Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:2 - ಕನ್ನಡ ಸತ್ಯವೇದವು C.L. Bible (BSI)

2 ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 ಗುಡುಗುಟ್ಟುವ ದೇವರ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಧ್ವನಿಯನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

2 ಗುಡುಗುಟ್ಟುವ ಆತನ ಧ್ವನಿಗೆ ಕಿವಿಗೊಡಿರಿ, ಆತನ ಬಾಯಿಂದ ಹೊರಡುವ ಮೊಳಗನ್ನು ಕೇಳಿರಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 ಪ್ರತಿಯೊಬ್ಬರೂ ಕೇಳಿರಿ! ದೇವರ ಧ್ವನಿಯು ಗುಡುಗಿನ ಧ್ವನಿಯಂತಿದೆ. ಆತನ ಬಾಯಿಂದ ಬರುವ ಗುಡುಗುಟ್ಟುವ ಧ್ವನಿಯನ್ನು ಕೇಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 ದೇವರ ಧ್ವನಿಯ ಘರ್ಜನೆಯನ್ನು ಕೇಳಿರಿ. ದೇವರ ಬಾಯಿಂದ ಹೊರಡುವ ಮಾತನ್ನು ಲಕ್ಷ್ಯಕೊಟ್ಟು ಆಲಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:2
13 ತಿಳಿವುಗಳ ಹೋಲಿಕೆ  

ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ಅದರ ಆರ್ಭಟವು ಆತನನ್ನು ಪ್ರಕಟಿಸುತ್ತದೆ ಆತನ ಆಗಮನವನು ದನಕರುಗಳಿಗೂ ತಿಳಿಸುತ್ತದೆ.”


ತಲೆದೋರಿತು ಜಲ ನಿನ್ನ ಗದರಿಕೆಗೆ I ಹೆದರಿ ಹಿಂಜರಿಯಿತು ನಿನ್ನ ಗರ್ಜನೆಗೆ II


ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು:


ಗ್ರಹಿಸುವವರಾರು ಮೇಘಗಳ ಹಬ್ಬುಗೆಯನು? ದೇವರ ಗುಡಾರದಲ್ಲಿನಾ ಗರ್ಜನೆಯನು?


ಗುಡುಗಿದನು ಸರ್ವೇಶ್ವರ ಗಗನಮಂಡಲದಿಂದ ಮೊಳಗಿತು ವಾಣಿ ಆ ಪರಮೋನ್ನತನಿಂದ.


“ಇದನ್ನು ನೋಡಿದಾಗ ನನ್ನ ಎದೆ ತತ್ತರಗೊಳ್ಳುತ್ತದೆ. ನನ್ನ ಗುಂಡಿಗೆ ಎದೆಬಿಟ್ಟು ಮಿಡಿಯುತ್ತದೆ.


ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.


ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು