Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:3 - ಕನ್ನಡ ಸತ್ಯವೇದವು C.L. Bible (BSI)

3 ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ, ತನ್ನ ಸಿಡಿಲನ್ನು ಭೂಮಿಯ ಅಂಚುಗಳವರೆಗೂ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

3 ಆತನು ಅದನ್ನು ಆಕಾಶಮಂಡಲದಲ್ಲೆಲ್ಲಾ ಹಬ್ಬಿಸಿ ತನ್ನ ಸಿಡಿಲನ್ನು ಭೂವಿುಯ ಅಂಚುಗಳವರೆಗೂ ಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಇಡೀ ಆಕಾಶಮಂಡಲದಲ್ಲೆಲ್ಲಾ ಪ್ರಕಾಶಿಸಲೆಂದು ದೇವರು ತನ್ನ ಸಿಡಿಲನ್ನು ಕಳುಹಿಸುವನು. ಅದು ಭೂಮಿಯ ಮೇಲೆಲ್ಲಾ ಪ್ರಕಾಶಿಸುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ತಮ್ಮ ಮಿಂಚನ್ನು ದೇವರು ಆಕಾಶಮಂಡಲದಲ್ಲಿ ಹರಡುತ್ತಾರೆ; ಅದನ್ನು ಭೂಮಿಯ ಅಂಚುಗಳವರೆಗೆ ಕಳುಹಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:3
12 ತಿಳಿವುಗಳ ಹೋಲಿಕೆ  

ಏಕೆಂದರೆ ಪೂರ್ವದಿಂದ ಮಿನುಗಿ ಪಶ್ಚಿಮದವರೆಗೂ ಹೊಳೆಯುವ ಮಿಂಚಿನಂತೆ ಇರುವುದು ನರಪುತ್ರನ ಆಗಮನ.


‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?


ಇಸ್ರಯೇಲರಲ್ಲಿ ಸೆರೆಹೋದವರನ್ನು, ಜುದೇಯದಿಂದ ಚದರಿಹೋದವರನ್ನು ಕರೆತರಲು, ಧರೆಯ ಚತುರ್ದಿಕ್ಕುಗಳಿಂದವರನ್ನು ಬರಮಾಡಲು, ರಾಷ್ಟ್ರಗಳಿಗೆ ಗುರುತಾಗಿ ಧ್ವಜವನ್ನು ಆತ ಏರಿಸುವನು.


ಆಗ ಸ್ವರ್ಗದಲ್ಲಿನ ದೇವಾಲಯವು ತೆರೆಯಿತು. ದೇವರ ಒಡಂಬಡಿಕೆಯ ಮಂಜೂಷವು ಅಲ್ಲಿರುವುದು ಕಾಣಿಸಿತು; ಇದಲ್ಲದೆ ಮಿಂಚುಗಳು, ಗುಡುಗು, ಗರ್ಜನೆಗಳು ಉಂಟಾದವು. ಭೂಕಂಪವೂ ಆಯಿತು. ಜೋರಾದ ಆಲಿಕಲ್ಲಿನ ಮಳೆ ಸುರಿಯಿತು.


ಇಳೆಯನು ಬೆಳಗಿಸುತ್ತದೆ ಆತನ ಮಿಂಚು I ನಡುಗುತ್ತದೆ ಭೂಮಿ ಅದಕೆ ಬೆಚ್ಚುಬಿದ್ದು II


ನಿನ್ನ ಮಾರ್ಗ ದೇವಾ, ಪರಿಶುದ್ಧವಾದುದಯ್ಯಾ I ನಮ್ಮ ದೇವರಂತಹ ಮಹಾ ದೇವರಾರಯ್ಯಾ? II


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.


ಮೋಡಗಳ ಮೇಲೆ ಮಂಜನು ಹೇರುತ್ತಾನೆ ಮೇಘಮಂಡಲವು ಆತನ ಮಿಂಚನು ಹರಡುತ್ತದೆ.


ಜಗದೊಳೆಲ್ಲ ಆತ ವಿಧಿಸಿದಂತೆ ಜರುಗಬೇಕೆಂದು ಸುತ್ತಮುತ್ತಲು ಸಿಡಿಲುಗಳು ಸಂಚರಿಸುವಂತೆ ಮಾಡುತ್ತಾನೆ.


ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು