Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:18 - ಕನ್ನಡ ಸತ್ಯವೇದವು C.L. Bible (BSI)

18 ದೇವರಂತೆ ಆಕಾಶಮಂಡಲವನು ನಿನ್ನಿಂದ ನಿರ್ಮಿಸಲಾದೀತೆ? ಎರಕ ಹೊಯ್ದು ಕನ್ನಡಿಯಂತೆ ಅದನು ಗಟ್ಟಿಮಾಡಲಾದೀತೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ತಗಡು ಬಡಿದ ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

18 ತಗಡು ಬಡಿದು ಎರಕದ ದರ್ಪಣದಷ್ಟು ಗಟ್ಟಿಯಾಗಿರುವ ಆಕಾಶಮಂಡಲವನ್ನು ಆತನ ಹಾಗೆ ನಿರ್ಮಿಸಬಹುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 ಯೋಬನೇ, ಆಕಾಶಮಂಡಲವನ್ನು ಹರಡುವುದಕ್ಕಾಗಲಿ ಅದಕ್ಕೆ ಕಂಚಿನ ದರ್ಪಣದಂತೆ ಮೆರಗು ನೀಡುವುದಕ್ಕಾಗಲಿ ನೀನು ದೇವರಿಗೆ ಸಹಾಯಮಾಡಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 ಎರಕ ಹೊಯ್ದ ಬಲವಾಗಿರುವ ಕನ್ನಡಿಯ ಹಾಗೆ, ನೀನು ದೇವರ ಸಂಗಡ ಸೇರಿಕೊಂಡು ಆಕಾಶಮಂಡಲವನ್ನು ವಿಸ್ತರಿಸಬಲ್ಲೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:18
14 ತಿಳಿವುಗಳ ಹೋಲಿಕೆ  

ತಾಯ ಗರ್ಭದಿಂದ ರೂಪಿಸಿ ನಿನ್ನನು ಹೊರತಂದ ಸರ್ವೇಶ್ವರ ಹೇಳಿಹನು ಇದನ್ನು : “ಸರ್ವವನು ಸೃಷ್ಟಿಸಿದ ಸರ್ವೇಶ್ವರನು ನಾನೆ ಗಗನಮಂಡಲವನು ವಿಸ್ತರಿಸಿದವನು ನಾನೆ ಭೂಮಂಡಲವನು ಹರಡಿದವನು ನಾನೆ ನನಗಾಗ ನೆರವಾಗಲು ಯಾರಾದರೂ ಇದ್ದರೆ?


ತೊಟ್ಟುಕೊಂಡಿರುವೆ ಬೆಳಕನೇ ಬಟ್ಟೆಯಂತೆ I ಹರಡಿಸಿರುವೆ ಆಗಸವನು ಗುಡಾರದಂತೆ II


ದೇವದರ್ಶನದ ಗುಡಾರದ ಬಾಗಿಲಲ್ಲಿ ಸೇವೆಮಾಡುತ್ತಿದ್ದ ಮಹಿಳೆಯರು ಕೊಟ್ಟ ತಾಮ್ರದ ದರ್ಪಣಗಳಿಂದ ನೀರಿನ ತೊಟ್ಟಿಯನ್ನೂ ಅದರ ಪೀಠವನ್ನೂ ಮಾಡಿದನು.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,


ಅಲ್ಲೆಲೂಯ! I ಸ್ತುತಿಸಿರಿ ದೇವರನು ಆತನ ಪರಿಶುದ್ಧ ಆಲಯದಲಿ I ಆತನ ಶಕ್ತಿಯನು ಸಾರುವಾ ಆಕಾಶಮಂಡಲದಲಿ II


ತೆಂಕಣಗಾಳಿಯಿಂದ ಪೊಡವಿ ತಪಿಸಿ ಸ್ತಬ್ದವಿರುವಾಗಲೆ ನಿನ್ನ ಬಟ್ಟೆಬರೆ ಬಿಸಿಯಿರುವಾಗಲೆ ಆ ಅರಿವು ನಿನಗಿರುತ್ತದೆಯೇ?


ಜಗವನು, ಅದರಲ್ಲಿನ ಮನುಜರನು ಸೃಜಿಸಿದವನು ನಾನೇ, ಆಕಾಶಮಂಡಲವನು ವಿಶಾಲವಾಗಿ ಹರಡಿದ್ದು ನನ್ನ ಕೈಗಳೇ, ಸೂರ್ಯ, ಚಂದ್ರ, ನಕ್ಷತ್ರಗಳನು ನಿಯಂತ್ರಿಸುವವನು ನಾನೆ.


ಸರ್ವೇಶ್ವರ ಭೂಮಿಯನ್ನು ನಿರ್ಮಿಸಿದ್ದಾರೆ ಶಕ್ತಿಯಿಂದ ಲೋಕವನ್ನು ಸ್ಥಾಪಿಸಿದ್ದಾರೆ ಜ್ಞಾನದಿಂದ ಆಕಾಶಮಂಡಲವನ್ನು ಹರಡಿದ್ದಾರೆ ವಿವೇಕದಿಂದ.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು