Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:5 - ಕನ್ನಡ ಸತ್ಯವೇದವು C.L. Bible (BSI)

5 ದೇವರು ಸರ್ವಶಕ್ತನು, ಯಾರನ್ನೂ ತುಚ್ಛೀಕರಿಸನು ಆತನ ಬುದ್ಧಿಸಾಮರ್ಥ್ಯ ಅಪಾರವಾದುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವುದಿಲ್ಲ, ಆತನ ಬುದ್ಧಿ ಸಾಮರ್ಥ್ಯವು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಇಗೋ, ದೇವರು ಮಹಾಶಕ್ತನಾಗಿದ್ದರೂ ಯಾರನ್ನೂ ತಿರಸ್ಕರಿಸುವದಿಲ್ಲ. ಆತನ ಬುದ್ಧಿಸಾಮರ್ಥ್ಯವು ಅಪಾರವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ದೇವರು ಮಹಾ ಶಕ್ತಿಶಾಲಿಯಾಗಿದ್ದರೂ ಜನರನ್ನು ತಿರಸ್ಕರಿಸುವುದಿಲ್ಲ. ದೇವರು ಮಹಾ ಬಲಶಾಲಿಯೂ ಹೌದು, ಮಹಾ ಜ್ಞಾನಿಯೂ ಹೌದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ನೋಡು, ದೇವರು ಸರ್ವಶಕ್ತರು, ಆದರೂ ಯಾರನ್ನೂ ತಿರಸ್ಕಾರ ಮಾಡುವುದಿಲ್ಲ. ಶಕ್ತಿವಂತರಾದ ದೇವರು ತಮ್ಮ ಉದ್ದೇಶದಲ್ಲಿ ದೃಢವಾಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:5
17 ತಿಳಿವುಗಳ ಹೋಲಿಕೆ  

ತೃಣೀಕರಿಸನು, ತಿರಸ್ಕರಿಸನು ದಲಿತನನು I ವಿಮುಖನಾಗನು, ಪ್ರಾರ್ಥನೆಗೆ ಕಿವಿಗೊಡುವನು II


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಉನ್ನತನಾದರೂ ಗಮನಿಸುವನು ಪ್ರಭು ದೀನರನು I ದೂರದಿಂದಲೇ ಗುರುತಿಸುವನಾತನು ಗರ್ವಿಷ್ಠರನು II


ನೀವು ಆಲೋಚನೆಯಲ್ಲಿ ಶ್ರೇಷ್ಟರು, ಕಾರ್ಯದಲ್ಲಿ ಸಮರ್ಥರು. ನರಮಾನವರ ಮಾರ್ಗಗಳನ್ನೆಲ್ಲ ಕಣ್ಣಾರೆ ನೋಡುವವರು. ಪ್ರತಿಯೊಬ್ಬನಿಗೂ ಅವನವನ ಕೃತ್ಯಗಳಿಗೂ ನಡತೆಗೂ ತಕ್ಕ ಫಲಕೊಡುವವರು.


ನಮ್ಮ ಪ್ರಭು ಘನವಂತ, ಪರಾಕ್ರಮಿ I ಅಪರಿಮಿತವಾದುದು ಆತನ ಜ್ಞಾನನಿಧಿ II


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ನನ್ನ ದಾಸದಾಸಿಯರು ನನ್ನ ಮೇಲೆ ತಪ್ಪುಹೊರಿಸಿದ್ದರೆ ನಾನು ಆ ತಪ್ಪನು ಅಸಡ್ಡೆ ಮಾಡಿದವನಾಗಿದ್ದರೆ,


ದುರುಳರ ಯೋಜನೆಯನು ನೀನು ಪುರಸ್ಕರಿಸಬಹುದೆ? ನಿನ್ನ ಕೈಕೃತಿಯಾದ ನನ್ನನು ತಿರಸ್ಕರಿಸಿ ಬಾಧಿಸುವುದು ಸರಿಯೆ?


ಶಕ್ತಿಪ್ರಯೋಗದ ಮಾತೆತ್ತಿದರೆ, ‘ಇಗೋ, ನಾನೇ ಶಕ್ತಿಸ್ವರೂಪ’ ಎನ್ನುತ್ತಾನೆ. ನ್ಯಾಯವಿಚಾರಣೆ ಆಗಲಿಯೆಂದರೆ, ‘ನನ್ನನ್ನು ಕರೆಯಿಸುವವನಾರು?’ ಎನ್ನುತ್ತಾನೆ.


ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!


ಶಕ್ತಿಸ್ವರೂಪಿಯೇ, ನ್ಯಾಯಪ್ರಿಯ ರಾಜನೇ I ನ್ಯಾಯನೀತಿ, ಯಥಾರ್ಥತೆಗೆ ಸ್ಥಾಪಕ ನೀನೆ I ಇಸ್ರಯೇಲ ವಂಶಕ್ಕಿದನು ಮನದಟ್ಟಾಗಿಸಿದವ ನೀನೆ II


“ದೇವರು ಮಹೋನ್ನತ ಪ್ರಭು; ಭಯಭಕ್ತಿಗೆ ಪಾತ್ರನು ಉನ್ನತಲೋಕದಲ್ಲಿ ಶಾಂತಿಸಮಾಧಾನವನು ಸ್ಥಾಪಿಸಿಹನು.


ಬಡಬಗ್ಗರ ಮೊರೆಗೆ ಪ್ರಭು ಕಿವಿಗೊಡದಿರನು I ಸೆರೆಯಲ್ಲಿಹ ತನ್ನವರನು ತಿರಸ್ಕರಿಸನು II


ತಿರಸ್ಕರಿಸನಾತ ನಿರ್ಗತಿಕರ ಮೊರೆಯನು I ನೆರವೇರಿಸದೆ ಬಿಡನು ಅವರ ಕೋರಿಕೆಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು