Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:10 - ಕನ್ನಡ ಸತ್ಯವೇದವು C.L. Bible (BSI)

10 ಶಿಕ್ಷಣ ಕೇಳುವಂತೆ ಅವರ ಕಿವಿಯನ್ನು ತೆರೆಯುವನು ಅಧರ್ಮವನ್ನು ಬಿಟ್ಟುಬಿಡುವಂತೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಗಳನ್ನು ತೆರೆದು, ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

10 ಇದಲ್ಲದೆ ಶಿಕ್ಷಣವನ್ನು ಕೇಳುವಂತೆ ಅವರ ಕಿವಿಯನ್ನು ತೆರೆದು ಅಧರ್ಮವನ್ನು ಬಿಟ್ಟುಬಿಡಬೇಕೆಂದು ಅವರಿಗೆ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಇದಲ್ಲದೆ ತನ್ನ ಎಚ್ಚರಿಕೆಯ ಮಾತಿಗೆ ಕಿವಿಗೊಡುವಂತೆ ಬಲವಂತ ಮಾಡುವನು; ಪಾಪಮಾಡಕೂಡದೆಂದು ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ದೇವರು ಅವರ ಕಿವಿಯನ್ನು ತಿದ್ದುವಿಕೆಗಾಗಿ ತೆರೆದು, ಜನರು ದುಷ್ಟತನವನ್ನು ಬಿಟ್ಟು ತಿರುಗಿಕೊಳ್ಳುವಂತೆ ಅವರಿಗೆ ಆಜ್ಞಾಪಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:10
24 ತಿಳಿವುಗಳ ಹೋಲಿಕೆ  

ನೀವು ಪಾಪಕ್ಕೆ ವಿಮುಖರಾಗಿದ್ದೀರಿ ಎಂಬುದನ್ನು ಸತ್ಕಾರ್ಯಗಳಿಂದ ವ್ಯಕ್ತಪಡಿಸಿರಿ.


ಬಾಧೆಪಡುವವರನ್ನು ಅವರ ಬಾಧೆಗಳ ಮೂಲಕವೇ ರಕ್ಷಿಸುವನು ಕಷ್ಟಾನುಭವಗಳ ಮೂಲಕವೆ ದೇವರು ಅವರ ಕಿವಿಯನ್ನು ತೆರೆಯುವನು.


ತೆರೆದಿಹನು ಸ್ವಾಮಿ ಸರ್ವೇಶ್ವರ ನನ್ನ ಕಿವಿಯನು ಎಂದೇ ವಿಮುಖನಾಗಲಿಲ್ಲ ನಾನು, ಪ್ರತಿಭಟಿಸಲಿಲ್ಲ ಆತನನು.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ದರ್ಶಿನಿಗಳೆನಿಸಿಕೊಂಡ ತಮ್ಮ ಪ್ರವಾದಿಗಳ ಮುಖಾಂತರ ಇಸ್ರಯೇಲ ಯೆಹೂದ್ಯರಿಗೆ, “ನೀವು ನಿಮ್ಮ ದುರಾಚಾರವನ್ನು ಬಿಟ್ಟು ನಾನು ನಿಮ್ಮ ಪೂರ್ವಜರಿಗೂ ನನ್ನ ದಾಸರಾದ ಪ್ರವಾದಿಗಳ ಮುಖಾಂತರ ನಿಮಗೂ ಕೊಟ್ಟಂಥ ನನ್ನ ಎಲ್ಲಾ ಆಜ್ಞಾವಿಧಿನಿಯಮಗಳನ್ನು ಕೈಕೊಂಡು ನಡೆಯಿರಿ,” ಎಂದು ಖಂಡಿತವಾಗಿ ಹೇಳಿದರು.


ದೇವರ ಸಮೀಪಕ್ಕೆ ಬನ್ನಿ, ಆಗ ಅವರು ನಿಮ್ಮ ಸಮೀಪಕ್ಕೆ ಬರುವರು. ಪಾಪಾತ್ಮರೇ, ನಿಮ್ಮ ಕೈ ಶುದ್ಧವಾಗಿರಲಿ. ಎರಡು ಮನಸ್ಸಿನವರೇ, ನಿಮ್ಮ ಹೃದಯ ನಿರ್ಮಲವಾಗಿರಲಿ.


ಮಾನವರು ತಮ್ಮನ್ನು ಅರಿಯದೆ ಬಾಳಿದ ಕಾಲವನ್ನು ದೇವರು ಗಮನಕ್ಕೆ ತಂದುಕೊಳ್ಳಲಿಲ್ಲ. ಆದರೆ ಈಗ ಎಲ್ಲೆಡೆಯಲ್ಲಿರುವ ಸರ್ವಮಾನವರು ದುರ್ಮಾರ್ಗಗಳನ್ನು ಬಿಟ್ಟು ತಮಗೆ ಅಭಿಮುಖರಾಗಬೇಕೆಂದು ಆಜ್ಞಾಪಿಸುತ್ತಾರೆ.


ನಮ್ಮ ಬೋಧನೆಯನ್ನು ಕೇಳಿದ ಆ ಮಹಿಳೆಯರಲ್ಲಿ ಲಿಡಿಯ ಎಂಬವಳು ಒಬ್ಬಳು. ಈಕೆ ಥುವತೈರ ಎಂಬ ಊರಿನವಳು; ಪಟ್ಟೆಪೀತಾಂಬರಗಳ ವ್ಯಾಪಾರಿ ಹಾಗೂ ದೇವಭಕ್ತೆ. ಪೌಲನ ಬೋಧನೆಗೆ ಕಿವಿಗೊಟ್ಟು ಗ್ರಹಿಸುವಂತೆ ಪ್ರಭು ಆಕೆಯ ಹೃದಯವನ್ನು ತೆರೆದರು.


ಪಶ್ಚಾತ್ತಾಪಪಟ್ಟು ದೇವರಿಗೆ ಅಭಿಮುಖರಾಗಿರಿ. ಅವರು ನಿಮ್ಮ ಪಾಪಗಳನ್ನು ಪರಿಹರಿಸುವರು.


ಇಸ್ರಯೇಲ್, ನಿನ್ನ ಸರ್ವೇಶ್ವರನಾದ ದೇವರ ಬಳಿಗೆ ಹಿಂದಿರುಗು. ನಿನ್ನ ಪಾಪದ್ರೋಹಗಳೇ ನಿನ್ನ ಪತನಕ್ಕೆ ಕಾರಣ.


ಹೌದು, ಹೌದು ನೀ ಕೇಳಿಲ್ಲ, ತಿಳಿದೂ ಇಲ್ಲ ಅದಿಯಿಂದ ನಿನ್ನ ಕಿವಿ ತೆರೆದೂ ಇಲ್ಲ ನೀನು ಆಗರ್ಭ ದ್ರೋಹಿ, ಮಹಾ ಕುಟಿಲ ಎಂಬುದು ನನಗೆ ತಿಳಿದು ಇದೆಯಲ್ಲ !


ಬೇಡವಾದವು ನಿನಗೆ ಯಜ್ಞಾರ್ಪಣೆ, ಬಲಿಕಾಣಿಕೆ I ಬಯಸಿಲ್ಲ ನೀ ಹೋಮವನೆ, ಪರಿಹಾರಕ ಬಲಿಯನೆ I ಶ್ರವಣಶಕ್ತಿಯನು ಅನುಗ್ರಹಿಸಿದೆ ನೀನು ನನಗೆ II


ಅಕ್ರಮದ ಕರೆಗೆ ಕಾಲಿಡಬೇಡ, ಎಚ್ಚರಿಕೆ! ನಿನ್ನ ಕಷ್ಟಾನುಭವ ಅದನು ತಡೆಗಟ್ಟುತ್ತದೆ.


ಎಲ್ಲ ಜನರೂ ಗೋಣಿತಟ್ಟನ್ನು ಉಟ್ಟುಕೊಳ್ಳಬೇಕು; ಪ್ರಾಣಿಗಳಿಗೂ ಹೊದಿಸಬೇಕು. ದೇವರನ್ನು ಶ್ರದ್ಧೆಯಿಂದ ಪ್ರಾರ್ಥಿಸಬೇಕು. ಎಲ್ಲರೂ ದೌರ್ಜನ್ಯವನ್ನು ತ್ಯಜಿಸಿ, ಹಿಂಸಾಚಾರವನ್ನು ಕೈಬಿಡಬೇಕು.


ಇದರಿಂದಲಾದರೂ ಜೆರುಸಲೇಮ್ ನಗರ ನನಗೆ ಭಯಪಡುವುದು, ನಾನು ಕಲಿಸಿದ ಪಾಠವನ್ನು ಎಂದಿಗೂ ಮರೆಯದು’ ಎಂದುಕೊಂಡೆ. ಆದರೆ ಅದರ ನಿವಾಸಿಗಳು ತಮ್ಮ ನಡತೆಯನ್ನು ಕೆಡಿಸಿಕೊಳ್ಳಲು ಮತ್ತಷ್ಟು ಕಾತರರಾದರು.”


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು