Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 36:7 - ಕನ್ನಡ ಸತ್ಯವೇದವು C.L. Bible (BSI)

7 ತನ್ನ ಕಟಾಕ್ಷವನ್ನು ಸಜ್ಜನರ ಮೇಲೆ ಅಚಲವಾಗಿರಿಸುವನು ರಾಜರಂತೆ ಸಿಂಹಾಸನದ ಮೇಲೆ ಅವರನು ಕುಳ್ಳಿರಿಸುವನು ಅಮರವಾದ ಉನ್ನತ ಪದವಿಗೆ ಅವರನು ಏರಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ, ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕುಳಿತುಕೊಳ್ಳುವ, ಉನ್ನತಪದವಿಗೆ ಅವರನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

7 ನೀತಿವಂತರಿಂದ ತನ್ನ ಕಟಾಕ್ಷವನ್ನು ತಿರುಗಿಸದೆ ಅರಸರೊಂದಿಗೆ ಸಿಂಹಾಸನದ ಮೇಲೆ ಶಾಶ್ವತವಾಗಿ ಕೂತುಕೊಳ್ಳುವ ಉನ್ನತಪದವಿಗೆ ಅವರನ್ನು ತರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ನೀತಿವಂತರನ್ನು ದೇವರು ಪರಿಪಾಲಿಸುವನು; ಆತನು ಒಳ್ಳೆಯವರನ್ನು ಅಧಿಪತಿಗಳನ್ನಾಗಿ ನೇಮಿಸುವನು; ಅವರಿಗೆ ಸದಾಕಾಲ ಗೌರವ ದೊರೆಯುವಂತೆ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ದೇವರು ನೀತಿವಂತರಿಂದ ತಮ್ಮ ಕಣ್ಣುಗಳನ್ನು ತೊಲಗಿಸುವುದಿಲ್ಲ; ದೇವರು ನೀತಿವಂತರನ್ನು ಅರಸುಗಳ ಸಂಗಡ ಸಿಂಹಾಸನದಲ್ಲಿ ಕುಳ್ಳಿರಿಸುವರು; ಹೌದು, ದೇವರು ಅವರನ್ನು ಎಂದೆಂದಿಗೂ ಉನ್ನತಕ್ಕೇರಿಸುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 36:7
24 ತಿಳಿವುಗಳ ಹೋಲಿಕೆ  

ಸಜ್ಜನರನು ಪ್ರಭು ಕಟಾಕ್ಷಿಸುವನು I ಅವರ ಮೊರೆಗಾತ ಕಿವಿಗೊಡುವನು II


ಪ್ರಭುವಾದರೋ ಕಟಾಕ್ಷಿಸುವನು ತನಗಂಜಿ ನಡೆದವರನು I ಲಕ್ಷಿಸುವನು ತನ್ನ ಕೃಪೆಯನು ನಿರೀಕ್ಷಿಸುವವರನು II


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಪ್ರಭು ವಿಶ್ವಾಸಕ್ಕೆ ಪಾತ್ರರು. ಅವರು ನಿಮ್ಮನ್ನು ಸದೃಢರನ್ನಾಗಿ ಮಾಡಿ ಕೇಡಿನಿಂದ ನಿಮ್ಮನ್ನು ಕಾಪಾಡುವರು.


ಸರ್ವೇಶ್ವರ ಯೋಬನ ಮೊದಲನೆಯ ಸ್ಥಿತಿಗಿಂತಲೂ ಅವನ ಕಡೆಯ ಸ್ಥಿತಿಯನ್ನು ಹೀಗೆ ಅಧಿಕಗೊಳಿಸಿ ಆಶೀರ್ವದಿಸಿದರು.


ಯೆಹೂದ್ಯನಾದ ಮೊರ್ದೆಕೈಯಾದರೋ ಅರಸ ಅಹಷ್ವೇರೋಷನಿಗೆ ದ್ವಿತೀಯಸ್ಥಾನದವನೂ ಯೆಹೂದ್ಯರಲ್ಲಿ ಸನ್ಮಾನಿತನೂ ತನ್ನ ಬಂಧುಬಳಗದವರಲ್ಲಿ ಪ್ರೀತಿಪಾತ್ರನೂ ಸ್ವಜನರ ಹಿತಚಿಂತಕನೂ ಸ್ವಕುಲದವರೆಲ್ಲರಿಗೆ ಶಾಂತಿದೂತನೂ ಆಗಿದ್ದನು.


ನೀತಿವಂತರನು ಕಾಯುವನು ಸರ್ವೇಶ್ವರನು ಅವರ ವಿಜ್ಞಾಪನೆಗೆ ಕಿವಿಗೊಡುವನು. ಕೆಡುಕರಿಗಾದರೋ ಆತನು ವಿಮುಖನು,” ಎಂದು ಪವಿತ್ರಗ್ರಂಥದಲ್ಲಿ ಬರೆದಿದೆ.


ಏಳು ಸಾವಿರ ಕುರಿಗಳು, ಮೂರು ಸಾವಿರ ಒಂಟೆಗಳು, ಐನೂರು ಜೋಡಿ ಎತ್ತುಗಳು, ಮತ್ತು ಐನೂರು ಕತ್ತೆಗಳು ಅವನಿಗಿದ್ದವು. ಜೊತೆಗೆ, ಆತನಿಗಿದ್ದ ಸೇವಕರೋ ಹಲವಾರು. ಮೂಡಣ ನಾಡಿನವರಲ್ಲಿ ಆತನೇ ದೊಡ್ಡ ಐಶ್ವರ್ಯವಂತ.


ಪ್ರಸನ್ನವಾಗಿಹನು ದೇವ, ಸರ್ವೇಶ ನಿನ್ನ ಮಧ್ಯೆ ಕೊಡುವನಾ ಶೂರ ನಿನಗೆ ರಕ್ಷಣೆ ಹರ್ಷಾನಂದಗೊಳ್ಳುವನು ನಿನ್ನ ವಿಷಯದಲಿ ಪುನಶ್ಚೇತನಗೊಳಿಸುವನು ನಿನ್ನನು ಪ್ರಶಾಂತ ಪ್ರೀತಿಯಲಿ ಗಾನಗೀತೆಗಳಿಂದ ತೋಷಿಸುವನು ನಿನ್ನಲಿ ಹಬ್ಬಹುಣ್ಣಿಮೆಗಳ ತರದಲಿ.


ನೀನೇ ಅರಮನೆಯಲ್ಲಿ ಮುಖ್ಯಾಧಿಕಾರಿಯಾಗಿರಬೇಕು; ನಿನ್ನ ಅಪ್ಪಣೆಯ ಮೇರೆಗೆ ಪ್ರಜೆಗಳೆಲ್ಲರು ನಡೆದುಕೊಳ್ಳಬೇಕು; ಸಿಂಹಾಸನದ ವಿಷಯದಲ್ಲಿ ಮಾತ್ರ ನಾನು ನಿನಗಿಂತ ದೊಡ್ಡವನಾಗಿರುವೆನು,” ಎಂದು ಹೇಳಿದನು.


ಸರ್ವೇಶ್ವರ ಭೂಲೋಕದ ಎಲ್ಲಾ ಕಡೆ ದೃಷ್ಟಿಹರಿಸುತ್ತಾ ತಮ್ಮ ಕಡೆಗೆ ಯಥಾರ್ಥ ಮನಸ್ಸುಳ್ಳವರ ರಕ್ಷಣೆಗಾಗಿ ತಮ್ಮ ಪ್ರತಾಪವನ್ನು ತೋರ್ಪಡಿಸುತ್ತಾರೆ. ನೀವು ಈ ಕಾರ್ಯದಲ್ಲಿ ಬುದ್ಧಿಹೀನರಾಗಿ ನಡೆದುಕೊಂಡಿದ್ದೀರಿ; ಇಂದಿನಿಂದ ನಿಮಗೆ ಯುದ್ಧಗಳು ಇದ್ದೇ ಇರುತ್ತವೆ,” ಎಂದು ಹೇಳಿದನು.


ಆಲೋಚಿಸಿ ನೋಡು, ನಿರಪರಾಧಿ ಎಂದಾದರೂ ನಾಶವಾದುದುಂಟೆ ಸತ್ಯ-ಸಂಧರು ಎಲ್ಲಿಯಾದರೂ ನಿರ್ಮೂಲವಾದುದುಂಟೆ?


ಉನ್ನತಿಗೇರಿಸುತ್ತಾನೆ ದೀನದಲಿತರನು ಸುರಕ್ಷತೆಗೊಯ್ಯುತ್ತಾನೆ ದುಃಖಿತರನು.


ದೇವರು ಕೆಳಕ್ಕೆ ದಬ್ಬುತ್ತಾನೆ ಗರ್ವಿಗಳನು ಉದ್ಧರಿಸುತ್ತಾನೆ ದೀನಮನಸ್ಕರನು.


ಆತ ನನ್ನ ನಡತೆಯನ್ನೂ ನೋಡುತ್ತಾನೆ; ನನ್ನ ಹೆಜ್ಜೆಗಳನ್ನೂ ಎಣಿಸುತ್ತಾನಲ್ಲವೆ?


ನಿರ್ದೋಷಿಯಾದೆನ್ನನು ನೀನುದ್ಧರಿಸುವೆ I ಚಿರಕಾಲ ನಿನ್ನ ಸನ್ನಿಧಿಯಲ್ಲೆನ್ನನು ಇರಿಸುವೆ II


ವಸ್ತುಗಳನ್ನು ತಗುಲಿಹಾಕುವ ಮೊಳೆಯಂತೆ ಗಟ್ಟಿಯಾದ ಸ್ಥಳದಲ್ಲಿ ಅವನನ್ನು ಬಿಗಿಯಾಗಿ ನಿಲ್ಲಿಸುವೆನು. ಅಲ್ಲದೆ, ಅವನು ತನ್ನ ವಂಶದವರಿಗೆ ಗೌರವಪೀಠವಾಗಿರುವನು.”


ಅರಸನಾವನು ವಿಜೇತನಾಗನು ಮಹಾ ಸೇನಾಬಲದಿಂದಲೆ I ಶೂರನಾವನು ಜಯಶೀಲನಾಗನು ಕೇವಲ ಭುಜಬಲದಿಂದಲೆ II


ದುರ್ಜನರಿಗಾದರೋ ಪ್ರಭು ವಿಮುಖನು I ಅವರ ಹೆಸರನು ಧರೆಯಿಂದ ಅಳಿಸುವನು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು