Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:19 - ಕನ್ನಡ ಸತ್ಯವೇದವು C.L. Bible (BSI)

19 ಆತನಿಗೆ ಹೇಳಬೇಕಾದ ಉತ್ತರವನು ನಮಗೆ ತಿಳಿಸು ಅಂಧಕಾರದಲ್ಲಿರುವ ನಮ್ಮಿಂದ ಏನೊಂದನೂ ಹೇಳಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮ್ಮನ್ನು ಕವಿದಿರುವುದರಿಂದ ಏನೂ ಮಾತನಾಡಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಆತನಿಗೆ ಹೇಳತಕ್ಕದ್ದನ್ನು ನಮಗೆ ನೀನೇ ತಿಳಿಸು, ಅಂಧಕಾರವು ನಮಗೆ ಕವಿದಿರುವದರಿಂದ ವಾಕ್ಯವನ್ನು ಸರಿಪಡಿಸಿಕೊಳ್ಳಲಾರೆವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೋಬನೇ, ನಾವು ದೇವರಿಗೆ ಹೇಳಬೇಕಾದುದನ್ನು ನಮಗೆ ತಿಳಿಸು! ನಮಗೆ ಸಾಕಷ್ಟು ಗೊತ್ತಿಲ್ಲದಿರುವುದರಿಂದ ಏನು ಹೇಳಬೇಕೋ ನಮಗೆ ತಿಳಿಯದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ನಾವು ದೇವರಿಗೆ ಏನು ಹೇಳಬೇಕೆಂದು ನಮಗೆ ತಿಳಿಸು; ನಮ್ಮ ಅಂಧಕಾರದಿಂದ ನಾವು ಏನೂ ವಾದಿಸಲು ಸಾಧ್ಯವಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:19
17 ತಿಳಿವುಗಳ ಹೋಲಿಕೆ  

ಪ್ರಿಯರೇ, ನಾವೀಗ ದೇವರ ಮಕ್ಕಳು. ಮುಂದೆ ನಾವು ಎಂಥವರಾಗುತ್ತೇವೆ ಎಂಬುದು ಇನ್ನೂ ವಿಷದವಾಗಿಲ್ಲ. ಆದರೆ ಕ್ರಿಸ್ತಯೇಸು ಪ್ರತ್ಯಕ್ಷವಾಗುವಾಗ ನಾವೂ ಅವರಂತೆಯೇ ಇರುತ್ತೇವೆಂದು ಬಲ್ಲೆವು. ಏಕೆಂದರೆ, ಅವರನ್ನು ನಾವು ಅವರ ಯಥಾರ್ಥರೂಪದಲ್ಲೇ ಕಾಣುತ್ತೇವೆ.


ನಾವೀಗ ಕಾಂಬುದು ದರ್ಪಣದ ಬಿಂಬವನು ಮುಸುಕಾಗಿ ತರುವಾಯ ಕಾಂಬೆವು ದೇವರನು ಮುಖಾಮುಖಿಯಾಗಿ. ಈಗಿರುವುದೆನ್ನ ಅರಿವು ತುಂಡುತುಂಡಾಗಿ ನಂತರ ದೇವನೆನ್ನ ಅರಿತಂತೆ ಈ ಮೂರಲಿ ನಾನರಿವೆನು ಅಖಂಡವಾಗಿ.


ನನ್ನ ಕುರಿತು ನಿನಗಿರುವ ಅರಿವು ಅಗಾಧ I ನನ್ನ ಬುದ್ಧಿಗದು ಸಿಲುಕದಷ್ಟು ಉನ್ನತ II


ನಾ ಮಂದಮತಿಯಾಗಿದ್ದೆ ಅರಿವಿಲ್ಲದೆ I ನಾ ವನ್ಯಮೃಗನಂತಿದ್ದೆ ನಿನ್ನ ಮುಂದೆ II


‘ಅಜ್ಞಾನದ ಮಾತುಗಳನ್ನಾಡುವ ನೀನು ಯಾರು?’ ‘ಸತ್ಯಾಲೋಚನೆಗಳನು ಮಂಕುಮಾಡುವ ನೀನಾರು?’ ಈ ನಿಮ್ಮ ನುಡಿಯಂತೆ ಅರ್ಥಹೀನ ಮಾತುಗಳನು ನಾನಾಡಿದೆ ನನ್ನ ಬುದ್ಧಿಗೆಟುಕದ ಪವಾಡಗಳನ್ನು ಟೀಕಿಸಿದೆ.


“ಅಜ್ಞಾನದ ಮಾತುಗಳನ್ನಾಡಿ ಸತ್ಯಾಲೋಚನೆಯನು ಮಂಕುಮಾಡುವ ನೀನಾರು?


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ಈಗ ಕೇಳಿ ನನ್ನ ವಾದವನ್ನು ಆಲಿಸಿರೀಗ ನನ್ನ ತರ್ಕವನ್ನು.


ಸರ್ವಶಕ್ತನೊಡನೆ ಮಾತಾಡಲು ನನಗಿದೆ ಆಸೆ ದೇವರೊಂದಿಗೆ ವಾದಿಸಲು ನನಗಿದೆ ಅಪೇಕ್ಷೆ.


ನಿಮ್ಮ ಹಾಗೆ ನಾನೂ ಬಲ್ಲವ ನಿಮಗಿಂತ ನಾನೇನೂ ಕೀಳಲ್ಲ. ಇದು ಯಾರಿಗೆ ತಾನೆ ತಿಳಿದಿಲ್ಲ?


ಅಂತೆಯೇ ಪವಿತ್ರಾತ್ಮರು ಸಹ ನಮ್ಮ ದೌರ್ಬಲ್ಯದಲ್ಲಿ ನೆರವು ನೀಡುತ್ತಾರೆ. ಹೇಗೆ ಪ್ರಾರ್ಥಿಸಬೇಕು, ಯಾವುದಕ್ಕಾಗಿ ಪ್ರಾರ್ಥಿಸಬೇಕು ಎಂಬುದನ್ನು ನಾವು ತಿಳಿಯದವರು. ಪವಿತ್ರಾತ್ಮರೇ ಮಾತಿಗೆಟುಕದ ರೀತಿಯಲ್ಲಿ ಆತ್ಮಧ್ವನಿಯಿಂದ ನಮ್ಮ ಪರವಾಗಿ ದೇವರಲ್ಲಿ ವಿಜ್ಞಾಪಿಸುತ್ತಾರೆ.


ದೇವರೊಂದಿಗೆ ವಾದಿಸಲು ನಾನು ಅಶಕ್ತನು ಆತನಿಗೆ ತಕ್ಕ ಉತ್ತರ ಕೊಡಲು ನಾನೆಷ್ಟರವನು!


ನಾನು ಮಾತಾಡಬೇಕೆಂದು ದೇವರಿಗೆ ಹೇಳಿಕಳಿಸಲಾದೀತೆ? ಹಾಗೆ ಮಾಡುವವನು ತನ್ನನ್ನೆ ನಿರ್ಮೂಲ ಮಾಡಿಕೊಂಡಂತೆ!


“ಅಯ್ಯೋ, ನಾನು ಅಲ್ಪನೇ ಸರಿ ತಮಗೇನು ಪ್ರತ್ಯುತ್ತರ ಹೇಳಲಿ? ಬಾಯ ಮೇಲೆ ಕೈಯಿಡುವೆ ಮೌನತಾಳಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು