು ನ್ಯಾಯಸಮ್ಮತ II


ನಮ್ಮ ದುಷ್ಕರ್ಮ ಹಾಗು ಮಹಾಪರಾಧಗಳ ನಿಮಿತ್ತ ಇಷ್ಟೆಲ್ಲಾ ಕೇಡು ಬಂದಿದ್ದರೂ, ನಮ್ಮ ದೇವರಾದ ನೀವು ನಮ್ಮ ಪಾಪಗಳಿಗೆ ತಕ್ಕಂತೆ ನಮ್ಮನ್ನು ದಂಡಿಸದೆ, ನಮ್ಮಲ್ಲಿ ಇಷ್ಟುಮಂದಿಯನ್ನು ಉಳಿಸಿದ್ದೀರಿ;


“ನಿಮ್ಮ ಪಿತೃಗಳು ನನ್ನಲ್ಲಿ ಯಾವ ಕೊರತೆಯನ್ನು ಕಂಡು ನನ್ನಿಂದ ದೂರವಾದರು? ಅವರು ವ್ಯರ್ಥಾಚಾರಗಳನ್ನು ಅನುಸರಿಸುತ್ತಾ ತಾವೇ ವ್ಯರ್ಥವಾಗಿಬಿಟ್ಟರು !


ಮುರಿಯುವುದಿಲ್ಲ ಆತ, ಜಜ್ಜಿದ ದಂಟನು ನಂದಿಸುವುದಿಲ್ಲ ಆತ, ಕಳೆಗುಂದಿದ ದೀಪವನು ತಪ್ಪದೆ ಸಿದ್ಧಿಗೆ ತರುವನಾತ ಸದ್ಧರ್ಮವನು.


ಅಲ್ಲಿ ಸಜ್ಜನನಿಗೆ ಮಾತ್ರ ವಾದಿಸಲು ಸಾಧ್ಯ. ನಿತ್ಯವಾದ ಬಿಡುಗಡೆ ಆ ನ್ಯಾಯಾಧೀಶನಿಂದ ನನಗೆ ಲಭ್ಯ.


ಇದು ನನಗೆ ನ್ಯಾಯ ದೊರಕಿಸಲಿ, ದೇವರ ಮುಂದೆ ತನ್ನ ಮಿತ್ರನಿಗಾಗಿ ಒಬ್ಬನು ವಾದಿಸುವಂತೆ.


ಆತ ದುರುಳರನು ಗುರುತು ಹಚ್ಚುತ್ತಾನೆ ನೆರವಿಲ್ಲದೆ ಅಕ್ರಮವನು ಕಂಡುಹಿಡಿಯುತ್ತಾನೆ.


ಜ್ಞಾನದ ರಹಸ್ಯಗಳನು ದೇವರೇ ನಿನಗೆ ತಿಳಿಸಲಿ ಸುಜ್ಞಾನ ಬಹುಮುಖವಾದುದೆಂದು ಆತನೇ ತೋರಿಸಲಿ ನಿನ್ನ ದೋಷಗಳನ್ನೆಲ್ಲ ಆತ ಲಕ್ಷಿಸಿಲ್ಲ ಎಂಬುದು ನಿನಗೆ ತಿಳಿದಿರಲಿ.


ವಿಚಾರಣೆ ಇಲ್ಲದೆಯೆ ಪರಾಕ್ರಮಿಗಳನು ಸದೆಬಡಿಯುವನು ಅವರ ಸ್ಥಾನದಲ್ಲಿ ಇತರರನ್ನು ನಿಲ್ಲಿಸಬಲ್ಲನು.


ಯಾರಾದರೂ ಆತನೊಡನೆ ವಾದಿಸಲು ಇಷ್ಟಪಟ್ಟರೂ ಆತನ ಸಹಸ್ರ ಪ್ರಶ್ನೆಗಳೊಂದಕ್ಕೂ ಉತ್ತರಿಸಲಾಗದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು