Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:1 - ಕನ್ನಡ ಸತ್ಯವೇದವು C.L. Bible (BSI)

1 “ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 “ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು, ಮಿಡಿಯುತ್ತ ತನ್ನ ಸ್ಥಳದಿಂದ ಕದಲುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಇದಲ್ಲದೆ ನನ್ನ ಎದೆಯು ಅದಕ್ಕೆ ತತ್ತರಗೊಂಡು ತನ್ನ ಸ್ಥಳದಿಂದ ಹಾರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 “ಗುಡುಗು ಮಿಂಚುಗಳು ನನ್ನನ್ನು ಭಯಗೊಳಿಸಿವೆ. ನನ್ನ ಹೃದಯವು ಢವಢವನೆ ಬಡಿದುಕೊಳ್ಳುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 “ಇದನ್ನು ನೋಡಿದಾಗ ನನ್ನ ಹೃದಯವು ನಡುಗಿ, ಅದರ ಸ್ಥಳದಿಂದ ಜಿಗಿಯುವಂತಾಗುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:1
15 ತಿಳಿವುಗಳ ಹೋಲಿಕೆ  

ಇದ್ದಕ್ಕಿದ್ದಂತೆ ಭೀಕರ ಭೂಕಂಪ ಉಂಟಾಯಿತು. ಸೆರೆಮನೆಯ ಅಸ್ತಿವಾರವೇ ಕದಲಿತು. ಆ ಕ್ಷಣವೇ ಕದಗಳೆಲ್ಲಾ ತೆರೆದುವು. ಕೈದಿಗಳೆಲ್ಲರ ಬಂಧನಗಳು ಕಳಚಿಬಿದ್ದವು.


ಸೆರೆಮನೆಯ ಅಧಿಕಾರಿ ದೀಪವನ್ನು ತರಿಸಿ, ಒಳಗೆ ಧಾವಿಸಿ ಬಂದು, ಭಯದಿಂದ ನಡುಗುತ್ತಾ ಪೌಲ ಮತ್ತು ಸೀಲರ ಪಾದಕ್ಕೆ ಬಿದ್ದನು.


ಇದಕೇಳಿ ನಡುನಡುಗಿತು ನನ್ನ ಒಡಲು ಅದುರಿದವು ಆ ಶಬ್ದಕ್ಕೆ ನನ್ನ ತುಟಿಗಳು ಕೊಳೆತಂತಾದವು ನನ್ನೆಲುಬುಗಳು ನಿಂತಲ್ಲೇ ತತ್ತರಿಸಿದವು ನನ್ನ ಕಾಲುಗಳು ಆಪತ್ತು ಬಂದೊದಗುವುದು ನಮ್ಮನ್ನು ಆಕ್ರಮಿಸುವವರಿಗೆ ಕಾದಿರುವೆ ನಾನು ಸಹನಶೀಲನಾಗಿ ಅಂದಿನವರೆಗೆ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ನಡುಗುತ್ತಿದೆ ದೇಹ ನಿನ್ನ ಭಯದಿಂದ I ಬಾಳಿದೆ ನಿನ್ನ ವಿಧಿಗಳ ಭೀತಿಯಿಂದ II


ಸ್ವರ್ಗೀಯ ಸಭೆಯಲಿ ಪ್ರತಿಭಾವಂತನು ದೇವನು II ಸುತ್ತಣದೆಲ್ಲ ಪರಿವಾರಕ್ಕಿಂತ ಬಹು ಭೀಕರನು II


ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು:


ಇದನು ನೆನೆದಾಗ ನನಗೆ ತಲ್ಲಣವಾಗುತ್ತದೆ ನನ್ನ ದೇಹಕ್ಕೆ ನಡುಕ ಬರುತ್ತದೆ:


ಭೀಕರ ದಿಗಿಲು ಉಂಟಾಯಿತು ನನ್ನೆಲುಬುಗಳೆಲ್ಲವನ್ನು ನಡುಗಿಸಿತು.


ಮೂರನೆಯ ದಿನ ಸೂರ್ಯೋದಯ ಆಗುವಾಗ ಆ ಬೆಟ್ಟದ ಮೇಲೆ ಗುಡುಗು, ಮಿಂಚು, ಕಾರ್ಮುಗಿಲು ಹಾಗು ತುತೂರಿಯ ಮಹಾಧ್ವನಿ ಉಂಟಾಯಿತು. ಪಾಳೆಯದಲ್ಲಿದ್ದ ಜನರೆಲ್ಲರು ನಡುಗಿದರು.


ದಾನ್ ಕುಲ ಕುರಿತು ಮೋಶೆ ನುಡಿದದ್ದು: “ದಾನನು ಬಾಷಾನ್ ದೇಶದಿಂದ ಧಾವಿಸಿಬಂದ ಯುವಸಿಂಹನು!”


ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”


ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು