Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:22 - ಕನ್ನಡ ಸತ್ಯವೇದವು C.L. Bible (BSI)

22 ಉತ್ತರದಿಂದ ಹೊನ್ನಿನ ಹೊಳಪು ಹೊರಡುವುದು ದೇವರು ವಿಸ್ಮಯಕರ ತೇಜಸ್ಸನು ಧರಿಸಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಉತ್ತರದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವುದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ಬಡಗಣ ದಿಕ್ಕಿನಿಂದ ಹೊನ್ನಿನ ಹೊಳಪು ಹೊರಡುವದು, ದೇವರು ಭಯಂಕರ ತೇಜಸ್ಸನ್ನು ಧರಿಸಿಕೊಂಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ದೇವರ ಹೊನ್ನಿನ ಮಹಿಮೆಯು ಪವಿತ್ರ ಪರ್ವತದಿಂದ ಹೊಳೆಯುವುದು. ದೇವರ ಸುತ್ತಲೂ ಪ್ರಕಾಶಮಾನವಾದ ಬೆಳಕು ಸುತ್ತುವರಿದಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಉತ್ತರದಿಂದ ಹೊನ್ನಿನ ಹೊಳಪು ಬರುತ್ತದೆ; ಅದರಂತೆಯೇ ದೇವರ ವಿಸ್ಮಯ ತೇಜಸ್ಸಿನಿಂದ ಬರುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:22
22 ತಿಳಿವುಗಳ ಹೋಲಿಕೆ  

ಭಜಿಸು ನನ್ನ ಮನವೇ, ಭಜಿಸು, ಪ್ರಭುವನು I ಪ್ರಭು, ನನ್ನ ದೇವಾ, ನೀ ಸರ್ವೋತ್ತಮನು I ಮಹಿಮೆ ಪ್ರತಾಪಗಳಿಂದ ಭೂಷಿತನು II


ನಮ್ಮ ಉದ್ಧಾರಕರಾದ ಏಕೈಕ ದೇವರಿಗೆ ನಮ್ಮ ಪ್ರಭು ಯೇಸುಕ್ರಿಸ್ತರ ಮುಖಾಂತರ ಮಹಿಮೆ, ಮಹತ್ವ, ಅಧಿಪತ್ಯ, ಅಧಿಕಾರ ಆದಿಯಲ್ಲಿ ಇದ್ದ ಹಾಗೆ ಈಗಲೂ ಯಾವಾಗಲೂ ಸಲ್ಲಲಿ! ಆಮೆನ್.


ಏಕೆಂದರೆ, ನಮ್ಮ ದೇವರು ದಹಿಸುವ ಅಗ್ನಿ.


ಇವರೇ ದೇವರ ಮಹಿಮೆಯ ತೇಜಸ್ಸು; ಇವರೇ ದೈವತ್ವದ ಪಡಿಯಚ್ಚು; ತಮ್ಮ ಶಕ್ತಿಯುತ ವಾಕ್ಯದಿಂದ ಇವರೇ ಸಮಸ್ತಕ್ಕೂ ಆಧಾರ; ನಮ್ಮ ಪಾಪಗಳನ್ನು ತೊಡೆದುಹಾಕಿ, ಸ್ವರ್ಗದಲ್ಲಿ ಮಹೋನ್ನತ ದೇವರ ಬಲಪಾರ್ಶ್ವದಲ್ಲಿ ಆಸೀನರಾಗಿರುವವರೂ ಇವರೇ.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ಮಳೆ ಬರುವುದು ಪಡುವಣ ಗಾಳಿಯಿಂದ; ಮುಖಕ್ಕೆ ಸಿಟ್ಟು ಬರುವುದು ಚಾಡಿ ನಾಲಿಗೆಯಿಂದ.


ಮಹಿಮೆ ಘನತೆಗಳಿಂದ ಅಲಂಕರಿಸಿಕೊ! ಗೌರವ ಪ್ರಭಾವಗಳನು ಧರಿಸಿಕೊ!


“ಹೇ ಸರ್ವೇಶ್ವರಾ, ನಮ್ಮ ಪಿತೃ ಯಕೋಬನ ದೇವರೇ, ಸದಾಕಾಲಕ್ಕೂ ಸ್ತುತಿಸ್ತೋತ್ರ ಸಲ್ಲಲಿ ನಿಮಗೆ! ಹೇ ಸರ್ವೇಶ್ವರಾ, ಮಹಿಮೆ, ಪ್ರತಾಪ, ವೈಭವ, ಪರಾಕ್ರಮ, ಪ್ರತಿಭೆ, ನಿಮ್ಮವೇ, ಭೂಮ್ಯಾಕಾಶಗಳಲ್ಲಿರುವ ಸಮಸ್ತವೂ ನಿಮ್ಮದೇ. ಸರ್ವೇಶ್ವರಾ, ರಾಜ್ಯಭಾರವೂ ನಿಮ್ಮದೇ. ಸರ್ವವನು ಮಹೋನ್ನತರಾಗಿ ಆಳುವವರೂ ನೀವೇ.


ಆತನು ಸರ್ವೇಶ್ವರನಿಂದ ಬರುವ ಶಕ್ತಿಯಿಂದಲೂ ಆ ಸ್ವಾಮಿ ದೇವರ ನಾಮದ ಪ್ರಭಾವದಿಂದಲೂ ತನ್ನ ಜನರನ್ನು ಪರಿಪಾಲಿಸುವನು. ಆ ಜನರು ಸುರಕ್ಷಿತವಾಗಿ ಬಾಳುವರು. ಆತನು ಜಗದ ಕಟ್ಟಕಡೆಯವರೆಗೂ ಪ್ರಬಲನಾಗಿರುವನು.


ಭೂಮಂಡಲವನ್ನು ಕಂಪನಗೊಳಿಸಲು ಸ್ವಾಮಿ ಎದ್ದಾಗ ಅವರ ಭಯಂಕರ ಕೋಪಕ್ಕೆ ಅಂಜಿ, ಅವರ ಮಹೋನ್ನತ ಮಹಿಮೆಗೆ ಹೆದರಿ, ಅವಿತುಕೊಳ್ಳುವರು ಜನರು ಕಲ್ಲುಬಂಡೆಗಳ ಗುಹೆಗಳಲ್ಲಿ, ನೆಲದ ಹಳ್ಳಕೊಳ್ಳಗಳಲ್ಲಿ.


ಸ್ವಾಮಿಯ ಭಯಂಕರ ಕೋಪಕ್ಕೆ ಅಂಜಿ, ಆ ಮಹೋನ್ನತನ ವೈಭವಕ್ಕೆ ಹೆದರಿ ಬಂಡೆಯ ಗುಹೆಗಳೊಳಗೆ ನುಗ್ಗಿರಿ, ನೆಲದ ಬಿಲಗಳಲ್ಲಿ ಅವಿತುಕೊಳ್ಳಿರಿ.


ಧ್ಯಾನಿಸುವೆನು ನಿನ್ನ ಅದ್ಭುತಕಾರ್ಯಗಳನು I ನಿನ್ನ ಮಹೋನ್ನತ ಮಹಿಮಾಪ್ರಭಾವವನು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ಅರಸರ ದರ್ಪವನಡಗಿಸಿಬಿಡುವನು I ಭೂಪತಿಗಳಿಗೋ ಕಂಪನ ಕೊಡುವನು II


ಬನ್ನಿ, ದೇವನತಿಶಯ ಕಾರ್ಯಗಳ ನೋಡಬನ್ನಿ I ಜನತೆಗಾತ ಮಾಡಿದುದು ಅತ್ಯಾಶ್ಚರ್ಯವೆನ್ನಿ II


ಪ್ರಭುವಿನ ಧ್ವನಿ ಶಕ್ತಿಯುತ I ಆತನ ಶಬ್ಧ ವೈಭವಯುತ II


ಗಾಳಿಬೀಸಿ ಗಗನವನು ಶುಭ್ರಗೊಳಿಸಲು ಅಲ್ಲಿ ಪ್ರಜ್ವಲಿಸುವ ಬೆಳಕನು ದೃಷ್ಟಿಸಲಾಗದು.


ಕಂಡುಹಿಡಿಯಲಾಗದು ಇಂಥ ಸರ್ವಶಕ್ತನನು ನಮ್ಮಿಂದ ಶಕ್ತಿಯಲೂ ಸತ್ಯದಲೂ ಪರಮ ಪರಾಕ್ರಮಿ ಆತ ನ್ಯಾಯಪೂರ್ಣನಾದ ಆತ ದಬ್ಬಾಳಿಕೆ ನಡೆಸುವವನಲ್ಲ ನ್ಯಾಯಕ್ಕಾಗಲೀ ಧರ್ಮಕ್ಕಾಗಲೀ ಆತ ಧಕ್ಕೆ ತರುವವನಲ್ಲ.


ಪರಮ ಪವಿತ್ರಾಲಯದಲ್ಲಿಹ ದೇವಭಯಭಕುತಿಗೆ ಪಾತ್ರ I ಪ್ರಜೆಗೆ ಪರಾಕ್ರಮವೀವ ಇಸ್ರಯೇಲ ದೇವನಿಗೆ ಸ್ತೋತ್ರ II


ಪ್ರಭೂ, ಶಕ್ತಿಸ್ವರೂಪ, ನಿನ್ನ ಸುತ್ತುವರೆದಿದೆ ಸತ್ಯತೆ I ಸ್ವಾಮಿದೇವಾ, ಸರ್ವೇಶ್ವರಾ, ನಿನಗೆಲ್ಲಿಯದು ಸಮಾನತೆ? II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು