Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:24 - ಕನ್ನಡ ಸತ್ಯವೇದವು C.L. Bible (BSI)

24 ಮಾನವರು ಸ್ತುತಿಸಿರುವ ಆತನ ಕಾರ್ಯಗಳನ್ನ ನೀನೂ ಕೂಡ ಹೊಗಳಲು ಮರೆಯಬೆಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಮನುಷ್ಯರು ಕೀರ್ತಿಸುವ, ಆತನ ಕೆಲಸವನ್ನು ಹೊಗಳಲು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

24 ಮನುಷ್ಯರು ಕೀರ್ತಿಸಿರುವ ಆತನ ಕೆಲಸವನ್ನು ಹೊಗಳಲು ಮರೆಯಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ದೇವರನ್ನು ಆತನ ಕಾರ್ಯಗಳಿಗಾಗಿ ಕೊಂಡಾಡಲು ಮರೆಯಬೇಡ. ಜನರು ಆತನನ್ನು ಕುರಿತು ಅನೇಕ ಸುತ್ತಿಗೀತೆಗಳನ್ನು ಬರೆದಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ಮನುಷ್ಯರು ಹೊಗಳಿ ಹಾಡುವ ಹಾಡುಗಳಿಂದ, ದೇವರ ಕೃತ್ಯಗಳನ್ನು ಉನ್ನತಪಡಿಸಲು ನೆನಸಿಕೋ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:24
26 ತಿಳಿವುಗಳ ಹೋಲಿಕೆ  

ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ಆಗ ಹೀಗೆಂದು ಮರಿಯಳು ಹೊಗಳಿದಳು:


ಸುತ್ಯರ್ಹನು ಸ್ವಾಮಿದೇವನು, ಇಸ್ರಯೇಲರ ದೇವನು I ಆತನೋರ್ವನೇ ಮಹತ್ಕಾರ್ಯಗಳನು ಎಸಗುವಂತವನು II


ನೆಬೂಕದ್ನೆಚ್ಚರನಾದ ನಾನು ಪರಲೋಕ ರಾಜನನ್ನು ಹೊಗಳಿ, ಕೊಂಡಾಡಿ, ಕೀರ್ತಿಸುತ್ತೇನೆ: ಆತನ ಕಾರ್ಯಗಳೆಲ್ಲವು ಸತ್ಯ, ಆತನ ಮಾರ್ಗಗಳೆಲ್ಲವು ನ್ಯಾಯ, ಗರ್ವಿಷ್ಠರನ್ನು ಆತ ತಗ್ಗಿಸಬಲ್ಲ.


ದೇವರ ಸೂಚಕಕಾರ್ಯಗಳು ಎಷ್ಟೋ ಅತಿಶಯ! ಅವರ ಅದ್ಭುತಗಳು ಎಷ್ಟೋ ಅಪಾರ! ಅವರ ರಾಜ್ಯ ಶಾಶ್ವತ ಸಾಮ್ರಾಜ್ಯ; ಅವರ ಆಳ್ವಿಕೆ ತಲತಲಾಂತರಕ್ಕೂ ಸ್ಥಿರ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಪ್ರಭುವಿನ ಮಹಿಮೆಯು ಮಹೋನ್ನತ ಎನ್ನುವರು I ಆತನ ಮಾರ್ಗಗಳನು ಹಾಡಿ ಹರಸುವರು II


ಯುಗಯುಗಾಂತರಕು ದೃಢವಾಗಿರುವುವು I ಸತ್ಯನೀತಿಗಳು ಅವುಗಳಿಗೆ ಅಡಿಪಾಯವು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗಾತ ಎಸಗಿದ ಅತಿಶಯಗಳನು II


ಹೊಗಳಲಿ ಪ್ರಭುವಿನಚಲ ಪ್ರೀತಿಯನು I ಜನರಿಗೆ ಆತನೆಸಗಿದ ಅತಿಶಯಗಳನು II


ಸೃಜಿಸಿರುವೆ ಎಲ್ಲವನು ಸುಜ್ಞಾನದಿಂದ I ಜಗವೆಲ್ಲ ತುಂಬಿದೆ ನಿನ್ನ ಸೃಷ್ಟಿಯಿಂದ II


ನಾನಾದರೊ ಹೊಗಳಿ ಹಾಡುವೆ ದೇವಾ, ನಿನ್ನ ಸಾಮರ್ಥ್ಯವನು I ಉದಯಕಾಲದಲೆ ನಾ ಸಂಕೀರ್ತಿಸುವೆ ನಿನ್ನ ಪ್ರೀತಿ ಪ್ರೇಮವನು I ಸಂಕಟದಲ್ಲೆನಗಾದ ಆಶ್ರಯಗಿರಿ, ದುರ್ಗ, ನೀನಲ್ಲವೇನು? II


ಬನ್ನಿ, ಕೊಂಡಾಡುವ ಪ್ರಭು ದೇವನನು II ಘನಪಡಿಸೋಣ ಅವನ ಶ್ರೀನಾಮವನು II


ಅರಿಯರವರು ಪ್ರಭುವಿನ ಕಾರ್ಯಗಳನು, ಆತನ ಕೈಕೆಲಸಗಳನು I ಈ ಕಾರಣ ಕೆಡವಿಬಿಡುವನು ಪ್ರಭು, ಮರಳಿ ಏಳಬಿಡನವರನು II


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಆಗ ಮೋಶೆ ಮತ್ತು ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಸ್ತೋತ್ರವಾಗಿ ಈ ಕೀರ್ತನೆಯನ್ನು ಹಾಡಿದರು: “ಮಾಡೋಣ ಸರ್ವೇಶ್ವರನ ಗುಣಗಾನ ಮಹೋನ್ನತ ಆತ ಗಳಿಸಿದ ವಿಜಯ ಕುದುರೆಗಳನು ರಾಹುತರನು ಕಡಲಲ್ಲಿ ಕೆಡವಿ ನಾಶಮಾಡಿಹನು


ಆ ದಿನ ದೆಬೋರಳು ಮತ್ತು ಅಬೀನೋವಮನ ಮಗ ಬಾರಾಕನು ಈ ಗೀತೆಯನ್ನು ಹಾಡಿದರು:


ಹಾಡಿ ಪಾಡಿ ಹೊಗಳಿರಿ ಆತನನು I ಧ್ಯಾನಿಸಿ ಆತನ ಪವಾಡಗಳನು II


ಮಾನವರೆಲ್ಲರು ಅದನ್ನು ಕಂಡಿರುವರು ನರರಾದ ನಾವು ದೂರದಿಂದ ನೋಡಬಹುದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು