Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:30 - ಕನ್ನಡ ಸತ್ಯವೇದವು C.L. Bible (BSI)

30 ಭಕ್ತಿಹೀನನು ಜನರನು ಆಳಬಾರದು ಅಂಥವನು ಜನರಿಗೆ ಉರುಲಾಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬುದೇ ಆತನ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

30 ಭ್ರಷ್ಟನು ಆಳಬಾರದು, ಯಾರೂ ಜನರಿಗೆ ಉರುಲಾಗಕೂಡದು ಎಂಬದೇ ಆತನ ಉದ್ದೇಶ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ದೈವಹೀನನಾದ ರಾಜನು ಜನರನ್ನು ನಾಶನಕ್ಕೆ ನಡೆಸುವುದಾದರೆ ದೇವರು ಅವನನ್ನು ಪದಚ್ಯುತಿಗೊಳಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಭಕ್ತಿಹೀನನು ಆಳಬಾರದು, ಯಾರೂ ಜನರಿಗೆ ಉರುಲಾಗಬಾರದು, ಎಂಬುದೇ ಇದರಲ್ಲಿ ದೇವರ ಉದ್ದೇಶ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:30
17 ತಿಳಿವುಗಳ ಹೋಲಿಕೆ  

“ಒಮ್ರಿ ಅರಸನ ಆಜ್ಞೆಗಳನ್ನೂ ಅಹಾಬ್ ಮನೆತನದ ದುರಾಚಾರಗಳನ್ನೂ ಅವರ ಸಂಪ್ರದಾಯಗಳನ್ನೂ ಅನುಸರಿಸುತ್ತಾ ಬಂದಿದ್ದೀರಿ. ಆದಕಾರಣ ನಿಮ್ಮನ್ನು ವಿನಾಶಗೊಳಿಸುವೆನು; ನಿಮ್ಮ ಜನರನ್ನು ಅಪಹಾಸ್ಯಕ್ಕೆ ಈಡುಮಾಡುವೆನು. ನೀವು ಜನಾಂಗಗಳ ನಿಂದೆಗೆ ಗುರಿಯಾಗುವಿರಿ.”


ಇಷ್ಟವಿಲ್ಲದೆ ಸಿಟ್ಟಿನಿಂದ ನಿನಗೆ ರಾಜನನ್ನು ಕೊಟ್ಟೆ. ಈಗ ಕಡುಕೋಪದಿಂದ ಆ ರಾಜರನ್ನು ತೆಗೆದುಬಿಡುತ್ತೇನೆ.


ದುರಾಚಾರಗಳನ್ನು ಅನುಸರಿಸಲು ನಿರ್ಧರಿಸಿದ ಕಾರಣ, ಎಫ್ರಯಿಮ್ ನ್ಯಾಯತೀರ್ಪಿಗೆ ಗುರಿಯಾಗಿದೆ; ಹಿಂಸೆಗೀಡಾಗಿದೆ; ನುಚ್ಚುನೂರಾಗಿದೆ.


ದೇವರ ಕಣ್ಣು ಮನುಷ್ಯನ ಮಾರ್ಗಗಳ ಮೇಲೆ ಅವನ ಹೆಜ್ಜೆಗಳೆಲ್ಲ ಗೋಚರವಾಗಿವೆ ಆತನಿಗೆ.


ಆದರೆ ಇಸ್ರಯೇಲರು ಅವರ ಮಾತನ್ನು ಕೇಳದೆ, ಮನಸ್ಸೆಯಿಂದ ಪ್ರೇರಿತರಾಗಿ, ತಮ್ಮ ಮುಂದೆಯೇ ಸರ್ವೇಶ್ವರನಿಂದ ಸಂಹೃತರಾದ ಅನ್ಯಜನಾಂಗಗಳಿಗಿಂತಲೂ ದುಷ್ಟರಾದರು.


ಯುದ್ಧಾಯುಧಗಳಿಗಿಂತ ಜ್ಞಾನವೇ ಉತ್ತಮ; ಆದರೆ ಒಬ್ಬನೇ ಒಬ್ಬ ಪಾಪಿ ಸಾಕು ಪುಣ್ಯಕೋಟೆಯನ್ನು ಹಾಳುಮಾಡಲು!


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ದುಷ್ಟನ ಜಯಘೋಷ ಅಲ್ಪಕಾಲದ್ದು ಭ್ರಷ್ಟನ ಉಲ್ಲಾಸ ಕ್ಷಣಿಕವಾದದ್ದು.


ನ್ಯಾಯವನ್ನು ದ್ವೇಷಿಸುವವನು, ಶಿಸ್ತನು ಪಾಲಿಸುವನೋ? ಸತ್ಯಸ್ವರೂಪಿ, ಸರ್ವಶಕ್ತ ಆದ ದೇವರನು ಕೆಟ್ಟವನೆನ್ನುವಿಯೋ?


ವ್ಯಕ್ತಿಯಾಗಿರಲಿ, ರಾಷ್ಟ್ರವಾಗಿರಲಿ, ಯಾರಾಗಿದ್ದರೇನು? ದೇವರು ಸುಮ್ಮನಿದ್ದರೆ ತಪ್ಪುಹೊರಿಸುವವರಾರು? ವಿಮುಖನಾದರೆ ಆತನ ದರ್ಶನ ಪಡೆಯಬಲ್ಲವರಾರು?


ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು