Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:25 - ಕನ್ನಡ ಸತ್ಯವೇದವು C.L. Bible (BSI)

25 ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

25 ಈ ಪ್ರಕಾರ ಆತನು ಅವರ ಕಾರ್ಯಗಳನ್ನು ಲಕ್ಷಿಸಿ ರಾತ್ರಿಯಲ್ಲಿ ಅವರನ್ನು ಕೆಡವಿ ನಾಶಕ್ಕೆ ಗುರಿಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಹೀಗೆ ಆತನು ಅವರ ಕಾರ್ಯಗಳನ್ನು ಲಕ್ಷಿಸಿ, ರಾತ್ರಿಯಲ್ಲಿ ಅವರನ್ನು ಸೋಲಿಸಿ ನಾಶಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಏಕೆಂದರೆ, ದೇವರು ಅಂಥವರ ದುಷ್ಕಾರ್ಯಗಳನ್ನು ತಿಳಿದಿದ್ದಾರೆ. ರಾತ್ರಿಯಲ್ಲಿ ಅವರನ್ನು ಕೆಡವಿ ದಂಡನೆಗೆ ಗುರಿಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:25
13 ತಿಳಿವುಗಳ ಹೋಲಿಕೆ  

ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.


ಇದಲ್ಲದೆ, ಮೃತರಾಗಿದ್ದ ಹಿರಿಯಕಿರಿಯರೆಲ್ಲರೂ ಸಿಂಹಾಸನದ ಸಾನ್ನಿಧ್ಯದಲ್ಲಿ ನಿಂತಿರುವುದನ್ನು ಕಂಡೆ. ಆಗ ಪುಸ್ತಕಗಳನ್ನು ತೆರೆಯಲಾಯಿತು. ಅನಂತರ ಮತ್ತೊಂದು ಪುಸ್ತಕವನ್ನು ತೆರೆಯಲಾಯಿತು. ಅದು ಜೀವಬಾಧ್ಯರ ಪಟ್ಟಿಯುಳ್ಳ ಪುಸ್ತಕ. ಆ ಪುಸ್ತಕದಲ್ಲಿ ಬರೆದಿದ್ದ ಪ್ರಕಾರ ಅವರವರ ಕೃತ್ಯಗಳಿಗೆ ತಕ್ಕಂತೆ ಮೃತರಿಗೆ ನ್ಯಾಯತೀರ್ಪು ಕೊಡಲಾಯಿತು.


ರಾತ್ರಿಯಲ್ಲಿ ಕಳ್ಳನು ಬರುವ ಹಾಗೆ ಪ್ರಭುವಿನ ದಿನವು ಬರುವುದೆಂದು ನೀವು ಚೆನ್ನಾಗಿ ಬಲ್ಲಿರಿ.


ಯಕೋಬನ ಮಹಿಮಾನ್ವಿತ ಸರ್ವೇಶ್ವರ ಆಣೆಯಿಟ್ಟು ಹೇಳುವುದೇನೆಂದರೆ: “ಖಂಡಿತವಾಗಿ ಅವರ ದುಷ್ಕೃತ್ಯಗಳಲ್ಲಿ ಯಾವುದನ್ನೂ ಎಂದಿಗೂ ನಾನು ಮರೆಯಲಾರೆ.


ಆದರೆ ಅವರ ದುಷ್ಕೃತ್ಯಗಳೆಲ್ಲ ಸರ್ವೇಶ್ವರಸ್ವಾಮಿಯ ಜ್ಞಾಪಕದಲ್ಲಿ ಇರುತ್ತವೆ ಎಂಬುದನ್ನು ಅವರು ಮನದಟ್ಟುಮಾಡಿಕೊಂಡಿಲ್ಲ. ಅವರ ನೀಚಕೃತ್ಯಗಳು ಅವರನ್ನು ಆವರಿಸಿಕೊಂಡಿವೆ; ನನ್ನ ಕಣ್ಮುಂದೆಯೇ ಇವೆ.


“ಅವರ ಕೃತ್ಯಗಳೂ ಆಲೋಚನೆಗಳೂ ನನಗೆ ತಿಳಿದಿವೆ. ಸಮಸ್ತ ರಾಷ್ಟ್ರಗಳನ್ನೂ ಸಕಲ ಭಾಷೆಯವರನ್ನೂ ಒಟ್ಟಿಗೆ ಬರಮಾಡುವೆನು. ಅವರು ಬಂದು ನನ್ನ ಮಹಿಮೆಯ ಪ್ರಕಾಶವನ್ನು ಕಾಣುವರು.


ಮೋವಾಬನ್ನು ಕುರಿತ ದೈವೋಕ್ತಿ ಇದು : “ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಆರ್ ಪಟ್ಟಣವು. ಅಳಿದು ಹಾಳಾಯಿತು ಒಂದೇ ರಾತ್ರಿಯೊಳು, ಮೋವಾಬಿನ ಕೀರ್ ಪಟ್ಟಣವು.


ಅವರೆಲ್ಲರ ಹೃದಯಗಳನು ನಿರ್ಮಿಸಿದಾತನವನು I ಅವರವರ ಕೃತ್ಯಗಳನು ಪರೀಕ್ಷಿಸುತಿಹನು II


ದೇವರು ನರನಿಗೆ ಅವನ ಕೃತ್ಯಗಳಿಗೆ ತಕ್ಕಂತೆ ಪ್ರತಿಫಲವನ್ನೀಯುತ್ತಾನೆ ಪ್ರತಿಯೊಬ್ಬನು ಅವನವನ ಕರ್ಮಕ್ಕೆ ತಕ್ಕಂತೆ ಅನುಭವಿಸಮಾಡುತ್ತಾನೆ.


ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ದುರ್ಜನರು ನೆಲಕ್ಕುರುಳಿ ನಿರ್ಮೂಲರಾಗುವರು; ಸಜ್ಜನರ ತಲೆಮಾರು ಸ್ಥಿರವಾಗಿ ನಿಲ್ಲುವುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು