Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:13 - ಕನ್ನಡ ಸತ್ಯವೇದವು C.L. Bible (BSI)

13 ಜನರ ಶಿಕ್ಷಣಕ್ಕೆ, ಧರೆಯ ಹಿತಕೆ ತಮ್ಮ ಪ್ರೀತಿಯನ್ನು ತೋರುವುದಕೆ ಇದೆಲ್ಲ ಆಗುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಆತನು ದಂಡನೆಗಾಗಲಿ, ತನ್ನ ಭೂಮಿಯ ಹಿತಕ್ಕಾಗಲಿ, ಕೃಪೆತೋರುವುದಕ್ಕಾಗಲಿ ಹಾಗೂ ಒಡಂಬಡಿಕೆಯ ನಂಬಿಗಸ್ತಿಕೆಯಿಂದ ಆ ಮೇಘಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ದೇವರು ಜನರನ್ನು ದಂಡಿಸುವುದಕ್ಕಾಗಲಿ ನೀರನ್ನು ಒದಗಿಸುವ ಮೂಲಕ ತನ್ನ ನಿರಂತರ ಪ್ರೀತಿಯನ್ನು ತೋರಿಸುವುದಕ್ಕಾಗಲಿ ಮೋಡಗಳನ್ನು ಬರಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ಜನರ ಶಿಕ್ಷಣಕ್ಕಾಗಿಯೂ, ಭೂಮಿಯ ಹಿತಕ್ಕಾಗಿಯೂ ದೇವರು ತಮ್ಮ ಪ್ರೀತಿಯನ್ನು ತೋರಿಸಲು, ಮೇಘಗಳನ್ನು ಬರಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:13
14 ತಿಳಿವುಗಳ ಹೋಲಿಕೆ  

ತುಸು ಹೊತ್ತಿನಲ್ಲಿಯೇ ಆಕಾಶವು ಕಾರ್ಮೋಡಗಾಳಿಗಳಿಂದ ತುಂಬಿ ದೊಡ್ಡ ಮಳೆ ಪ್ರಾರಂಭವಾಯಿತು. ಅಹಾಬನು ರಥದಲ್ಲಿ ಕುಳಿತುಕೊಂಡು ಜೆಸ್ರೀಲಿಗೆ ಹೋದನು.


ಹೀಗೆ ಜನಾಂಗಗಳನ್ನು ಪೋಷಣೆ ಮಾಡುತ್ತಾನೆ ಆಹಾರವನ್ನು ಧಾರಾಳವಾಗಿ ದಯಪಾಲಿಸುತ್ತಾನೆ.


ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ಆಗ ಅಯ್ಯಾಹನ ಮಗಳಾದ ರಿಚ್ಪಳು ಒಂದು ಗೋಣಿತಟ್ಟನ್ನು ತೆಗೆದುಕೊಂಡು ಅದನ್ನು ಬಂಡೆಯ ಮೇಲೆ ಹಾಸಿ ಸುಗ್ಗಿಯ ಆರಂಭದಿಂದ ಶವಗಳ ಮೇಲೆ ಮಳೆ ಬೀಳುವ ತನಕ ಆ ಗೋಣಿತಟ್ಟಿನ ಮೇಲೆ ಕುಳಿತುಕೊಂಡು ಹಗಲಿನಲ್ಲಿ ಆಕಾಶದ ಪಕ್ಷಿಗಳಾಗಲಿ ಇರುಳಿನಲ್ಲಿ ಕಾಡುಮೃಗಗಳಾಗಲಿ ಆ ಶವಗಳನ್ನು ತಿನ್ನದಂತೆ ಕಾಯುತ್ತಿದ್ದಳು.


“ಸಿಯೋನಿನ ಜನರೇ, ಹರ್ಷಿಸಿರಿ; ಸ್ವಾಮಿ ದೇವರಾದ ಸರ್ವೇಶ್ವರ ನಿಮಗೆ ಮಾಡಿದ ಉಪಕಾರಗಳಿಗಾಗಿ ಆನಂದಿಸಿರಿ. ನಿಮಗೆ ಅವರು ಮುಂಗಾರು ಮಳೆಯನ್ನು ಸಾಕಷ್ಟು ಕೊಡುವರು; ಮುಂಗಾರು ಹಿಂಗಾರು ಮಳೆಗಳನ್ನು ಸುರಿಸುವರು.


ಅವುಗಳನ್ನೆಲ್ಲಾ ಬೆನ್ಯಾಮೀನ್ ದೇಶದ ಚೇಲಾ ಊರಿನಲ್ಲಿ ಸೌಲನ ತಂದೆಯಾದ ಕೀಷನ ಸ್ಮಶಾನಭೂಮಿಯಲ್ಲಿ ಸಮಾಧಿಮಾಡಿಸಿದನು. ಅರಸನ ಅಪ್ಪಣೆಯಂತೆ ಇದೆಲ್ಲಾ ಆದನಂತರ ನಾಡಿನ ಮೇಲೆ ದೇವರಿಗಿದ್ದ ಕೋಪ ಶಮನವಾಯಿತು.


ಅನಂತರ ಎಲೀಯನು ಆಹಾಬನಿಗೆ, “ನೀನು ಮೇಲೆ ಹೋಗಿ ಅನ್ನಪಾನಗಳನ್ನು ತೆಗೆದುಕೋ; ದೊಡ್ಡ ಮಳೆಯ ಶಬ್ದವು ಕೇಳಿಸುತ್ತದೆ,” ಎಂದನು.


ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:


ನೇಗಿಲ ಗೆರೆಯನು ತೋಯಿಸಿ ಮಣ್ಣಿನ ಹೆಂಟೆಯನು ಕರಗಿಸುತಿ I ಪೊಡವಿಯ ಹೊಲವ ಮಾಚಿಸಿ, ಹುಲುಸಾಗಿ ಪೈರನು ಬೆಳೆಸುತಿ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು