Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:5 - ಕನ್ನಡ ಸತ್ಯವೇದವು C.L. Bible (BSI)

5 ಇಂತಿದೆ ಯೋಬನ ವಾದ - ‘ನಾನು ಸತ್ಯವಂತ ನನಗೆ ದೇವರಿಂದ ನ್ಯಾಯ ದೊರೆತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಯೋಬನು, ‘ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಯೋಬನು - ನಾನು ನೀತಿವಂತನು, ದೇವರು ನನ್ನ ನ್ಯಾಯವನ್ನು ತಪ್ಪಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಬನು ಹೇಳುವುದೇನೆಂದರೆ, ‘ನಾನು ನಿರಪರಾಧಿ. ದೇವರು ನನಗೆ ನ್ಯಾಯದೊರಕಿಸುತ್ತಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ಏಕೆಂದರೆ ಯೋಬನು, ‘ನಾನು ನಿರ್ದೋಷಿಯಾಗಿದ್ದೇನೆ. ಆದರೆ ದೇವರು ನನಗೆ ನ್ಯಾಯವನ್ನು ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:5
14 ತಿಳಿವುಗಳ ಹೋಲಿಕೆ  

‘ನಾನು ಪರಿಶುದ್ಧನು, ನಿರ್ದೋಷಿ ನಾನು ನಿರ್ಮಲನು, ನಿರಪರಾಧಿ.


“ನನಗೆ ನ್ಯಾಯ ದೊರಕಿಸದ ಜೀವಂತ ದೇವರಾಣೆ, ನನ್ನ ಮನಸ್ಸನು ಕಹಿಯಾಗಿಸಿದ ಸರ್ವಶಕ್ತನಾಣೆ.


ಯೋಬನು ತಾನು ಸತ್ಯವಂತನೆಂದು ಸಾಧಿಸಿದ್ದನು. ಇದನ್ನು ಕೇಳಿದ ಅವನ ಮೂವರು ಮಿತ್ರರು ವಾದಿಸುವುದನ್ನು ನಿಲ್ಲಿಸಿಬಿಟ್ಟರು.


ಧರ್ಮವನ್ನು ನಾನು ಧರಿಸಿಕೊಂಡೆ; ಅದು ನನಗೆ ಅಂಬರವಾಗಿತ್ತು ನ್ಯಾಯನೀತಿ ನನಗೆ ನಿಲುವಂಗಿಯೂ ಪೇಟವೂ ಆಗಿತ್ತು.


ಆದರೂ ನಾನು ಹಿಂಸಾಚಾರಕ್ಕೆ ಕೈಹಾಕಲಿಲ್ಲ ನಾನು ಮಾಡುವ ಪ್ರಾರ್ಥನೆ ನಿರ್ಮಲ.


ನೀನು ಹೇಳುವುದೇ ಸತ್ಯವೆಂದು ವಾದಿಸುತ್ತಿರುವೆ ದೇವರ ದೃಷ್ಟಿಯಲ್ಲಿ ನೀನು ಪರಿಶುದ್ಧನು ಎನ್ನುತ್ತಿರುವೆ.


ನಾನು ಅಪರಾಧಿಯಲ್ಲವೆಂದು ತಿಳಿದಿದೆಯಲ್ಲವೆ? ನಿನ್ನ ಕೈಯಿಂದ ಬಿಡಿಸಬಲ್ಲವರಾರೂ ಇಲ್ಲವಲ್ಲವೆ?


ನನ್ನನ್ನು ಬಿರುಗಾಳಿಯಿಂದ ಬಡಿಯುತ್ತಾನೆ ಕಾರಣವಿಲ್ಲದೆ ಗಾಯದ ಮೇಲೆ ಗಾಯ ಮಾಡುತ್ತಾನೆ.


ದಯಮಾಡಿ ಮತ್ತೆ ಆಲೋಚಿಸಿರಿ ಅನ್ಯಾಯವಾಗದಂತೆ ಮರಳಿ ವಿಮರ್ಶಿಸಿರಿ ನನ್ನ ಸತ್ಯತೆ ತಿಳಿಯುವಂತೆ.


ಇಗೋ ನನ್ನ ಮೊಕದ್ದಮೆಯನ್ನು ಸಿದ್ಧಗೊಳಿಸಲಾಗಿದೆ ನಾನು ನಿರ್ದೋಷಿಯೆಂಬ ನಿರ್ಣಯ ನನಗೆ ಗೊತ್ತೇ ಇದೆ.


ಸರಿಯಾದುದನ್ನೇ ಆಯ್ದುಕೊಳ್ಳೋಣ ಒಳಿತಾದುದನ್ನು ನಮ್ಮ ನಮ್ಮಲ್ಲೇ ನಿಶ್ಚಯಿಸಿಕೊಳ್ಳೋಣ.


ಹೀಗಿರಲು ಎಲೈ ಯಕೋಬ್ಯರೇ, ಇಸ್ರಯೇಲರೇ, ‘ಮರೆಯಾಗಿದೆ ಪ್ರಭುವಿಗೆ ನನ್ನ ಕುಂದುಕೊರತೆ, ನ್ಯಾಯನೀತಿ ದೊರಕದಿದೆ ನನಗೆ ಇದರತ್ತ ದೇವರ ಲಕ್ಷ್ಯಬೀಳದಿದೆ’ ಎನ್ನುತ್ತಿರುವಿರಿ ಏಕೆ?


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


‘ಇದೋ ಹಿಂಸಾಚಾರ’ ಎಂದು ನಾನು ಕೂಗಿಕೊಂಡರೂ ಕೇಳುವವರಿಲ್ಲ ನಾನು ಮೊರೆಯಿಟ್ಟರೂ ನನಗೆ ನ್ಯಾಯ ದೊರಕುವುದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು