Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 34:8 - ಕನ್ನಡ ಸತ್ಯವೇದವು C.L. Bible (BSI)

8 ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುತ್ತಾನೆ, ಕೆಟ್ಟವರ ಸಂಗಡ ನಡೆದಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

8 ಅವನು ಅಧರ್ಮಿಗಳ ಜೊತೆಯಲ್ಲಿ ಸಂಚರಿಸುವವನು; ಕೆಟ್ಟವರ ಸಂಗಡ ನಡೆದಾಡುವವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಯೋಬನು ದುಷ್ಟರೊಂದಿಗೆ ಸ್ನೇಹದಿಂದಿರುವನು; ಕೆಟ್ಟವರ ಸಂಗಡ ನಡೆದಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಯೋಬನು ದುಷ್ಕರ್ಮಿಗಳೊಂದಿಗೆ ಸಹವಾಸ ಇಟ್ಟುಕೊಳ್ಳುತ್ತಾ ದುಷ್ಟಜನರ ಸಂಗಡ ನಡೆದಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 34:8
14 ತಿಳಿವುಗಳ ಹೋಲಿಕೆ  

ದುರ್ಜನರ ಆಲೋಚನೆಯಂತೆ ನಡೆಯದೆ I ಪಾಪಾತ್ಮರ ಪಥದಲಿ ಕಾಲೂರದೆ I ಧರ್ಮನಿಂದಕರ ಕೂಟದಲಿ ಕೂರದೆ II


ಮೋಸಹೋಗದಿರಿ. ಏಕೆಂದರೆ, “ದುರ್ಜನರ ಸಂಗ ಸದಾಚಾರದ ಭಂಗ,”


ಸುಜ್ಞಾನಿಗಳ ಸಹವಾಸದಿಂದ ಜನರು ಸುಜ್ಞಾನಿಗಳಾಗುವರು; ಅಜ್ಞಾನಿಗಳ ಒಡನಾಟದಿಂದ ಸಂಕಟಪಡುವರು.


ಕಂಡೊಡನೆ ಬೇಕು ನಿಮಗೆ ಚೋರರ ಕೂಟ I ಸಾಕಾಗಿಲ್ಲ ನಿಮಗೆ ಜಾರರ ಒಡನಾಟ II


ದುಷ್ಟರ ಕೂಟದಲಿ ನಾ ಕೂರುವವನಲ್ಲ I ಕಪಟಿಗಳ ಸಂಘವನು ನಾ ಸೇರುವವನಲ್ಲ II


ಹೀಗೆ ದುರ್ಮಾರ್ಗದಿಂದ ತಪ್ಪಿಸಿಕೊಳ್ಳುವೆ, ಮೂರ್ಖ ಮಾತುಗಾರನಿಂದ ಮರೆಯಾಗುವೆ.


ಆದರೆ ಮಗನೇ, ಅವರೊಡನೆ ಸೇರಬೇಡ; ನೀನು ಅವರ ಮಾರ್ಗದಲ್ಲಿ ಹೆಜ್ಜೆಯಿಡಬೇಡ.


ದುಷ್ಟರ ಸಂಘದಲ್ಲಿ ಸೇರಬೇಡ, ಕೆಟ್ಟವರ ಹಾದಿಯಲ್ಲಿ ಕಾಲಿಡಬೇಡ.


ನೀನು ಹಿಡಿದಿರುವುದು ಪುರಾತನ ಹಾದಿಯನೇ ದುರ್ಜನರು ನಡೆದುಬಂದ ಆ ಬೀದಿಯನೇ.


ನಿನ್ನ ಪಾಪವೆ ನಿನಗೆ ಮಾತನು ಕಲಿಸಿಕೊಟ್ಟಿದೆ ಕಪಟಿಗಳಾಡುವ ನುಡಿಯನೆ ನೀನು ಆರಿಸಿಕೊಂಡಿರುವೆ.


ನಿನ್ನ ವಾಕ್ ಚಮತ್ಕಾರಕ್ಕೆ ಜನ ಬಾಯಿಮುಚ್ಚಿಕೊಳ್ಳಬೇಕೆ? ನಿನ್ನ ಕುಚೋದ್ಯಕ್ಕೆ ನಿನಗಾಗಬೇಡವೆ ನಾಚಿಕೆ?


ಯೋಬನು ಅವಳಿಗೆ, “ನೀನು ಹುಚ್ಚಳಂತೆ ಮಾತನಾಡುತ್ತಿರುವೆ. ದೇವರಿಂದ ನಾವು ಸುಖಪಡೆಯಬಹುದು, ದುಃಖವನ್ನು ಮಾತ್ರ ಪಡೆಯಬಾರದೊ?” ಎಂದು ಉತ್ತರಕೊಟ್ಟ. ಇಂಥ ಪರಿಸ್ಥಿತಿಯಲ್ಲೂ ಪಾಪದ ಮಾತೊಂದೂ ಅವನ ಬಾಯಿಂದ ಬರಲಿಲ್ಲ.


ದೇವರನು ಪ್ರೀತಿಸಿ ಬಾಳುವುದರಿಂದ ಪ್ರಯೋಜನವಿಲ್ಲವೆಂಬುದು ಇವನ ವಾದ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು