Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:19 - ಕನ್ನಡ ಸತ್ಯವೇದವು C.L. Bible (BSI)

19 ಐಶ್ವರ್ಯವಾಗಲಿ, ಧನಸಾಮರ್ಥ್ಯವಾಗಲಿ ಕಷ್ಟಾನುಭವವಿಲ್ಲದೆ ನಿನಗೆ ಈಡಾಗವಿಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ, ಧನಸಾಮರ್ಥ್ಯವೂ ನಿನಗೆ ಈಡಾಗುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಕಷ್ಟಾನುಭವವಿಲ್ಲದೆ ನಿನ್ನ ಐಶ್ವರ್ಯವೂ ಧನಸಾಮರ್ಥ್ಯವೂ ಈಡಾದಾವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 ನಿನ್ನ ಎಲ್ಲಾ ಹಣವು ಈಗ ನಿನಗೆ ಸಹಾಯ ಮಾಡಲಾರದು; ನಿನ್ನಲ್ಲಿರುವ ಶಕ್ತಿಸಾಮರ್ಥವು ಸಹ ನಿನಗೆ ಸಹಾಯ ಮಾಡಲಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 ನಿನ್ನ ಐಶ್ವರ್ಯವೂ, ಶಕ್ತಿಸಾಮರ್ಥ್ಯವೂ ಕಷ್ಟಾನುಭವವಿಲ್ಲದೆ ಸಾಗಿಸಲು ಸಾಧ್ಯವೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:19
13 ತಿಳಿವುಗಳ ಹೋಲಿಕೆ  

ತೀರ್ಪಿನ ದಿನ ನೆರವಾಗದು ಆಸ್ತಿಪಾಸ್ತಿ; ಸನ್ನಡತೆಯಿಂದಲೆ ಮರಣದಿಂದ ವಿಮುಕ್ತಿ.


ದುಷ್ಟನಿಗೆ ದಂಡನೆ ಕಟ್ಟಿಟ್ಟ ಬುತ್ತಿ; ಶಿಷ್ಟ ಸಂತಾನಕ್ಕೆ ಸಿಗುವುದು ಮುಕ್ತಿ.


ನಿಮ್ಮ ಬೆಳ್ಳಿಬಂಗಾರಕ್ಕೆ ತುಕ್ಕುಹಿಡಿದಿದೆ. ಆ ತುಕ್ಕೇ ನಿಮಗೆ ವಿರುದ್ಧ ಸಾಕ್ಷಿಯಾಗಿ ನಿಮ್ಮನ್ನು ಬೆಂಕಿಯಂತೆ ದಹಿಸಿಬಿಡುತ್ತದೆ. ಅಂತ್ಯಕಾಲಕ್ಕಾಗಿ ನೀವು ಬೆಂಕಿಯನ್ನೇ ಶೇಖರಿಸಿಟ್ಟುಕೊಂಡಿದ್ದೀರಿ.


ಸ್ವಾಮಿಯ ಆ ರೌದ್ರದಿನದಂದು, ಅವರ ಬೆಳ್ಳಿಯಾಗಲೀ ಬಂಗಾರವಾಗಲೀ ಅವರನ್ನು ರಕ್ಷಿಸಲಾರದು. ಸ್ವಾಮಿಯ ರೋಷಾಗ್ನಿ ಧರೆಯನ್ನೆಲ್ಲಾ ದಹಿಸಿಬಿಡುವುದು; ಹೌದು, ಭೂನಿವಾಸಿಗಳೆಲ್ಲರನ್ನೂ ತಟ್ಟನೆ ಕೊನೆಗಾಣಿಸುವುದು.


ಆಗ ಸರ್ವೇಶ್ವರ ಸ್ವಾಮಿಯ ದೂತನು ಹೊರಟುಬಂದು ಅಸ್ಸೀರಿಯರ ಪಾಳೆಯದಲ್ಲಿ 185,000 ಮಂದಿ ಸೈನಿಕರನ್ನು ಮರಣಕ್ಕೆ ಈಡುಮಾಡಿದನು; ಬೆಳಿಗ್ಗೆ ಎದ್ದುನೋಡುವಾಗ ಅವರೆಲ್ಲರೂ ಹೆಣಗಳಾಗಿದ್ದರು.


ಆ ದಿನ ಬಂದಾಗ ಮಾನವರು ತಮ್ಮ ಪೂಜೆಗೋಸ್ಕರ ಮಾಡಿಸಿಕೊಂಡ ಬೆಳ್ಳಿಯ ಬೊಂಬೆಗಳನ್ನೂ ಬಂಗಾರದ ವಿಗ್ರಹಗಳನ್ನೂ ಇಲಿ ಹೆಗ್ಗಣಗಳ ಬಿಲಗಳಲ್ಲಿ ಬಿಸಾಡುವರು.


ಅನ್ಯಾಯದ ಸಂಪತ್ತು ನಿಷ್ಪ್ರಯೋಜಕ; ಧರ್ಮವು ಮೃತ್ಯುವಿನಿಂದ ರಕ್ಷಕ.


ರಹೆಬನ ಸಹಾಯಕರು ಕಾಲಿಗೆರಗಿದರೂ ದೇವರು ತನ್ನ ಸಿಟ್ಟು ಸಿಡುಕನು ಬಿಟ್ಟುಬಿಡನು.


ಕ್ಷಣಮಾತ್ರದೊಳು, ನಡುರಾತ್ರಿಯೊಳು ಸತ್ತುಹೋಗುವರು ನಾಡಿನ ಪ್ರಜೆಗಳು ತಲ್ಲಣಗೊಂಡು ಇಲ್ಲದೆಹೋಗುವರು ಮನುಷ್ಯರ ಕೈಸೋಂಕದೆಯೆ ಪರಾಕ್ರಮಿಗಳು ಮಾಯವಾಗುವರು.


ಸಿರಿಸಂಪತ್ತು ನಿನ್ನನು ಕುಚೋದ್ಯಕ್ಕೆ ನೂಕೀತು, ಎಚ್ಚರಿಕೆ! ಹೆಚ್ಚು ಲಂಚಕೋರತನದಿಂದ ವಂಚಿತನಾಗಬೇಡ.


ತಟ್ಟನೆ ಜನಾಂಗಗಳು ನಿರ್ಮೂಲವಾಗುವಂಥ ರಾತ್ರಿಯನು ಬಯಸಬೇಡ.


ತನ್ನನು ತಾನೇ ಮುಕ್ತಗೊಳಿಸಿಕೊಳ್ಳುವ ಜೀವಾತ್ಮನಿಲ್ಲ I ದೇವರಿಗೆ ಈಡುಕೊಟ್ಟು ಪ್ರಾಣ ಉಳಿಸಿಕೊಳ್ಳಬಲ್ಲ ನರನಿಲ್ಲ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು