Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:22 - ಕನ್ನಡ ಸತ್ಯವೇದವು C.L. Bible (BSI)

22 ದೇವರ ಶಕ್ತಿ ಉನ್ನತೋನ್ನತ ಯಾರಿಹನು ಅವನಂಥ ಬೋಧಕ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತ ಕಾರ್ಯಗಳನ್ನು ನಡೆಸುವನು, ಆತನಂತಹ ಉಪದೇಶಕನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಇಗೋ, ದೇವರು ತನ್ನ ಶಕ್ತಿಯಿಂದ ಉನ್ನತಕಾರ್ಯಗಳನ್ನು ನಡಿಸುವನು, ಆತನಂಥ ಉಪದೇಶಕನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಇಗೋ, ದೇವರು ತನ್ನ ಶಕ್ತಿಯಿಂದ ಮಹಾಕಾರ್ಯವನ್ನು ಮಾಡುವನು! ಆತನು ಎಲ್ಲರಿಗೂ ಅತ್ಯಂತ ದೊಡ್ಡ ಉಪದೇಶಕನಾಗಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ದೇವರು ತಮ್ಮ ಶಕ್ತಿಯಲ್ಲಿ ಉನ್ನತರಾಗಿದ್ದಾರೆ. ದೇವರಂಥ ಬೋಧಕರು ಯಾರಿದ್ದಾರೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:22
21 ತಿಳಿವುಗಳ ಹೋಲಿಕೆ  

ಇಳಿಸಿಹನು ಗದ್ದುಗೆಯಿಂದ ಘನಾಧಿಪತಿಗಳನು I ಏರಿಸಿರುವನು ಉನ್ನತಿಗೆ ದೀನದಲಿತರನು II


ಪ್ರತಿಯೊಬ್ಬನು ತನ್ನ ಮೇಲಿನ ಅಧಿಕಾರಿಗಳಿಗೆ ಅಧೀನನಾಗಿರಬೇಕು. ಅಧಿಕಾರವೆಲ್ಲವೂ ಬರುವುದು ದೇವರಿಂದಲೇ. ಈಗಿರುವ ಅಧಿಕಾರಿಗಳೂ ದೇವರಿಂದಲೇ ನೇಮಕಗೊಂಡವರು.


ನಿನ್ನ ಜೀವೋದ್ಧಾರಕನು ಇಸ್ರಯೇಲಿನ ಪರಮಪಾವನನು ಆದ ಸರ್ವೇಶ್ವರ ಸ್ವಾಮಿಯೆ ನುಡಿದಿಹನು : “ನಿನಗೆ ಕ್ಷೇಮ‍ಕರವಾದ ಮಾರ್ಗವನು ಬೋಧಿಸುವವನೂ ನೀ ಹೋಗಬೇಕಾದ ಹಾದಿಯಲಿ ನಡೆಯಿಸುವವನೂ ಆದಂಥ ಸರ್ವೇಶ್ವರ ಸ್ವಾಮಿ ದೇವರು ನಾನು.


ಪರಾತ್ಪರ ದೇವರು ನಿಮ್ಮ ತಂದೆಯಾದ ನೆಬೂಕದ್ನೆಚ್ಚರ್ ಅವರಿಗೆ ರಾಜ್ಯ ಮಹತ್ವವನ್ನು ಹಾಗೂ ಮಾನ ಸನ್ಮಾನಗಳನ್ನು ದಯಪಾಲಿಸಿದ್ದರು.


‘ಈ ರಾಜ್ಯ ನಿನ್ನನ್ನು ಬಿಟ್ಟು ತೊಲಗಿದೆ. ನೀನು ಮಾನವ ಸಮಾಜದಿಂದ ಬಹುಷ್ಕೃತನಾಗುವೆ. ಕಾಡುಮೃಗಗಳ ನಡುವೆ ವಾಸಿಸುವೆ. ದನಗಳಂತೆ ಹುಲ್ಲು ಮೇಯುವ ಗತಿ ನಿನ್ನದಾಗುವುದು. ಪರಾತ್ಪರ ದೇವರಿಗೆ ನರಮಾನವರ ರಾಜ್ಯದ ಮೇಲೆ ಅಧಿಕಾರವಿದೆ. ಆ ರಾಜ್ಯವನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದನ್ನು ನೀನು ಗ್ರಹಿಸುವುದರೊಳಗೆ ಏಳು ವರ್ಷ ಕಳೆಯುವುದು,” ಎಂದು ದೈವವಾಣಿಯಾಯಿತು.”


ತಾವು ಮಾನವ ಸಮಾಜದಿಂದ ಬಹಿಷ್ಕೃತರಾಗುವಿರಿ. ಕಾಡುಮೃಗಗಳ ನಡುವೆ ವಾಸಮಾಡುವಿರಿ. ದನಕರುಗಳಂತೆ ಹುಲ್ಲು ಮೇಯುವ ಗತಿ ನಿಮ್ಮದಾಗುವುದು. ಆಕಾಶದ ಇಬ್ಬನಿ ನಿಮ್ಮನ್ನು ತೋಯಿಸುವುದು. ಪರಾತ್ಪರ ದೇವರಿಗೆ ಮಾನವರ ರಾಜ್ಯದ ಮೇಲೂ ಅಧಿಕಾರವಿದೆ. ಅದನ್ನು ತಮಗೆ ಬೇಕಾದವರಿಗೆ ಒಪ್ಪಿಸುತ್ತಾರೆ. ಇದು ತಮಗೆ ತಿಳಿದುಬರುವುದರೊಳಗೆ ಏಳು ವರ್ಷ ಕಳೆದಿರುತ್ತದೆ.


ಸರ್ವೇಶ್ವರ ಹೀಗೆನ್ನುತ್ತಾರೆ: “ಇಗೋ ಕಾಲ ಬರಲಿದೆ. ಆಗ ಸರ್ವೇಶ್ವರನಾದ ನನ್ನ ಮಹಿಮೆಗಾಗಿ ಈ ನಗರವನ್ನು ಹನನೇಲನ ಗೋಪುರದಿಂದ ಮೂಲೆ ಬಾಗಿಲವರೆಗೆ ವಿಸ್ತರಿಸಲಾಗುವುದು.


ನಿನ್ನ ಮಕ್ಕಳು ಶಿಕ್ಷಿತರಾಗುವರು ನನ್ನಿಂದ ಸಮೃದ್ಧವಾಗಿ ಬಾಳುವರು ಅವರು ಸುಖಶಾಂತಿಯಿಂದ.


ಮುರಿದಿಹನು ಸರ್ವೇಶ್ವರ ದುರುಳರಾ ಗದೆಯನು ಮುರಿದಿಹನು ಅರಸರ ರಾಜದಂಡವನು.


ಪ್ರಭು, ನಿನ್ನಿಂದ ಶಿಕ್ಷಿತನಾದ ಮಾನವ ಧನ್ಯ I ನಿನ್ನಿಂದ ಧರ್ಮೋಪದೇಶ ಪಡೆದವನು ಧನ್ಯ II


ರಾಷ್ಟ್ರಗಳನು ಖಂಡಿಸುವವನು ದಂಡಿಸದಿರುವನೋ? I ಮನುಜರಿಗೆ ಬುದ್ಧಿಕಲಿಸುವವನು ಬುದ್ಧಿಹೀನನೋ? II


ನ್ಯಾಯತೀರ್ಪು ಬರುವುದು ದೇವನಿಂದಲೇ I ಉನ್ನತಿಯು ಅವನತಿಯು ಆತನಿಂದಲೇ II


ಕಾಡುಮೃಗಗಳಿಗಿಂತ ನಮಗೆ ಹೆಚ್ಚು ಜ್ಞಾನವನ್ನೀಯುವವನೆಲ್ಲಿ? ಆಕಾಶದ ಪಕ್ಷಿಗಳಿಗಿಂತ ಹೆಚ್ಚು ಬುದ್ದಿಕಲಿಸುವನೆಲ್ಲಿ? ಎನ್ನುವುದೇ ಇಲ್ಲ.


‘ದೇವರಿಂದಲೇ ಅವರೆಲ್ಲರೂ ಬೋಧನೆ ಪಡೆಯುವರು,’ ಎಂದು ಪ್ರವಾದಿಗಳ ಗ್ರಂಥದಲ್ಲಿ ಬರೆದಿದೆ. ಪಿತನಿಗೆ ಕಿವಿಕೊಟ್ಟು ಅವರಿಂದಲೇ ಕಲಿತುಕೊಂಡ ಪ್ರತಿ ಒಬ್ಬನೂ ನನ್ನ ಬಳಿಗೆ ಬರುತ್ತಾನೆ.


ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?


“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.


ಹೀಗೆ ನೀನು ನುಡಿದದ್ದು ಸರಿಯಲ್ಲವೆಂಬುದೇ ನನ್ನ ಉತ್ತರ; ದೇವರು ಮನುಷ್ಯರಿಗಿಂತ ದೊಡ್ಡವನು ಎಂಬುದೇ ಇದಕ್ಕೆ ಆಧಾರ.


ಸನ್ಮಾರ್ಗದಲಿ ಮುನ್ನಡೆಸೆನ್ನ ದೇವಾ, ಮುಕ್ತಿದಾತ I ಕಲಿಸೆನಗೆ, ನಿನಗಾಗಿ ಕಾದಿರುವೆ ಸತತ II


ತಪ್ಪಿಸಿಕೊಳ್ಳಲಿಲ್ಲ ನಾ ನಿನ್ನ ವಿಧಿಗಳಿಂದ I ನೀನೇ ನನಗದರ ಬೋಧನೆ ಮಾಡಿದ್ದರಿಂದ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು