Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:23 - ಕನ್ನಡ ಸತ್ಯವೇದವು C.L. Bible (BSI)

23 ದೇವರಿಗೆ ಮಾರ್ಗತೋರಿಸಬಲ್ಲವನಾರು? ಆತನಿಗೆ ‘ನೀನು ಮಾಡಿರುವುದು ಅನ್ಯಾಯ,’ ಎನ್ನಬಲ್ಲವನಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಆತನ ಮಾರ್ಗವನ್ನು ಆತನಿಗೆ ಯಾರು ನೇಮಿಸಿದರು? ‘ನೀನು ಅನ್ಯಾಯವನ್ನು ನಡೆಸಿದಿ’ ಎಂದು ಯಾರು ಹೇಳಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಆತನ ಮಾರ್ಗವನ್ನು ಆತನಿಗೆ ಯಾರು ನೇವಿುಸಿದರು? ನೀನು ಅನ್ಯಾಯವನ್ನು ನಡಿಸಿದಿ ಎಂದು ಹೇಳಬಲ್ಲವರಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ದೇವರಿಗೆ ಕೆಲಸವನ್ನು ನೇಮಿಸಲು ಯಾರಿಗೆ ಸಾಧ್ಯ? ಆತನಿಗೆ, ‘ನೀನು ತಪ್ಪನ್ನು ಮಾಡಿರುವೆ’ ಎಂದು ಹೇಳಲು ಯಾರಿಗೆ ಸಾಧ್ಯ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ದೇವರ ಮಾರ್ಗವನ್ನು ದೇವರಿಗೆ ನೇಮಿಸಿದವರ‍್ಯಾರು? ‘ನೀವು ಮಾಡಿರುವುದು ಅನ್ಯಾಯ,’ ಎಂದು ದೇವರಿಗೆ ಹೇಳುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:23
14 ತಿಳಿವುಗಳ ಹೋಲಿಕೆ  

“ಪ್ರಭುವಿನ ಮನಸ್ಸನ್ನರಿತವರಾರು? ಪ್ರಭುವಿಗೆ ಉಪದೇಶಿಸುವವರಾರು?” ಎಂದು ಲಿಖಿತವಾಗಿದೆ. ನಾವಾದರೋ, ಕ್ರಿಸ್ತಯೇಸುವಿನ ಮನೋಭಾವನೆಯುಳ್ಳವರು.


ಅನ್ಯಾಯವಾದ ತೀರ್ಪನು ಕೊಡುತ್ತಾನೆಯೆ ದೇವರು? ಸತ್ಯವನ್ನು ಡೊಂಕುಮಾಡುತ್ತಾನೆಯೆ ಸರ್ವಶಕ್ತನು?


ದೈವಯೋಜನೆಯಂತೆಯೇ ಸಕಲವೂ ಸಂಭವಿಸುತ್ತದೆ. ದೇವರು ಆದಿಯಲ್ಲೇ ಸಂಕಲ್ಪಿಸಿದ್ದಂತೆ ತಮ್ಮ ಚಿತ್ತಕ್ಕನುಗುಣವಾಗಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಮ್ಮನ್ನು ತಮ್ಮವರನ್ನಾಗಿ ಆರಿಸಿಕೊಂಡರು.


“ಪ್ರಭುವಿನ ಮನಸ್ಸನ್ನು ಅರಿತವರಾರು? ಅವರಿಗೆ ಉಪದೇಶಿಸುವವರಾರು?


ಆದರೆ ನಿನ್ನದು ಕಠಿಣ ಹೃದಯ, ಮೊಂಡುಸ್ವಭಾವ. ಆದ್ದರಿಂದ ದೇವರ ಕೋಪ ಹಾಗು ನ್ಯಾಯವಾದ ತೀರ್ಪು ವ್ಯಕ್ತವಾಗುವ ದಿನದಂದು ನಿನಗೆ ವಿಧಿಸಲಾಗುವ ಶಿಕ್ಷೆಯನ್ನು ನೀನಾಗಿಯೇ ಸಂಗ್ರಹಿಸಿಕೊಳ್ಳುತ್ತಿದ್ದೀಯೆ.


ಹೀಗಿರಲು ಬುದ್ದಿವಂತರೇ, ನನ್ನ ಮಾತುಗಳಿಗೆ ಕಿವಿಗೊಡಿ ದೇವರು ಕೆಟ್ಟದ್ದನ್ನು ಮಾಡಿಯಾನೆಂಬ ಯೋಚನೆ ದೂರವಿರಲಿ ಸರ್ವಶಕ್ತನು ಅನ್ಯಾಯವನು ಎಸಗಿಯಾನೆಂಬ ಭಾವನೆ ಬಾರದಿರಲಿ.


ಹೀಗಿರಲಾಗಿ, ನಾವು ಏನೆಂದು ಹೇಳೋಣ? ದೇವರಲ್ಲಿ ಅನ್ಯಾಯವಿದೆಯೆಂದು ಹೇಳೋಣವೆ? ಎಂದಿಗೂ ಅಲ್ಲ.


ನಮ್ಮ ಅಕ್ರಮ ನಡತೆ ದೇವರ ನ್ಯಾಯನೀತಿಯನ್ನು ಮತ್ತಷ್ಟು ಸ್ಪಷ್ಟವಾಗಿ ತೋರಿಸುವ ಸಾಧನವಾದರೆ ಆಗ ಏನು ಹೇಳುವುದು? ಆ ಅಕ್ರಮವಾಗಿ ದೇವರು ನಮ್ಮ ಮೇಲೆ ಕೋಪ ಕಾರಿದರೆ ಅದು ಅನ್ಯಾಯವೆಂದು ನಾವು ಹೇಳಬಹುದೆ? (ಮನುಷ್ಯನಿಗೆ ಸಹಜವಾಗಿ ಏಳುವ ಪ್ರಶ್ನೆಯಿದು)


ಏನು, ನನ್ನ ನಿರ್ಣಯವನ್ನು ನೀನು ಖಂಡಿಸುತ್ತೀಯೋ? ನೀನು ನಿರ್ದೋಷಿಯೆನಿಸಿಕೊಳ್ಳಲು ನನ್ನನ್ನು ದೋಷಿಯನ್ನಾಗಿಸುತ್ತೀಯೋ?


“ನಿಮಗೆ ಪೊರೆಬಂಡೆ ಆತ, ಆತನ ಕಾರ್ಯ ದೋಷರಹಿತ ಆತನ ಮಾರ್ಗ ನ್ಯಾಯಯುತ, ಆ ದೇವ ನಂಬಿಕಸ್ತ. ಆತ ನಿರ್ವಂಚಕ, ಯಥಾರ್ಥನು ಹಾಗು ನೀತಿವಂತ.”


ದೇವರಿಗೆ ಜ್ಞಾನಬೋಧೆ ಮಾಡಬಲ್ಲವನು ಇದ್ದಾನೆಯೇ? ಉನ್ನತರಿಗೂ ನ್ಯಾಯತೀರಿಸುವಂಥವನು ಆತನೇ ಅಲ್ಲವೇ?


ಹೌದು, ದೇವರು ಎಂದಿಗೂ ಕೆಡುಕನು ಮಾಡನು ಸರ್ವಶಕ್ತನು ಎಂದಿಗೂ ನೇರವಾದುದನು ಡೊಂಕುಮಾಡನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು