Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:29 - ಕನ್ನಡ ಸತ್ಯವೇದವು C.L. Bible (BSI)

29 ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ, ಮನುಷ್ಯನಿಗಾಗಲಿ ಮಾಡುವುದೆಲ್ಲಾ ಹೀಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

29 ಆತನು ನೆಮ್ಮದಿಯನ್ನು ದಯಪಾಲಿಸಿದರೆ ತಪ್ಪುಹೊರಿಸುವವರು ಯಾರು? ವಿಮುಖನಾದರೆ ಆತನ ದರ್ಶನ ಮಾಡುವವರಾರು? ಆತನು ಜನಾಂಗಕ್ಕಾಗಲಿ ಮನುಷ್ಯನಿಗಾಗಲಿ ಮಾಡುವದೆಲ್ಲಾ ಹೀಗೆಯೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಆದರೆ ದೇವರು ಬಡಜನರಿಗೆ ಸಹಾಯಮಾಡದಿರಲು ನಿರ್ಧರಿಸಿದರೆ, ಆತನನ್ನು ದೋಷಿಯೆಂದು ತೀರ್ಪುಮಾಡುವವನು ಯಾರು? ದೇವರು ತನ್ನ ಮುಖವನ್ನು ಅವರಿಗೆ ಮರೆಮಾಡಿಕೊಂಡರೆ ಆತನನ್ನು ನೋಡಬಲ್ಲವರು ಯಾರು? ಮನುಷ್ಯರನ್ನೂ ಜನಾಂಗಗಳನ್ನೂ ಆಳುವವನು ದೇವರೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಆದರೆ ದೇವರು ಸುಮ್ಮನಿದ್ದರೆ ಅವರ ಮೇಲೆ, ತಪ್ಪುಹೊರಿಸುವವರು ಯಾರು? ದೇವರು ತಮ್ಮ ಮುಖವನ್ನು ವ್ಯಕ್ತಿಗಾಗಲಿ, ದೇಶಕ್ಕಾಗಲಿ ಮರೆಮಾಡಿದರೆ, ದೇವದರ್ಶನ ಪಡೆಯಬಲ್ಲವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:29
26 ತಿಳಿವುಗಳ ಹೋಲಿಕೆ  

ನಿನ್ನ ನೆಚ್ಚಿದವರಿಗೆ, ಸ್ಥಿರಚಿತ್ತವುಳ್ಳವರಿಗೆ, ಚಿರಶಾಂತಿಯ ನೀ ನೀಡುವೆ.


ಆತನದು ಏಕಚಿತ್ತ; ಅದನು ಬದಲಾಯಿಸಲಸಾಧ್ಯ ಆತ ಬಯಸಿದ್ದೆ ಸಿದ್ಧಿಯಾದಕಾರ್ಯ.


ನಾನು ಶಾಂತಿಸಮಾಧಾನವನ್ನು ನಿಮಗೆ ಬಿಟ್ಟುಹೋಗುತ್ತೇನೆ; ನನ್ನ ಶಾಂತಿಸಮಾಧಾನವನ್ನು ನಿಮಗೆ ಕೊಡುತ್ತೇನೆ. ಈ ಲೋಕವು ಕೊಡುವ ರೀತಿಯಲ್ಲಿ ನಾನದನ್ನು ನಿಮಗೆ ಕೊಡುವುದಿಲ್ಲ. ನೀವು ಹೃದಯದಲ್ಲಿ ಕಳವಳಗೊಳ್ಳದಿರಿ, ಭಯಪಡಬೇಡಿ.


ಆ ಸತ್ಯಸಂಧತೆಯಿಂದ ಚಿರಶಾಂತಿ ಮತ್ತು ಸುಭದ್ರತೆ ಪರಿಣಮಿಸುವುದು.


ವಿಮುಖನಾಗಬೇಡ ಪ್ರಭು, ಕೋಪದಿಂದೆನ್ನ ತಳ್ಳಬೇಡಯ್ಯಾ I ರಕ್ಷಕದೇವಾ, ಎನಗೆ ಸಹಾಯಕಾ, ದಾಸನ ಕೈಬಿಡಬೇಡಯ್ಯಾ II


ಆಗ ಮನುಷ್ಯಗ್ರಹಿಕೆಗೂ ಮೀರಿದ ದೈವಶಾಂತಿಯು ನಿಮ್ಮ ಹೃನ್ಮನಗಳನ್ನು ಕ್ರಿಸ್ತೇಸುವಿನ ಅನ್ಯೋನ್ಯತೆಯಲ್ಲಿ ಸುರಕ್ಷಿತವಾಗಿ ಕಾಪಾಡುವುದು.


“ಆದರೆ ಯಾವುದಾದರು ರಾಷ್ಟ್ರ ಅಥವಾ ರಾಜ್ಯ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನ ಅಡಿಯಾಳಾಗಲು, ಅದರ ಅರಸನ ನೊಗಕ್ಕೆ ಹೆಗಲುಕೊಡಲು ಒಪ್ಪದೆಹೋದರೆ, ಆ ರಾಷ್ಟ್ರವನ್ನು ನಾನು ಖಡ್ಗ-ಕ್ಷಾಮ-ವ್ಯಾಧಿಗಳಿಂದ ದಂಡಿಸುತ್ತಾ ಬರುವೆನು. ಕೊನೆಗೆ ಆ ಅರಸನ ಕೈಯಿಂದಲೆ ಅದನ್ನು ನಿರ್ಮೂಲಮಾಡಿಸುವೆನು. ಇದು ಸರ್ವೇಶ್ವರನಾದ ನನ್ನ ನುಡಿ.


ಸದುತ್ತರ ಪಾಲಿಸು ಪ್ರಭೂ, ಸೊರಗಿದೆ ಎನ್ನ ಚೇತನ I ನೀ ವಿಮುಖನಾದರೆ ನಾ ನರಕಹೊಕ್ಕವರಿಗೆ ಸಮಾನ II


ಪ್ರಭು, ನಿನ್ನ ಕೃಪೆ ನನ್ನ ಗುಡ್ಡಕ್ಕೆ ಅಡಿಬಂಡೆ I ನಿನ್ನ ಮುಖ ಮರೆಯಾದುದೆ ನಾ ಕಳವಳಗೊಂಡೆ II


ಎಷ್ಟುಕಾಲ ಪ್ರಭು, ನೀ ಎನ್ನ ಪೂರ್ತಿ ಮರೆತಿರುವೆ? I ಇನ್ನೆಷ್ಟರ ತನಕ ನೀನೆನಗೆ ವಿಮುಖನಾಗಿರುವೆ? II


ಆತ ಕೆಡವಿದ್ದನ್ನು ಯಾರಿಂದಲೂ ಕಟ್ಟಲಾಗದು ಆತ ಸೆರೆಹಿಡಿದವರನ್ನು ಯಾರಿಂದಲೂ ಬಿಡಿಸಲಾಗದು.


ಸರ್ವೇಶ್ವರನ ಅನುಗ್ರಹದಿಂದ ಸುತ್ತಮುತ್ತ ಇದ್ದ ವೈರಿಗಳ ಭಯ ನಿಂತುಹೋಯಿತು. ದಾವೀದನು ನೆಮ್ಮದಿಯಿಂದ ಅರಮನೆಯಲ್ಲಿ ವಾಸಿಸುತ್ತಿದ್ದನು.


ಬಡವರ ಗೋಳಾಟ ದೇವರಿಗೆ ಮುಟ್ಟುವಂತೆ ಮಾಡಿದ್ದರು ದಿಕ್ಕಿಲ್ಲದವರ ಗೋಗರೆತ ಆತನ ಕಿವಿಗೆ ಬೀಳುವಂತೆ ಮಾಡಿದ್ದರು.


ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.


ನೆಮ್ಮದಿ ನೀಡುವೆ ಅವನು ಸಂಕಟದಲಿರುವಾಗ I ದುರುಳರಿಗೆ ನೀನು ಗುಂಡಿಯನು ತೋಡುವಾಗ II


ಅದಕ್ಕೆ ಸರ್ವೇಶ್ವರ, “ನನ್ನ ಪ್ರಸನ್ನತೆ ನಿನ್ನ ಜೊತೆಯಲ್ಲಿ ಬರುವುದು. ನಾನು ನಿನಗೆ ವಿಶ್ರಾಂತಿ ನೀಡುವೆನು,” ಎಂದರು.


ಪೂರ್ವಕಾಲದಲ್ಲಿ ನಾನು ನನ್ನ ಜನರಿಗೆ ನ್ಯಾಯಸ್ಥಾಪಕರನ್ನು ನೇಮಿಸಿದೆ. ಅಲ್ಲಿಂದೀಚೆಗೆ ಇಸ್ರಯೇಲರು ಶೋಷಣೆಗೆ ಗುರಿಯಾದರು. ಆದರೆ ಇನ್ನು ಮೇಲೆ ಆಗದು. ನೀನು ಶತ್ರುಭಯವಿಲ್ಲದೆ ಸುಖದಿಂದಿರುವಂತೆ ಮಾಡುವೆನು. ಅದು ಮಾತ್ರ ಅಲ್ಲ. ಸರ್ವೇಶ್ವರನಾದ ನಾನು ನಿನಗಾಗಿ ಒಂದು ಮನೆತನವನ್ನು ಕಟ್ಟುವೆನೆಂದು ಮಾತು ಕೊಡುತ್ತೇನೆ.


ಹೀಗೆ ದೇವ ಅನುಗ್ರಹದಿಂದ ಸುತ್ತಮುತ್ತಲಿನ ವೈರಿಗಳ ಭಯ ತಪ್ಪಿ, ಯೆಹೋಷಾಫಾಟನ ರಾಜ್ಯಕ್ಕೆ ಸಮಾಧಾನ ಉಂಟಾಯಿತು.


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ನಾನೇ ನನ್ನ ಕುರಿಗಳನ್ನು ಮೇಯಿಸಿ ಹಾಯಾಗಿ ಮಲಗುವಂತೆ ಮಾಡುವೆನು; ಇದು ಸರ್ವೇಶ್ವರನಾದ ದೇವರ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು