Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:32 - ಕನ್ನಡ ಸತ್ಯವೇದವು C.L. Bible (BSI)

32 ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆದು ಗುರಿಮುಟ್ಟುಲು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

32 ಕೈತುಂಬಾ ಸಿಡಿಲನ್ನು ಹಿಡಿದು ನೀನು ವೈರಿಯನ್ನು ಹೊಡೆ ಎಂದು ಅದನ್ನು ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ದೇವರು ತನ್ನ ಕೈಗಳಲ್ಲಿ ಸಿಡಿಲನ್ನು ಹಿಡಿದುಕೊಂಡು ಅದಕ್ಕೆ ಆಜ್ಞಾಪಿಸಲು ಅದು ಆತನ ಚಿತ್ತಕ್ಕನುಸಾರವಾಗಿ ಹೊಡೆಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ದೇವರು ತಮ್ಮ ಕೈಯಲ್ಲಿ ಮಿಂಚನ್ನು ಹಿಡಿದುಕೊಂಡು, ಅದನ್ನು ಗುರಿಮುಟ್ಟುವಂತೆ ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:32
12 ತಿಳಿವುಗಳ ಹೋಲಿಕೆ  

ಅನೇಕ ದಿನಗಳವರೆಗೆ ಸೂರ್ಯನನ್ನಾಗಲಿ ನಕ್ಷತ್ರಗಳನ್ನಾಗಲಿ ನೋಡಲಾಗಲಿಲ್ಲ. ಗಾಳಿ ತೀವ್ರವಾಗಿತ್ತು. ಕಟ್ಟಕಡೆಗೆ ನಾವು ಬದುಕುವ ಆಶೆಯನ್ನೇ ತೊರೆಯಬೇಕಾಯಿತು.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II


ದೇವರು ಹೇಗೆ ಮೋಡಗಳನು ನಿಯಂತ್ರಿಸುತ್ತಾನೆಂದು ಅರಿತಿರುವೆಯಾ? ಅವುಗಳಿಂದ ಸಿಡಿಲು ಹೇಗೆ ಹೊಳೆದುಬರುತ್ತದೆಂದು ತಿಳಿದಿರುವೆಯಾ?


ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.


ಪೂರ್ಣಚಂದ್ರನನ್ನು ಮರೆಮಾಡುತ್ತಾನೆ ಅದರ ಮುಂದೆ ಮೋಡ ಕವಿಸುತ್ತಾನೆ.


ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ.


ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?


ಪ್ರಭು, ನಿನ್ನ ಗದರಿಕೆಯಿಂದ, ನಿನ್ನಾ ಶ್ವಾಸಭರದಿಂದ I ಕಾಣಿಸಿಕೊಂಡಿತು ಇಂಗಿಹೋದ ಸಮುದ್ರದ ತಳ I ತೋರಿಬಂದಿತು ಭೂಲೋಕದ ಅಸ್ತಿಭಾರ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು