Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:26 - ಕನ್ನಡ ಸತ್ಯವೇದವು C.L. Bible (BSI)

26 ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರ್ಷಗಳು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

26 ಆಹಾ, ದೇವರು ಮಹೋನ್ನತನಾಗಿದ್ದಾನೆ, ನಾವು ಆತನನ್ನು ಅರಿಯಲಾರೆವು; ಆತನ ವರುಷಗಳು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 ಹೌದು, ದೇವರೇ ಮಹೋನ್ನತನು. ಆತನ ಮಹತ್ವವನ್ನು ನಾವು ಅರ್ಥಮಾಡಿಕೊಳ್ಳಲಾರೆವು. ಆತನು ಎಂದಿನಿಂದ ಜೀವಿಸಿರುವನೋ ನಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ದೇವರು ಮಹೋನ್ನತರು; ದೇವರು ನಮ್ಮ ಅರಿವಿಗೆ ನಿಲುಕರು. ದೇವರ ವರ್ಷಗಳು ಅಸಂಖ್ಯಾತವಾಗಿವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:26
14 ತಿಳಿವುಗಳ ಹೋಲಿಕೆ  

ಬೆಟ್ಟಗಳು ಹುಟ್ಟುವುದಕೆ ಮುಂಚಿನಿಂದ I ಭೂದೇಶಗಳು ಆಗುವುದಕೆ ಮೊದಲಿಂದ I ನೀನೆಮಗೆ ದೇವರು ಯುಗಯುಗಗಳಿಂದ II


ಪ್ರಭು ಮಹಾತ್ಮನು, ಸ್ತುತ್ಯರ್ಹನು I ಆತನ ಮಹಿಮೆ ಅಗಮ್ಯವಾದದು II


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


“ದೇವರು ನಿಜವಾಗಿ ಭೂಲೋಕದಲ್ಲಿ ವಾಸಿಸುವರೋ? ಆಕಾಶವೂ, ಉನ್ನತೋನ್ನತ ಆದ ಆಕಾಶವೂ, ನಿಮ್ಮ ವಾಸಕ್ಕೆ ಸಾಲದು; ಹೀಗಿರುವಲ್ಲಿ ನಾನು ಕಟ್ಟಿಸಿದ ಈ ಮಂದಿರವು ಹೇಗೆ ತಾನೆ ಸಾಕಾದೀತು?


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ಮುದುರಿ ಮೂಲೆಗೆಸೆಯುವೆ ಇವನ್ನು ಮೇಲಂಗಿಯಂತೆ. ಬದಲಾಯಿಸುವೆ ನೀ ಅವನ್ನು ಉಡುಪಿನಂತೆ ನೀನಾದರೋ ಬದಲಾಗದೆ ಇರುವೆ ಮೊದಲಿನಂತೆ. ಮುಗಿವೇ ಇರದು ನಿನ್ನ ಬಾಳುವೆಗೆ,” ಎಂದೂ ಸಹ ದೇವರು ನುಡಿದಿದ್ದಾರೆ.


ಪ್ರಿಯರೇ, ಮತ್ತೊಂದು ವಿಷಯವನ್ನು ಮರೆಯದಿರಿ: ಪ್ರಭುವಿನ ದೃಷ್ಟಿಯಲ್ಲಿ ಒಂದು ದಿನ ಸಾವಿರ ವರ್ಷಗಳಂತೆಯೂ ಮತ್ತು ಸಾವಿರ ವರ್ಷಗಳು ಒಂದು ದಿನದಂತೆಯೂ ಇವೆ.


ನಿನ್ನ ದಿನಗಳು ಮನುಷ್ಯನ ಅಲ್ಪದಿನಗಳಂತಿವೆಯೋ? ನಿನ್ನ ವರುಷಗಳು ಮಾನವನ ವರುಷಗಳಷ್ಟೆಯೋ?


ಮಾನವರೆಲ್ಲರು ಅದನ್ನು ಕಂಡಿರುವರು ನರರಾದ ನಾವು ದೂರದಿಂದ ನೋಡಬಹುದು.


ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು