Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:6 - ಕನ್ನಡ ಸತ್ಯವೇದವು C.L. Bible (BSI)

6 ದುರುಳರ ಪ್ರಾಣವನ್ನು ಆತ ಉಳಿಸನು ನಿರ್ಗತಿಕರ ನ್ಯಾಯವನು ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ದುಷ್ಟರ ಪ್ರಾಣವನ್ನು ಉಳಿಸುವುದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ದುಷ್ಟರ ಪ್ರಾಣವನ್ನು ಉಳಿಸುವದಿಲ್ಲ, ಗತಿಹೀನರ ನ್ಯಾಯವನ್ನು ಸ್ಥಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ದೇವರು ದುಷ್ಟರನ್ನು ಜೀವಿಸಲು ಅವಕಾಶ ಕೊಡುವುದಿಲ್ಲ. ಆತನು ಬಡಜನರಿಗೆ ಯಾವಾಗಲೂ ನ್ಯಾಯದೊರಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದುಷ್ಟರು ಬಹುಕಾಲ ಬಾಳಲು ದೇವರು ಅನುಮತಿಸುವುದಿಲ್ಲ; ಆದರೆ ದೇವರು ಬಾಧೆಪಡುವವರಿಗೆ ಅವರ ಹಕ್ಕುಗಳನ್ನು ಕೊಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:6
21 ತಿಳಿವುಗಳ ಹೋಲಿಕೆ  

ಪ್ರಭು ನೀ ದೀನದಲಿತರ ವಕೀಲನೆಂದು ನಾ ಬಲ್ಲೆ I ಬಡವರಿಗೆ ನ್ಯಾಯ ದೊರಕಿಸುವವ ನೀ ಅಲ್ಲವೆ? II


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ಹೀಗೆ, ಸಜ್ಜನರನ್ನು ಸಂಕಟಶೋಧನೆಗಳಿಂದ ಸಂರಕ್ಷಿಸಲು, ದುರ್ಜನರನ್ನು ಅಂತಿಮ ನ್ಯಾಯತೀರ್ಪಿನ ದಿನದವರೆಗೂ ಶಿಕ್ಷಾವಸ್ಥೆಯಲ್ಲಿರಿಸಲು ಪ್ರಭುವಿಗೆ ತಿಳಿದಿದೆ.


ಆದರೆ ಬಡಬಗ್ಗರಿಗೆ ತೀರ್ಪಿಡುವನು ನ್ಯಾಯನೀತಿಯಿಂದ ನಾಡ ದಲಿತರಿಗೆ ನಿರ್ಣಯಿಸುವನು ಯಥಾರ್ಥತೆಯಿಂದ ದಂಡಿಸುವನು ಲೋಕವನು ನುಡಿಯೆಂಬ ದಂಡದಿಂದ ಕೊಲ್ಲುವನು ಕೆಡುಕರನು ಉಸಿರೆಂಬ ಕತ್ತಿಯಿಂದ.


ದೀನದಲಿತರನಾತ ಉದ್ಧರಿಸಲಿ I ಬಡಬಗ್ಗರಿಗೆ ನ್ಯಾಯ ದೊರಕಿಸಲಿ I ಪ್ರಜಾಹಿಂಸಕರನು ಸದೆಬಡಿಯಲಿ II


ದುರ್ಜನರನು ದೇವಾ, ನೀ ದಬ್ಬಿಬಿಡುವೆ ಪಾತಾಳಕೆ I ಅರ್ಧಾಯುಷ್ಯವನೂ ಬಾಳಬಿಡೆ ವಂಚಕ ಕೊಲೆಗಾರರಿಗೆ I ನಾನಾದರೋ ಓ ದೇವಾ, ನೆಮ್ಮಿಗೊಂಡಿರುವೆ ನಿನಗೆ II


ರಕ್ತಪಾತ ಲೆಕ್ಕಿಸಿ ಸೇಡು ತೀರಿಸುವಾತ I ದೀನದಲಿತರ ಮೊರೆಯನೆಂದಿಗು ಮರೆಯನಾತ II


ದುರುಳನು ಆಪತ್ತಿನಾ ದಿನ ಸುರಕ್ಷಿತನಾಗಿರುತ್ತಾನೆ ದೇವರ ಆ ಕೋಪೋದ್ರೇಕದ ದಿನ ಆಶ್ರಯ ಪಡೆಯುತ್ತಾನೆ.


ಅವಮಾನ ಮುಸುಕುವುದು ನಿನ್ನ ಹಗೆಗಳನ್ನು ದುರುಳರಾ ನಿವಾಸವಾದರೋ ನಿರ್ಮೂಲವಾಗುವುದು.”


ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?


ಅಪರಾಧಿಗಳಂತೆ ಅವರನು ದಂಡಿಸುವನು ಎಲ್ಲರು ನೋಡುವಂತೆ ಅವರನು ಖಂಡಿಸುವನು.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ಭಜಿಸುವರು ಸಜ್ಜನರು ನಿನ್ನಾ ಸಿರಿನಾಮವನು I ಬಾಳ್ವರು ಸುಮನಸ್ಕರು ಬಿಡದೆ ನಿನ್ನ ಸನ್ನಿಧಿಯನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು