Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:16 - ಕನ್ನಡ ಸತ್ಯವೇದವು C.L. Bible (BSI)

16 ಅಂತೆಯೆ, ಕಷ್ಟದಿಂದ ನಿನ್ನನ್ನು ತಪ್ಪಿಸಬೇಕೆಂಬುದು ಇಕ್ಕಟ್ಟಿಲ್ಲದ ಬಯಲಿಗೆ ನಿನ್ನನ್ನು ತರಬೇಕೆಂಬುದು ನಿನ್ನ ಊಟದ ಮೇಜು ಸಮೃದ್ಧಿಯಾಗಿರಬೇಕೆಂಬುದು ದೇವರ ಉದ್ದೇಶವಾಗಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ, ಇಕ್ಕಟ್ಟಿಲ್ಲದ ವಿಶಾಲ ಸ್ಥಳಕ್ಕೆ ಬರಮಾಡಬೇಕೆಂದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬುದು ಆತನ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

16 ಇದೇ ಮೇರೆಗೆ ನಿನ್ನನ್ನೂ ಕಷ್ಟದೊಳಗಿಂದ ತಪ್ಪಿಸಿ ಇಕ್ಕಟ್ಟಿಲ್ಲದ ವಿಶಾಲಸ್ಥಳಕ್ಕೆ ಬರಮಾಡಬೇಕೆಂಬದೂ, ನಿನ್ನ ಮೇಜಿನ ಆಹಾರಗಳು ತುಪ್ಪದಿಂದ ತುಂಬಿರಬೇಕೆಂಬದೂ ಆತನ ಉದ್ದೇಶವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 “ಯೋಬನೇ, ದೇವರು ನಿನ್ನನ್ನು ಕೇಡಿನಿಂದ ತಪ್ಪಿಸಿ ಸುರಕ್ಷಿತವೂ ಅಭಿವೃದ್ಧಿಕರವೂ ಆಗಿರುವ ಸ್ಥಳಕ್ಕೆ ಕರೆದುಕೊಂಡು ಬಂದು ನಿನಗೆ ಊಟವನ್ನು ಯಥೇಚ್ಛವಾಗಿ ಬಡಿಸಲು ಇಷ್ಟಪಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ದೇವರು ನಿನ್ನನ್ನು ಇಕ್ಕಟ್ಟಿನೊಳಗಿಂದ ಬಿಡಿಸುವರು; ಇಕ್ಕಟ್ಟಿಲ್ಲದ ವಿಶಾಲ ಸ್ಥಳವು ನಿನಗೆ ದೊರೆಯುವುದು; ನಿನ್ನ ಆದರಣೆಗಾಗಿ ನಿನ್ನ ಮೇಜು ಉತ್ತಮ ಆಹಾರಗಳಿಂದ ತುಂಬಿರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:16
16 ತಿಳಿವುಗಳ ಹೋಲಿಕೆ  

ಸಜ್ಜುಗೊಳಿಸುವೆ ನೀ ಶತ್ರುಗಳ ಕಣ್ಮುಂದೆಯೆ ನನಗೌತಣವನು I ಹಚ್ಚುವೆ ತಲೆಗೆ ತೈಲವನು, ತುಂಬಿತುಳುಕಿಸುವೆ ಪಾನಪಾತ್ರೆಯನು II


ಇಕ್ಕಟ್ಟಿನಲ್ಲಿ ಮೊರೆಯಿಟ್ಟೆನು ಪ್ರಭುವಿಗೆ I ಕಿವಿಗೊಟ್ಟು ಬಿಡುಗಡೆಯಿತ್ತನು ಆತನೆನಗೆ II


ಇದಲ್ಲದೆ ಸೇನಾಧೀಶ್ವರ ಸರ್ವೇಶ್ವರ ಈ ಪರ್ವತದಲ್ಲಿ ಸಕಲ ರಾಷ್ಟ್ರಗಳಿಗೆ ಸಾರವತ್ತಾದ ಮೃಷ್ಟಾನ್ನವನ್ನೂ ಶ್ರೇಷ್ಟವಾದ ದ್ರಾಕ್ಷಾರಸವನ್ನೂ ಭೋಜನಕ್ಕಾಗಿ ಅಣಿಗೊಳಿಸುವರು.


ಮೃಷ್ಟಾನ್ನ ತಿಂದಂತೆ ಎನ್ನ ಮನ ಸಂತೃಪ್ತ I ಸಂಭ್ರಮದಿಂದ ನಿನ್ನ ಹೊಗಳುವುದು ಬಾಯ್ತುಂಬ II


ವಿರೋಧಿಗಳ ವಶಕ್ಕೆ ಎನ್ನನು ನೀ ಬಿಟ್ಟುಬಿಡಲಿಲ್ಲ I ನಿರಾತಂಕದೆಡೆಯಲಿ ನನ್ನ ನಿಲ್ಲಿಸಿದೆಯಲ್ಲಾ II


ಬಿಕ್ಕಟ್ಟಿನಿಂದ ಬಿಡಿಸಿ ತಂದನು ಬಯಲಿಗೆ I ಅಕ್ಕರೆಯಿಂದ ಮೆಚ್ಚಿ ರಕ್ಷಕನಾದ ನನಗೆ II


ಅವರ ತೃಪ್ತಿ ನಿನ್ನ ಮಂದಿರದ ಸಮೃದ್ಧಿಯಿಂದ I ಅವರ ಪಾನೀಯ ನಿನ್ನ ಸಂಭ್ರಮ ಪ್ರವಾಹದಿಂದ II


ಆದುದರಿಂದ ಇಗೋ, ನಾನು ಅವಳನ್ನು ಪುನಃ ಬೆಂಗಾಡಿಗೆ ಕರೆದೊಯ್ಯುವೆನು. ಹೃದಯಂಗಮವಾಗಿ ಅವಳನ್ನು ಒಲಿಸಿಕೊಂಡು ಮಾತಾಡುವೆನು.


ಆಹಾರವಲ್ಲದ್ದಕ್ಕೆ ಹಣವನು ವ್ಯಯಮಾಡುವುದೇಕೆ? ತೃಪ್ತಿ ತರದ ಪದಾರ್ಥಕ್ಕೆ ನಿಮ್ಮ ದುಡಿತದ ವೆಚ್ಚವೇಕೆ? ಕಿವಿಗೊಡಿ ನನಗೆ, ಒಳಿತನ್ನು ತಿಂದು ಆನಂದಪಡಿ ಆ ಮೃಷ್ಟಾನ್ನವನುಂಡು.


ನಾನು ಮುಂದೆ ಹೋಗದಂತೆ ದೇವರು ಅಡ್ಡಗೋಡೆ ಹಾಕಿದ್ದಾನೆ ನನ್ನ ಹಾದಿಗೆ ಕತ್ತಲೆ ಕವಿಯುವಂತೆ ಮಾಡಿದ್ದಾನೆ.


ದೇವರು ಯಾರನ್ನು ತಿದ್ದುತ್ತಾನೋ ಅವನು ಧನ್ಯನು ಅಲಕ್ಷ್ಯಮಾಡಬೇಡ ನೋಡು, ಸರ್ವಶಕ್ತನ ದಂಡನೆಯನು.


ಕೇವಲವಾಯಿತೋ ನಿನಗೆ ದೇವರಿತ್ತ ಸಾಂತ್ವನ? ನಿನಗೆ ದೊರೆತ ಮೃದುವಾದ ಹಿತವಚನ?


ನನಗೊಳಿತು ಮಾಡಿದನಾತ ಸನ್ನಡತೆಗೆ ತಕ್ಕಂತೆ I ಪ್ರತಿಫಲವನಿತ್ತನು ನನ್ನ ಹಸ್ತಶುದ್ಧತೆಗೆ ತಕ್ಕಹಾಗೆ II


ನಿದ್ರಿಸುವಾಗಲು ಮಾಡುವೆ ನಿನ್ನ ಸ್ಮರಣೆ I ರಾತ್ರಿಯೆಲ್ಲ ನಿನ್ನ ಧ್ಯಾನವೆ ನನಗೆ ಜಾಗರಣೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು