Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:10 - ಕನ್ನಡ ಸತ್ಯವೇದವು C.L. Bible (BSI)

10 ಆದರೆ ‘ನಮ್ಮನ್ನು ಸೃಷ್ಟಿಸಿದ ಕರ್ತನೆಲ್ಲಿ? ಕತ್ತಲಲ್ಲೂ ಕೀರ್ತನೆ ಹಾಡಬಲ್ಲವನೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ‘ನನ್ನ ಸೃಷ್ಟಿ ಕರ್ತನಾದ ದೇವರು ಎಲ್ಲಿ? ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡುತ್ತಾನಲ್ಲಾ ಎಂದು ಯಾರೂ ಹೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ನನ್ನ ಸೃಷ್ಟಿಕರ್ತನಾದ ದೇವರು ಎಲ್ಲಿ, ಆತನು ರಾತ್ರಿಯಲ್ಲಿಯೂ ಕೀರ್ತನೆಗಳನ್ನು ಹಾಡಮಾಡುತ್ತಾನಲ್ಲಾ;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಆ ಕೆಟ್ಟ ಜನರು ಸಹಾಯಕ್ಕಾಗಿ ದೇವರನ್ನು ಕೇಳಿಕೊಳ್ಳುವುದಿಲ್ಲ. ಅವರು, ‘ನನ್ನನ್ನು ಸೃಷ್ಟಿಸಿದ ದೇವರೆಲ್ಲಿ?’ ಎಂದು ಕೇಳುವುದಿಲ್ಲ. ‘ಕುಗ್ಗಿಹೋದವರಿಗೆ ಸಹಾಯಮಾಡುವ ದೇವರೆಲ್ಲಿ?’ ಎಂದು ಕೇಳುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ, ‘ರಾತ್ರಿಯಲ್ಲಿ ಗೀತೆಗಳನ್ನು ಕೊಡುವ ನನ್ನ ಸೃಷ್ಟಿಕರ್ತರಾದ ದೇವರು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:10
21 ತಿಳಿವುಗಳ ಹೋಲಿಕೆ  

ಹಗಲಲಿ ಪ್ರೀತಿಯನುಗ್ರಹಿಸಲಿ ದೇವನೆನಗೆ I ಇರುಳಲಿ ಎನ್ನಯ ಬಾಯಲ್ಲಿರಲಿ ಆತನ ಗೀತೆ I ಪ್ರಾರ್ಥನೆ ಸಲ್ಲಲಿ ಎನ್ನ ಜೀವಾಧಾರ ದೇವಗೆ II


ಸುಮಾರು ನಡುರಾತ್ರಿಯ ಸಮಯ. ಪೌಲ ಮತ್ತು ಸೀಲ ಪ್ರಾರ್ಥನೆಮಾಡುತ್ತಾ ದೇವರಿಗೆ ಸ್ತುತಿಗೀತೆಗಳನ್ನು ಹಾಡುತ್ತಾ ಇದ್ದರು. ಇತರ ಕೈದಿಗಳೆಲ್ಲರೂ ಆಲಿಸುತ್ತಿದ್ದರು.


ಹಿಗ್ಗಲಿ ಭಕ್ತಾದಿಗಳು ದೊರೆತ ವಿಜಯದಲಿ I ಜಯಕಾರ ಮಾಡಲಿ ತಮ್ಮ ತಮ್ಮ ಶಿಬಿರಗಳಲಿ II


ನಿನ್ನ ಧ್ಯಾನ ಬರುತ್ತದೆ ನೆನಪಿಗೆ ರಾತ್ರಿಯೊಳು I ಆಲೋಚನೆ ಸುಳಿಯುತ್ತದೆ ನನ್ನಾಂತರ್ಯದೊಳು I ಈ ತೆರನ ಪ್ರಶ್ನೆಯೇಳುತ್ತದೆನ್ನ ಮನದೊಳು : II


ಆಕಾಶವನು ಹರಡಿ ಭೂಮಿಯನು ಸ್ಥಾಪಿಸಿದಾ ನಿನ್ನ ಸೃಷ್ಟಿಕರ್ತ ಸರ್ವೇಶ್ವರನನು ಮರೆತುಬಿಟ್ಟೆಯಾ? ನಾಶಮಾಡಲು ಹವಣಿಸುವ ಹಿಂಸಕನ ಕ್ರೋಧಕೆ ನೀ ಎಡೆಬಿಡದೆ ದಿನವೆಲ್ಲ ಅಂಜುತ್ತಿರಬೇಕೆ? ಆ ಹಿಂಸಕನ ಕ್ರೋಧವು ಈಗ ಹೋದುದೆಲ್ಲಿಗೆ?


ಆದ್ದರಿಂದ, ದೇವರ ಚಿತ್ತಾನುಸಾರ ಹಿಂಸೆಬಾಧೆಯನ್ನು ಅನುಭವಿಸುವವರು ತಮ್ಮ ಸತ್ಕ್ರಿಯೆಗಳಲ್ಲಿ ನಿರತರಾಗಿರಲಿ. ಸೃಷ್ಟಿಕರ್ತನಿಗೆ ಶರಣಾಗಲಿ. ಆತ ಅವರನ್ನೆಂದಿಗೂ ಕೈಬಿಡನು.


ನಿನ್ನ ಸೃಷ್ಟಿಕರ್ತನೆ ನಿನಗೆ ಪತಿಯು ‘ಸೇನಾಧೀಶ್ವರನಾದ ಸರ್ವೇಶ್ವರ’ ಆತನ ಹೆಸರು. ಇಸ್ರಯೇಲಿನ ಪರಮಪಾವನನೆ ನಿನ್ನ ಉದ್ಧಾರಕನು. ‘ಸರ್ವಲೋಕದ ದೇವ’ ಆತನ ನಾಮಧೇಯ.


ಆದುದರಿಂದ ಯೌವನದಲ್ಲಿ ನಿನ್ನ ಸೃಷ್ಟಿಕರ್ತನನ್ನು ಸ್ಮರಿಸಿಕೊ. ಕಷ್ಟಕರವಾದ ದಿನಗಳು ಬರುವುದಕ್ಕೆ ಮುನ್ನ, ಜೀವನ ಬೇಸರವಾಗಿದೆ ಎಂದು ನೀನು ಹೇಳುವುದಕ್ಕೆ ಮುಂಚೆ ಆತನನ್ನು ಸ್ಮರಿಸು.


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ಜನರು ಘೋರ ಕಷ್ಟಗಳಿಗೆ ಒಳಗಾಗುವರು. ಹಸಿದು ದೇಶದಲ್ಲೆಲ್ಲ ಅಲೆದಾಡುವರು. ಹಸಿವಿನಿಂದ ರೋಷಗೊಂಡು ಅರಸನನ್ನೂ ದೇವರನ್ನೂ ಹಳಿಯುವರು.


ನ್ಯಾಯಯುತ ನಿನ್ನ ವಿಧಿಗೋಸ್ಕರ ವಂದಿಸಲು I ನಾನು ಎಚ್ಚರಗೊಳ್ಳುವೆ ಮಧ್ಯರಾತ್ರಿಯೊಳು II


ನನ್ನ ಸೃಷ್ಟಿಕರ್ತನು ಸತ್ಯಸ್ವರೂಪನೆಂದು ತೋರಲು ನನ್ನ ವಾದಗಳನ್ನು ಸವಿಸ್ತಾರಗೊಳಿಸುವೆನು:


ಮುಖಸ್ತುತಿ ಮಾಡಲು ನನ್ನಿಂದಾಗುವುದಿಲ್ಲ. ಮಾಡಿದರೆ ಸೃಷ್ಟಿಕರ್ತ ನನ್ನನು ಬೇಗ ನಿರ್ಮೂಲಮಾಡಬಲ್ಲ.”


ಅವನು ಆನಂದಿಸುವನೆ ಸರ್ವಶಕ್ತನಲಿ? ಪ್ರಾರ್ಥನೆ ಮಾಡುವನೆ ಸರ್ವದಾ ಆತನಲಿ?


“ದೇವರ ದೃಷ್ಟಿಯಲ್ಲಿ ಸತ್ಯವಂತನಾಗಿರಲು ಮಾನವನಿಗೆ ಸಾಧ್ಯವೆ? ಸೃಷ್ಟಿಕರ್ತನ ಸನ್ನಿಧಿಯಲ್ಲಿ ಪರಿಶುದ್ಧನಾಗಿರಲು ಅವನಿಂದ ಸಾಧ್ಯವೆ?”


ತುಂಬಿಸುವನಾತ ನಿನ್ನ ಬಾಯನು ನಗೆಯಿಂದ ನಿನ್ನ ತುಟಿಗಳನ್ನು ಉತ್ಸಾಹಧ್ವನಿಯಿಂದ.


ಆದರೆ ಈ ದುರುಳರೇ, ದೇವರಿಗೆ, ‘ನಮ್ಮನ್ನು ಬಿಟ್ಟು ತೊಲಗು, ನಮಗೆ ಬೇಡವಾಗಿದೆ ನಿನ್ನ ಮಾರ್ಗದ ಅರಿವು’.


ಅವರು - ‘ನಮ್ಮನ್ನು ಈಜಿಪ್ಟ್ ದೇಶದಿಂದ ಬರಮಾಡಿ, ಕಾಡುಮೇಡು, ಹಳ್ಳಕೊಳ್ಳ, ಕಗ್ಗತ್ತಲು, ನಿರ್ಜಲ, ನಿರ್ಜನ ಹಾಗೂ ಯಾರೂ ಹಾದುಹೋಗದ ಬೆಂಗಾಡಿನ ಮಾರ್ಗವಾಗಿ ನಡೆಸಿಬಂದ ಆ ಸರ್ವೇಶ್ವರ ಎಲ್ಲಿ?’ ಎಂದುಕೊಳ್ಳಲಿಲ್ಲವೆ?


ಯಾಜಕರು, ‘ಸರ್ವೇಶ್ವರ ಸ್ವಾಮಿ ಎಲ್ಲಿ? ಎಂದು ವಿಚಾರಿಸಲೇ ಇಲ್ಲ. ಧರ್ಮಶಾಸ್ತ್ರಿಗಳು ನನ್ನನ್ನು ಅರಿತುಕೊಳ್ಳಲಿಲ್ಲ. ಪ್ರಜಾಪಾಲಕರು ನನಗೆ ದ್ರೋಹಮಾಡಿದರು. ಪ್ರವಾದಿಗಳು ಬಾಳ್ ದೇವತೆಯ ಆವೇಶದಿಂದ ಪ್ರವಾದನೆ ಮಾಡಿದರು. ನಿರರ್ಥಕವಾದುವುಗಳನ್ನು ಪೂಜಿಸಿದರು.’


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು