Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:32 - ಕನ್ನಡ ಸತ್ಯವೇದವು C.L. Bible (BSI)

32 ಕಾಣದಿರುವ ಮಾರ್ಗವನ್ನು ತೋರೆನಗೆ ತಪ್ಪುಮಾಡಿದ್ದರೂ ಮತ್ತೆ ಮಾಡೆ’ ಎಂದು ಹೇಳಿದ್ದಾದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನಾನು ಕಾಣದಿರುವುದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮೇಲೆ ಮಾಡುವುದಿಲ್ಲ’ ಎಂದು ಹೇಳುವುದಕ್ಕಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ನಾನು ಕಾಣದಿರುವದನ್ನು ನೀನೇ ಸೂಚಿಸು; ನಾನು ಒಂದು ವೇಳೆ ಅನ್ಯಾಯವನ್ನು ಮಾಡಿದ್ದರೂ ಇನ್ನು ಮಾಡುವದಿಲ್ಲ ಎಂದು ಹೇಳುವದಕ್ಕಾದೀತೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದೇವರೇ, ನೀನು ನನಗೆ ಅಗೋಚರವಾಗಿದ್ದರೂ ನೀತಿಮಾರ್ಗವನ್ನು ಬೋಧಿಸು, ನಾನು ತಪ್ಪು ಮಾಡಿದ್ದರೆ ಅದನ್ನು ಮತ್ತೆ ಮಾಡುವುದಿಲ್ಲ’ ಎಂದು ಹೇಳಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರೇ, ನಾನು ಕಾಣದಿರುವುದನ್ನು ನನಗೆ ಬೋಧಿಸಿರಿ. ನಾನು ತಪ್ಪುಮಾಡಿದ್ದರೂ, ಇನ್ನು ಮೇಲೆ ಅದನ್ನು ಮಾಡುವುದಿಲ್ಲ,’ ಎಂದು ಹೇಳಿದ್ದರೆ ಸರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:32
18 ತಿಳಿವುಗಳ ಹೋಲಿಕೆ  

ಪ್ರಭು ಇಂತೆಂದನು : “ಕಲಿಸುವೆನು, ನಾ ನಿನಗೆ ತಿಳಿಸುವೆನು ಸನ್ಮಾರ್ಗವನು I ಕಟಾಕ್ಷಿಸಿ ನಿನ್ನನು, ಈವೆನು ಸದಾಲೋಚನೆಯನು II


ತನ್ನ ತಪ್ಪನು ತಾನರಿತುಕೊಳ್ಳುವವನಾರಯ್ಯಾ I ಗುಪ್ತವಾದ ಪಾಪಗಳಿಂದೆನ್ನ ಮುಕ್ತಗೊಳಿಸಯ್ಯಾ II


ಪಾಪಗಳನ್ನು ಮುಚ್ಚಿಟ್ಟುಕೊಳ್ಳುವವನಿಗೆ ಮುಕ್ತಿ ದೊರಕದು; ಅವುಗಳನ್ನು ಒಪ್ಪಿಕೊಂಡು ಬಿಟ್ಟರೆ ಕರುಣೆ ದೊರಕುವುದು.


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.


ನಾನು ದೇವರಿಗೆ ಇಂತೆನ್ನುವೆ: ‘ನನ್ನನ್ನು ನಿರ್ಣಯಿಸಬೇಡ ಅಪರಾಧಿಯೆಂದು ನನ್ನ ಮೇಲೆ ನಿನಗಿರುವ ಆಪಾದನೆಯನು ತಿಳಿಸಿಬಿಡು.


ಆದ್ದರಿಂದ ನೀವು ನಿಮ್ಮ ಹಿಂದಿನ ನಡತೆಯನ್ನು ಅನುಸರಿಸದೆ ಹಳೆಯ ಸ್ವಭಾವವನ್ನು ಕಿತ್ತೊಗೆಯಿರಿ; ಅದು ಕಾಮಾಭಿಲಾಷೆಯಿಂದ ಕಲುಷಿತವಾಗಿದೆ.


ಆಗ ಅವನು ಜನರ ಮುಂದೆ ಈ ಪರಿ ಹಾಡುವನು: ‘ಪಾಪ ಮಾಡಿದೆ; ಸನ್ಮಾರ್ಗ ಬಿಟ್ಟು ನಡೆದೆ ಆದರೂ ದಂಡಿಸಲಿಲ್ಲ ದೇವರು ನನ್ನ ಪಾಪಕ್ಕೆ ತಕ್ಕಂತೆ.


ಅಂಥ ಮನುಷ್ಯನು ದೇವರಿಗೆ: ‘ಪ್ರಾಯಶ್ಚಿತ್ತ ಮಾಡಿರುವೆ, ಇನ್ನು ಮುಂದೆ ಪಾಪಮಾಡೆ.


ನುಡಿವುದು ಎಫ್ರಯಿಮ್, “ನನಗಿನ್ನು ಬೇಡ ವಿಗ್ರಹಗಳ ಗೊಡವೆ". ಅದಕ್ಕೆ ಒಲಿದು ಕಟಾಕ್ಷಿಸುವವನು ನಾನೇ ಅದಕ್ಕೆ ಹಚ್ಚಹಸಿರಾದ ತುರಾಯಿಮರದಂತಿರುವೆ ಅದಕ್ಕೆ ಫಲವನ್ನು ನೀಡುವವನು ನಾನೇ.”


ಯೆಹೂದನು ಅವುಗಳ ಗುರುತುಹಚ್ಚಿದನು. “ನಾನು ನನ್ನ ಮಗ ಶೇಲಹನನ್ನು ಆಕೆಗೆ ಮದುವೆ ಮಾಡದೆಹೋದೆ. ಈ ಕಾರಣ ನನಗಿಂತ ಆಕೆಯೇ ನೀತಿವಂತಳು,” ಎಂದುಕೊಂಡನು. ಇದಾದ ಬಳಿಕ ಅವನು ಆಕೆಯೊಡನೆ ಸಂಸರ್ಗವಿಲ್ಲದೆ ಇದ್ದನು.


ಅದಕ್ಕೆ ಬಿಳಾಮನು, “ನಾನು ಪಾಪಮಾಡಿದೆ, ನೀನೆ ನನಗೆದುರಾಗಿ ದಾರಿಯಲ್ಲಿ ನಿಂತಿರುವುದು ನನಗೆ ತಿಳಿಯದೆ ಹೋಯಿತು. ನಾನು ಮಾಡುವುದು ನಿನಗೆ ಕೆಟ್ಟದ್ದಾಗಿ ತೋರಿದರೆ ಹಿಂದಕ್ಕೆ ತಿರುಗಿಕೊಳ್ಳುತ್ತೇನೆ,” ಎಂದನು.


ಕಾಪಾಡೆನ್ನನು, ಬೇಕು ಬೇಕೆಂದು ಪಾಪಮಾಡದಂತೆ I ಕಾದಿಡು, ಅಂಥ ಪಾಪಕೆ ನಾ ದಾಸನಾಗದಂತೆ I ನಿರ್ದೋಷಿಯಾಗುವೆನು, ಆ ದ್ರೋಹಕ್ಕೊಳಗಾಗದಂತೆ II


ನಾನು ಕಿವಿಗೊಟ್ಟು ಕೇಳಿದೆ. ಅವರು ಸತ್ಯವಾದುದನ್ನು ನುಡಿಯುತ್ತಿರಲಿಲ್ಲ. ಯಾವನೂ ತನ್ನ ಅಕ್ರಮಕ್ಕಾಗಿ ಪಶ್ಚಾತ್ತಾಪಪಟ್ಟು, ‘ಅಯ್ಯೋ ನಾನು ಎಂಥ ಕೆಲಸ ಮಾಡಿಬಿಟ್ಟೆ !’ ಎಂದುಕೊಳ್ಳುತ್ತಿರಲಿಲ್ಲ. ಯುದ್ಧದಲ್ಲಿ ರಭಸವಾಗಿ ಓಡುವ ಕುದುರೆಗಳಂತೆ ಪ್ರತಿಯೊಬ್ಬನೂ ತನ್ನ ತನ್ನ ಮಾರ್ಗದಲ್ಲೆ ದೌಡಾಯಿಸುತ್ತಿದ್ದಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು