Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:4 - ಕನ್ನಡ ಸತ್ಯವೇದವು C.L. Bible (BSI)

4 ನನ್ನ ಮಾತು ಸುಳ್ಳಲ್ಲವೆಂಬುದು ನಿಶ್ಚಯ ನಿನ್ನ ಬಳಿಯಿರುವನು ಜ್ಞಾನಪೂರ್ಣನೋರ್ವ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ನನ್ನ ಮಾತುಗಳು ಸುಳ್ಳಲ್ಲವೆಂಬುದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ನನ್ನ ಮಾತುಗಳು ಸುಳ್ಳಲ್ಲವೆಂಬದು ನಿಶ್ಚಯ, ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಯೋಬನೇ, ನಾನು ಹೇಳುವ ಪ್ರತಿಯೊಂದು ಮಾತೂ ಸತ್ಯ. ನಿನ್ನ ಬಳಿಯಲ್ಲಿ ಜ್ಞಾನಪೂರ್ಣನೊಬ್ಬನು ಇದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ನಿಜವಾಗಿ ನನ್ನ ಮಾತುಗಳು ಸುಳ್ಳಲ್ಲ; ತಿಳುವಳಿಕೆಯಲ್ಲಿ ಸಂಪೂರ್ಣನಾದ ಒಬ್ಬನಾಗಿ ನಾನು ನಿನ್ನ ಬಳಿಯಲ್ಲಿಯೇ ಇದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:4
17 ತಿಳಿವುಗಳ ಹೋಲಿಕೆ  

ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?


ಸಹೋದರರೇ, ಬುದ್ಧಿಯ ವಿಷಯದಲ್ಲಿ ಬಾಲಕರಾಗಿರಬೇಡಿ. ದುಷ್ಟ ವಿಷಯಗಳಲ್ಲಿ ಶಿಶುಗಳಂತೆ ಮುಗ್ಧರಾಗಿರಿ; ಬುದ್ಧಿಯ ವಿಷಯದಲ್ಲಿ ಪ್ರಾಯಸ್ಥರಂತೆ ಪ್ರೌಢರಾಗಿರಿ.


ಕ್ರಿಸ್ತಯೇಸುವಿನ ಸೇವಕನೂ ನಿಮ್ಮ ಸಭೆಗೆ ಸೇರಿದವನೂ ಆದ ಎಪಫ್ರನಿಂದಲೂ ನಿಮಗೆ ವಂದನೆಗಳು. ನೀವು ಮಾಡುವ ಎಲ್ಲಾ ಕಾರ್ಯಗಳಲ್ಲೂ ದೇವರ ಚಿತ್ತಕ್ಕೆ ವಿಧೇಯರಾಗಿ ಸ್ಥಿರ ಹಾಗೂ ಸಿದ್ಧ ಕ್ರೈಸ್ತರಾಗಿ ಬಾಳಬೇಕೆಂದು ಅವನು ನಿಮಗಾಗಿ ಸದಾ ಆಸಕ್ತಿಯಿಂದ ಪ್ರಾರ್ಥಿಸುತ್ತಿದ್ದಾನೆ.


ಎಷ್ಟೋ ಮಂದಿ ದೇವರ ವಾಕ್ಯವನ್ನು ಕಲಬೆರಕೆ ಮಾಡಿ ವ್ಯಾಪಾರಮಾಡುತ್ತಾರೆ. ನಾವು ಹಾಗಲ್ಲ; ದೇವರಿಂದಲೇ ನಿಯೋಜಿತರಾಗಿ, ದೇವರ ಸಮಕ್ಷಮದಲ್ಲಿ ಕ್ರಿಸ್ತಯೇಸುವಿನ ಅನ್ಯೋನ್ಯತೆಯಲ್ಲಿ ನಾವು ಯಥಾರ್ಥವಾದುದನ್ನೇ ಉಪದೇಶಿಸುವವರು.


ಕ್ರಿಸ್ತಮಾರ್ಗದ ಬಗ್ಗೆ ಚೆನ್ನಾಗಿ ಅರಿತುಕೊಂಡಿದ್ದ ಫೆಲಿಕ್ಸನು, “ಸಹಾಸ್ರಾಧಿಪತಿ ಲೂಸಿಯನು ಬಂದ ಮೇಲೆ ನಾನು ಈ ವ್ಯಾಜ್ಯವನ್ನು ತೀರ್ಮಾನಿಸುತ್ತೇನೆ,” ಎಂದು ಹೇಳಿ ವಿಚಾರಣೆಯನ್ನು ಮುಂದೂಡಿದನು.


ನಾನು ಆಮೂಲಾಗ್ರವಾಗಿ ವಿಚಾರಿಸಿದ ಅವೆಲ್ಲವನ್ನು ನಿನಗೋಸ್ಕರ ಕ್ರಮಬದ್ಧವಾಗಿ ಬರೆಯುವುದು ಉಚಿತವೆಂದು ನನಗೂ ತೋರಿತು.


ನನ್ನ ಬಾಯಿ ಬೋಧಿಸುವುದು ಸುಜ್ಞಾನವನು I ನನ್ನ ಮನ ಧ್ಯಾನಿಸುವುದು ವಿವೇಚನೆಯನು II


ನನ್ನ ನುಡಿ ವ್ಯಕ್ತಪಡಿಸುತ್ತದೆ ಹೃದಯದ ಯಥಾರ್ಥತೆಯನು ನನ್ನ ತುಟಿ ನುಡಿಯುತ್ತದೆ ಸತ್ಯವೆಂದು ಅರಿತವುಗಳನು.


ಇಂತಿರಲು ನಿಮ್ಮ ಉಪಶಮನದ ಮಾತು ವ್ಯರ್ಥ ನಿಮ್ಮ ಮಾತುಗಳ ಸಾರಾಂಶ ಮಿತ್ರದ್ರೋಹ.”


ಕೇಳಿ, ನಿಮ್ಮ ಆಲೋಚನೆಗಳನು ನಾನು ಬಲ್ಲೆ ನನಗೆ ವಿರುದ್ಧ ನೀವು ಮಾಡುವ ಕುಯುಕ್ತಿ ನನಗೆ ತಿಳಿದಿದೆ.


ದೇವರ ಪಕ್ಷ ವಹಿಸಿ ನೀವು ಅನ್ಯಾಯ ನುಡಿಯುವಿರೋ? ಅವರಿಗೋಸ್ಕರ ಕಪಟ ಮಾತಾಡುವಿರೋ?


ನೀವು ಸುಳ್ಳಿಗೆ ಸುಣ್ಣ ಬಳಿಯುವವರು ನೀವೆಲ್ಲರು ಏತಕ್ಕೂ ಬಾರದ ವೈದ್ಯರು.


ಈಗ ದಯವಿಟ್ಟು ನೋಡಿ ನನ್ನ ಕಡೆಗೆ ಸುಳ್ಳಾಡೆನು ನಿಮ್ಮ ಮುಖದೆದುರಿಗೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು