Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 35:13 - ಕನ್ನಡ ಸತ್ಯವೇದವು C.L. Bible (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡನು ಸರ್ವಶಕ್ತನು ಅದಕ್ಕೆ ಎಂದಿಗೂ ಲಕ್ಷ್ಯಕೊಡನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ದೇವರು ಮೂರ್ಖನ ಮಾತಿಗೆ ಕಿವಿಗೊಡುವುದೇ ಇಲ್ಲ, ಸರ್ವಶಕ್ತನಾದ ದೇವರು ಅದನ್ನು ಎಂದಿಗೂ ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದೇವರು ಪೊಳ್ಳುಮಾತಿಗೆ ಕಿವಿಗೊಡುವದೇ ಇಲ್ಲ, ಸರ್ವಶಕ್ತನು ಅದನ್ನು ಎಂದಿಗೂ ಲಕ್ಷಿಸುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಹೌದು, ದೇವರು ಅವರ ಬೆಲೆಯಿಲ್ಲದ ಬೇಡಿಕೆಯನ್ನು ಕೇಳುವುದಿಲ್ಲ; ಸರ್ವಶಕ್ತನಾದ ದೇವರು ಅವರಿಗೆ ಗಮನ ಕೊಡುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ನಿಶ್ಚಯವಾಗಿ ವ್ಯರ್ಥಮಾತನ್ನು ದೇವರು ಕೇಳುವುದಿಲ್ಲ; ಸರ್ವಶಕ್ತರು ಬರೀಮಾತನ್ನು ಲಕ್ಷಿಸುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 35:13
20 ತಿಳಿವುಗಳ ಹೋಲಿಕೆ  

ಸರ್ವೇಶ್ವರನು ದುರುಳರಿಗೆ ದೂರ; ನೀತಿವಂತರ ಪ್ರಾರ್ಥನೆಗೆ ಹತ್ತಿರ.


ಆದಕಾರಣ ಸರ್ವೇಶ್ವರನಾದ ನಾನು ಹೇಳುವುದೇನೆಂದರೆ : ಇಗೋ, ತಪ್ಪಿಸಿಕೊಳ್ಳಲಾಗದ ಕೇಡನ್ನು ಅವರ ಮೇಲೆ ಬರಮಾಡುವೆನು. ಇವರು ನನಗೆ ಮೊರೆಯಿಟ್ಟರೂ ನಾನೂ ಕಿವಿಗೊಡೆನು.


ನೀವು ಕೈಯೆತ್ತಿ ಬೇಡುವಾಗ ನಾನು ಕಣ್ಣುಮುಚ್ಚಿಕೊಳ್ಳುವೆನು. ನೀವು ಎಷ್ಟೇ ಪ್ರಾರ್ಥನೆಗಳನ್ನು ಮಾಡಿದರೂ ನಾನು ಕಿವಿಗೊಡೆನು, ಏಕೆಂದರೆ ನಿಮ್ಮ ಕೈಗಳು ರಕ್ತಸಿಕ್ತವಾಗಿವೆ.


ಬೇಡಿಕೊಂಡರೂ ನಿಮಗದು ದೊರಕುವುದಿಲ್ಲ. ಏಕೆಂದರೆ, ನಿಮ್ಮ ಬೇಡಿಕೆ ದುರುದ್ದೇಶದಿಂದ ಕೂಡಿರುತ್ತದೆ. ಭೋಗಾಭಿಲಾಶೆಗಳ ಈಡೇರಿಕೆ ನಿಮ್ಮ ಗುರಿಯಾಗಿರುತ್ತದೆ.


“ಪ್ರಾರ್ಥನೆ ಮಾಡುವಾಗ ಪರಕೀಯರಂತೆ ನಿರರ್ಥಕ ಪದಗಳನ್ನು ಪಿಸುಗುಟ್ಟಬೇಡ. ತಮ್ಮ ಪ್ರಾರ್ಥನೆ ದೀರ್ಘವಾದಷ್ಟೂ ದೇವರು ಆಲಿಸುತ್ತಾರೆಂದು ಅವರು ಭಾವಿಸುತ್ತಾರೆ.


ನೀವು ನನಗೆ ದಹನಬಲಿದಾನಗಳನ್ನು, ಧಾನ್ಯನೈವೇದ್ಯಗಳನ್ನು ಅರ್ಪಿಸುವುದಕ್ಕೆ ಬಂದರೂ ನಾನು ಅವುಗಳನ್ನು ಸ್ವೀಕರಿಸುವುದಿಲ್ಲ. ಸಮಾಧಾನದ ಯಜ್ಞವಾಗಿ ನೀವು ಒಪ್ಪಿಸುವ ಕೊಬ್ಬಿದ ಪಶುಗಳನ್ನು ನಾನು ಕಟಾಕ್ಷಿಸೆನು.


ಅವರು ಹೃದಯಪೂರ್ವಕವಾಗಿ ನನಗೆ ಪ್ರಾರ್ಥನೆಮಾಡುವುದಿಲ್ಲ. ಬದಲಿಗೆ ಅವರ ಹಾಸಿಗೆಗಳ ಮೇಲೆ ಬಿದ್ದು ಅರಚುತ್ತಾರೆ. ಧಾನ್ಯದ್ರಾಕ್ಷಾರಸಗಳಿಗಾಗಿ ಕಿರಿಚಿಕೊಳ್ಳುತ್ತಾರೆ. ನನಗೆ ವಿರುದ್ಧವಾಗಿ ಪ್ರತಿಭಟಿಸುತ್ತಾ ತಮ್ಮ ದೇಹಗಳನ್ನು ಪರಚಿಕೊಳ್ಳುತ್ತಾರೆ.


ಧರ್ಮಶಾಸ್ತ್ರಕ್ಕೆ ಕಿವಿಮುಚ್ಚಿಕೊಳ್ಳುವವನ ಪ್ರಾರ್ಥನೆ, ದೇವರಿಂದ ತಿರಸ್ಕೃತವಾದ ಪ್ರಾರ್ಥನೆ.


ದುರುಳರು ಅರ್ಪಿಸುವ ಬಲಿ ಸರ್ವೇಶ್ವರನಿಗೆ ಅಸಹ್ಯ; ಸಜ್ಜನರು ಮಾಡುವ ಪ್ರಾರ್ಥನೆ ಆತನಿಗೆ ಪ್ರಿಯ.


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ದೇವರೇ, ನಾನು ಮೊರೆಯಿಟ್ಟರೂ ಉತ್ತರಕೊಡದಿರುವೆ ನಾನೆದ್ದು ನಿಂತರೂ ನೀನು ಸುಮ್ಮನೆ ನೋಡುತ್ತಿರುವೆ.


ದೇವರು ಪಾಪಿಗಳಿಗೆ ಓಗೊಡುವುದಿಲ್ಲ. ಯಾರು ಭಕ್ತಿಯಿಂದ ಅವರ ಚಿತ್ತದಂತೆ ನಡೆಯುತ್ತಾರೋ ಅವರಿಗೆ ಓಗೊಡುತ್ತಾರೆಂದು ನಮಗೆಲ್ಲಾ ಚೆನ್ನಾಗಿ ತಿಳಿದಿದೆ.


ವ್ಯರ್ಥವಾದುದನು ನಂಬಿ ಅವನು ಮೋಸಹೋಗದಿರಲಿ ಇಲ್ಲವಾದರೆ ಅವನಿಗೆ ಸಿಗುವ ಪ್ರತಿಫಲ ವ್ಯರ್ಥವೇ ಸರಿ.


ಇಷ್ಟೆಲ್ಲಾ ಮಾಡಿದಂಥ ನೀವು ಸರ್ವೇಶ್ವರಸ್ವಾಮಿಗೆ ಮೊರೆಯಿಡುತ್ತೀರಿ. ಆದರೆ ಅವರು ನಿಮಗೆ ಉತ್ತರಕೊಡುವುದಿಲ್ಲ. ಬದಲಿಗೆ ನಿಮ್ಮ ದುಷ್ಕೃತ್ಯಗಳ ನಿಮಿತ್ತ ನಿಮಗೆ ವಿಮುಖರಾಗುವರು.”


ಕೆಟ್ಟತನವನು ನಾ ಮನದಲ್ಲಿಟ್ಟಿದ್ದರೆ I ಮುಟ್ಟುವಂತಿರಲಿಲ್ಲ ಆತನಿಗೆ ಎನ್ನ ಮೊರೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು