Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:11 - ಕನ್ನಡ ಸತ್ಯವೇದವು C.L. Bible (BSI)

11 ಅದನ್ನು ಕೇಳಿ ಆತನ ಸೇವಾಸಕ್ತರಾದಲ್ಲಿ ತಮ್ಮ ದಿವಸಗಳನ್ನು ಕಳೆವರು ಸುಖದಲ್ಲಿ ತಮ್ಮ ವರುಷಗಳನು ಹರ್ಷಾನಂದದಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ, ತಮ್ಮ ದಿನಗಳನ್ನು ಸುಖದಲ್ಲಿಯೂ, ವರ್ಷಗಳನ್ನು ಸಂತೋಷದಲ್ಲಿಯೂ ಕಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಅವರು ಅದನ್ನು ಕೇಳಿ ಆತನನ್ನು ಸೇವಿಸಿದರೆ ತಮ್ಮ ದಿನಗಳನ್ನು ಸುಖದಲ್ಲಿಯೂ ವರುಷಗಳನ್ನು ಸಂತೋಷದಲ್ಲಿಯೂ ಕಳೆಯುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ಅವರು ದೇವರಿಗೆ ಕಿವಿಗೊಟ್ಟು ಆತನಿಗೆ ವಿಧೇಯರಾದರೆ, ಆತನು ಅವರನ್ನು ಅಭಿವೃದ್ಧಿಪಡಿಸುವನು; ಆಗ ಅವರ ಜೀವನವು ಸುಖಕರವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಒಂದು ವೇಳೆ, ಜನರು ವಿಧೇಯರಾಗಿ ದೇವರನ್ನು ಸೇವಿಸಿದರೆ, ತಮ್ಮ ದಿವಸಗಳನ್ನು ಅಭಿವೃದ್ಧಿಯಲ್ಲಿ ಕಳೆಯುವರು. ತಮ್ಮ ವರ್ಷಗಳನ್ನು ಸಂತೃಪ್ತಿಯಲ್ಲಿಯೂ ಪೂರೈಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:11
21 ತಿಳಿವುಗಳ ಹೋಲಿಕೆ  

ನಾನು ಕೊಟ್ಟ ಒಂದು ಕಟ್ಟಳೆಯೆಂದರೆ ಇದು - ನನ್ನ ಮಾತಿಗೆ ಕಿವಿಗೊಡಿ, ನಾನು ನಿಮ್ಮ ದೇವರಾಗಿರುತ್ತೇನೆ, ನೀವು ನನ್ನ ಪ್ರಜೆಯಾಗಿರಿ. ನಿಮಗೆ ಹಿತವಾಗುವಂತೆ ನಾನು ವಿಧಿಸುವ ಮಾರ್ಗದಲ್ಲೆ ನಡೆಯಿರಿ.


ಇದೀಗಲೇ ನೀವು ನಿಮ್ಮ ಮಾರ್ಗಗಳನ್ನೂ ನಡತೆಗಳನ್ನೂ ತಿದ್ದುಕೊಳ್ಳಿ. ನಿಮ್ಮ ದೇವರಾದ ಸರ್ವೇಶ್ವರನ ನುಡಿಗೆ ಕಿವಿಗೊಡಿ. ಆಗ ನಿಮಗೆ ತಿಳಿಸಿದ ಕೇಡು ಒದಗದಂತೆ ಸರ್ವೇಶ್ವರ ತಮ್ಮ ಮನಸ್ಸನ್ನು ಬದಲಾಯಿಸಿಕೊಳ್ಳುವರು.


ನೀವು ಮನಃಪೂರ್ವಕವಾಗಿ ನನಗೆ ವಿಧೇಯರಾದರೆ ಈ ನಾಡಿನ ಸತ್ಫಲವನ್ನು ಸವಿಯುವಿರಿ.


ಅಬ್ರಹಾಮನು ದೇವರ ಕರೆಗೆ ಓಗೊಡುವುದಕ್ಕೂ ವಿಶ್ವಾಸವೇ ಕಾರಣವಾಗಿತ್ತು. ಆತನು ಆ ಕರೆಗನುಸಾರವಾಗಿ ತಾನು ಬಾಧ್ಯವಾಗಿ ಹೊಂದಬೇಕಾಗಿದ್ದ ನಾಡಿಗೆ ಹೊರಟನು. ತಾನು ಸೇರಬೇಕಾಗಿದ್ದ ಸ್ಥಳ ಯಾವುದೆಂದು ತಿಳಿಯದಿದ್ದರೂ ಸ್ವದೇಶವನ್ನು ಬಿಟ್ಟು ತೆರಳಿದನು.


ಮೇಲೆ ಹೇಳಿದ ಎಲ್ಲ ಕಷ್ಟಸಂಕಟಗಳು ನಿಮಗೆ ಸಂಭವಿಸಿ, ಕೊನೆಗೆ ನೀವು ಅವರಿಗೆ ಅಭಿಮುಖರಾಗಿ ಅವನ ಮಾತಿಗೆ ಕಿವಿಗೊಡುವಿರಿ.


ಲೋಕದಲ್ಲಿ ನೀವು ಸುಖಭೋಗಿಗಳಾಗಿ ವಿಲಾಸ ಜೀವನ ನಡೆಸಿದ್ದೀರಿ. ವಧೆಯ ದಿನಕ್ಕಾಗಿ ಪಶುಗಳಂತೆ ನಿಮ್ಮನ್ನೇ ಕೊಬ್ಬಿಸಿಕೊಂಡಿದ್ದೀರಿ.


ಅಹಂಭಾವದಿಂದಾಕೆ ಮೆರೆದುದಕೆ ಪೀಡಿಸಿ ಕಾಡಿಸಿರಿ ಸರಿಯಾದ ಅಳತೆಯಲ್ಲೇ. ಹೃದಯದಲಿ ಹೇಳುತಿಹಳು ಅವಳಿಂತು : ರಾಣಿಯಂತೆ ನಾ ಕುಳಿತಿಹೆನು ವಿಧವೆಯಲ್ಲ ನಾನೇನು ಕಾಣೆನೆಂದಿಗೂ ದುಃಖವನು.


ಸರ್ವಶಕ್ತನ ಕಡೆಗೆ ಹಿಂದಿರುಗಿದೆಯಾದರೆ ನಿನ್ನ ಗುಡಾರಗಳಿಂದ ಅನ್ಯಾಯವನು ತೊರೆದೆಯಾದರೆ, ನೀನು ಉದ್ಧಾರವಾಗುವೆ.


ದೇವರ ಚಿತ್ತಕ್ಕೆ ಮಣಿದು ಸಮಾಧಾನದಿಂದಿರು ಇದರಿಂದ ನಿನಗೆ ಶುಭವಾಗುವುದು.


ದೇವರಿಗೆ ಸ್ತುತಿಸ್ತೋತ್ರ ಸಲ್ಲಲಿ. ಏಕೆಂದರೆ, ಹಿಂದೊಮ್ಮೆ ನೀವು ಪಾಪಕ್ಕೆ ಗುಲಾಮರಾಗಿದ್ದರೂ ನಿಮಗೆ ಕಲಿಸಿದ ಬೋಧನೆಯನ್ನು ನೀವು ಮನಃಪೂರ್ವಕವಾಗಿ ಅಂಗೀಕರಿಸಿ ವಿಧೇಯರಾದಿರಿ;


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಅವರ ಮಕ್ಕಳು ಮುನ್ನಡೆಯುತ್ತಾರೆ ಮಂದೆಯಂತೆ ಅವರ ಬಾಲಬಾಲೆಯರು ಕುಣಿದಾಡುತ್ತಾರೆ ಜಿಂಕೆಯಂತೆ.


ಅಂಗಸಾಧನೆಯು ಸ್ವಲ್ಪಮಟ್ಟಿಗೆ ಪ್ರಯೋಜನಕರವಾದುದು; ಭಕ್ತಿಸಾಧನೆಯಾದರೋ ಎಲ್ಲಾ ದೃಷ್ಟಿಯಿಂದಲೂ ಪ್ರಯೋಜನಕರವಾದುದು. ಭಕ್ತಿಸಾಧನೆಯಿಂದ ಇಹಪರಗಳೆರಡರಲ್ಲೂ ನಿತ್ಯಜೀವವನ್ನು ಪಡೆಯುವ ಭರವಸೆ ನಮಗಿದೆ.


ದಿನಗಳನು ಕಳೆಯುತ್ತಾರೆ ಸುಖಸಂತೋಷದಿಂದ ಸಮಾಧಿ ಸೇರುತ್ತಾರೆ ಸಮಾಧಾನದಿಂದ.


ತೋರ್ಪಡಿಸುವೆ ಎನಗೆ ಅಮರ ಜೀವಮಾರ್ಗವನು I ನಿನ್ನ ಸನ್ನಿಧಿ ಕೊಡುವುದು ಪರಮಾನಂದವನು I ನಿನ್ನ ಬಲಗೈ ನೀಡುವುದು ನಿತ್ಯಭಾಗ್ಯವನು II


ಪ್ರೀತಿಸುತ್ತಾನೆ ಪ್ರಭು ತನ್ನ ಪ್ರಜೆಯನು I ಜಯಶೀಲರನ್ನಾಗಿಸುತ್ತಾನೆ ದೀನದಲಿತರನು II


ಅವರು ಆಲಿಸಿ, ಅವನಿಗೆ ಸದುತ್ತರವನ್ನು ದಯಪಾಲಿಸಿದರು. ಅವನನ್ನು ಮರಳಿ ಜೆರುಸಲೇಮಿಗೆ ಬರಮಾಡಿ ಅರಸುತನವನ್ನು ಕೊಟ್ಟರು. ಆಗ ಸರ್ವೇಶ್ವರಸ್ವಾಮಿಯೇ ದೇವರು ಎಂಬುದು ಅವನಿಗೆ ಮನದಟ್ಟಾಯಿತು.


ಅಕ್ರಮಗೈಯರು ಅಂಥವರಾರು I ಆತ ತೋರಿದ ಮಾರ್ಗದಲೆ ನಡೆವರು II


ನನ್ನ ಮಾತಿಗೆ ಕಿವಿಗೊಡುವವರಾದರೋ ಸುರಕ್ಷಿತವಾಗಿರುವರು, ಕೇಡಿಗೆ ಭಯಪಡದೆ ನೆಮ್ಮದಿಯಾಗಿ ಬಾಳುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು