Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:17 - ಕನ್ನಡ ಸತ್ಯವೇದವು C.L. Bible (BSI)

17 ನೀನೋ ದುಷ್ಟ ನಿರ್ಣಯಗಳಿಂದ ಭರಿತನಾಗಿರುವೆ ನ್ಯಾಯವಿಚಾರಣೆಗೂ ತೀರ್ಪಿಗೂ ಒಳಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ, ನ್ಯಾಯವಿಚಾರಣೆಗೂ, ನ್ಯಾಯತೀರ್ಪಿಗೂ ಒಳಗಾಗಿದ್ದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ನೀನಾದರೋ ದುಷ್ಟನಿರ್ಣಯಗಳಿಂದ ತುಂಬಿದವನಾಗಿ ನ್ಯಾಯವಿಚಾರಣೆಗೂ ನ್ಯಾಯತೀರ್ಪಿಗೂ ಒಳಗಾಗಿದ್ದೀ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಬನೇ, ಈಗಲಾದರೋ ನೀನು ದೋಷಿಯೆಂದು ನಿರ್ಣಯಿಸಲ್ಪಟ್ಟಿರುವೆ; ದುಷ್ಟನಂತೆ ದಂಡಿಸಲ್ಪಟ್ಟಿರುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ಆದರೆ ಈಗ ನೀನು ದುಷ್ಟರಿಗೆ ಬರಬೇಕಾದ ತೀರ್ಪಿನಿಂದ ತುಂಬಿರುವೆ. ನ್ಯಾಯವಿಚಾರಣೆಯೂ, ತೀರ್ಪೂ ನಿನ್ನನ್ನು ಹಿಡಿದಿರುತ್ತವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:17
10 ತಿಳಿವುಗಳ ಹೋಲಿಕೆ  

ಸ್ವರ್ಗದಿಂದ ಬಂದ ಮತ್ತೊಂದು ವಾಣಿಯನು ಕೇಳಿದೆ. ಅದು : ನನ್ನ ಜನರೇ, ಅವಳನ್ನು ತೊರೆದು ಹೊರಬನ್ನಿ ಪಾಲುಗಾರರಾಗದಿರಿ ಅವಳ ಪಾಪಗಳಲಿ ತುತ್ತಾಗದಿರಿ ಅವಳಿಗೆ ಬಂದೆರಗುವ ವಿಪತ್ತುಗಳಲಿ !


ಇಂಥವುಗಳನ್ನು ಮಾಡುವವರು ಮರಣದಂಡನೆಗೆ ಪಾತ್ರರು ಎಂಬ ದೈವನಿಯಮವನ್ನು ಅರಿತಿದ್ದರೂ ಇಂಥ ಹೀನ ಕೃತ್ಯಗಳನ್ನು ಮಾಡುತ್ತಾರೆ. ತಾವು ಮಾಡುವುದೇ ಅಲ್ಲದೆ ಹಾಗೆಮಾಡುವ ಇತರರನ್ನೂ ಪ್ರೋತ್ಸಾಹಿಸುತ್ತಾರೆ.


ಅವನ ಪರಿಶೋಧನೆ ಇನ್ನೂ ಮುಂದುವರೆದರೆ ಒಳಿತು ಅವನು ಕೊಟ್ಟ ಉತ್ತರ ದುರುಳರಿಗೆ ತಕ್ಕುದಾದುದು.


ಇವನು ದುರ್ಜನರ ಸಂಗಡ ಸಂಚರಿಸುವವನು ಕೆಡುಕರ ಸಂಗಡ ನಡೆದಾಡುವವನು.


ನಿನಗೆ ದಾರಿಕಾಣದಿರಲು ಬೆಳಕೇ ಕತ್ತಲಾಗಿದೆ ನಿನ್ನನು ಮುಳುಗಿಸಲು ಜಲಪ್ರವಾಹವಿದೆ.


ನಾನು ನಿಮಗೆ ಬಾಯಿಮಾತಿನಿಂದ ಧೈರ್ಯ ಹೇಳಬಹುದಿತ್ತು ತುಟಿಮಾತುಗಳಿಂದ ಆದರಿಸಿ ಸಾಂತ್ವನ ನೀಡಬಹುದಿತ್ತು.


ಇಲ್ಲ,ಹಾಗೆಮಾಡುವುದು ನಿನ್ನ ಕೆಟ್ಟತನ ಹೆಚ್ಚಿದುದಕ್ಕಾಗಿ. ನಿನ್ನ ಪಾಪಗಳಿಗೆ ಮಿತಿಯಿಲ್ಲದುದಕ್ಕಾಗಿ.


ನಿನ್ನ ಸುತ್ತಲು ಉರುಲುಗಳು ಕಾದಿವೆ ಈ ಕಾರಣ ನಿನ್ನನು ತಲ್ಲಣಗೊಳಿಸಲಿದೆ ಭಯಭ್ರಾಂತಿ ತಟ್ಟನೆ.


ಈ ಯೋಬನಂಥ ಮನುಜನು ಯಾರಿದ್ದಾನೆ? ಇಗೋ, ದೇವದೂಷಣೆಯನು ನೀರಿನಂತೆ ಕುಡಿಯುತ್ತಾನೆ!


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು