Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:4 - ಕನ್ನಡ ಸತ್ಯವೇದವು C.L. Bible (BSI)

4 ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಸಿಡಿಲಿನ ತರುವಾಯ ಗರ್ಜನೆಯುಂಟಾಗುವುದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಆ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

4 ಸಿಡಿಲಿನ ತರುವಾಯ ಗರ್ಜನೆಯುಂಟಾಗುವದು, ಆತನು ತನ್ನ ಮಹಿಮೆಯ ಶಬ್ದದಿಂದ ಗುಡುಗುವನು. ಈ ಶಬ್ದವು ಕೇಳಿಸಿದ ಮೇಲೆಯೂ ಆತನು ಸಿಡಿಲುಗಳನ್ನು ತಡೆಯುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಸಿಡಿಲು ಪ್ರಕಾಶಿಸಿದ ನಂತರ ದೇವರ ಗರ್ಜನೆಯು ಕೇಳಿಬರುವುದು. ಆತನು ತನ್ನ ಆಶ್ಚರ್ಯಕರವಾದ ಧ್ವನಿಯಿಂದ ಗುಡುಗುಟ್ಟುವನು! ಸಿಡಿಲು ಪ್ರಕಾಶಿಸುವಾಗ ಆತನ ಧ್ವನಿಯು ಗುಡುಗುಟ್ಟುವುದು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಮಿಂಚಿನ ತರುವಾಯ ಘರ್ಜನೆಯ ಶಬ್ದ ಕೇಳಿಬರುವುದು; ದೇವರು ಮಹತ್ತಿನ ಶಬ್ದದಿಂದ ಗುಡುಗುತ್ತಾರೆ; ದೇವರ ಸ್ವರ ಕೇಳುವಾಗ ಅದನ್ನು ತಡೆಯಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:4
12 ತಿಳಿವುಗಳ ಹೋಲಿಕೆ  

ಆದಿಮೊದಲು ಮೇಘಾರೂಢನಾಗಿರುವನು I ಕೊಂಡಾಡಿರಿ, ಗುಡುಗಿನಂತೆ ಗರ್ಜಿಸುವಾತನನು II


ಇಸ್ರಯೇಲಿನ ಜನರೇ, ನಿಮ್ಮ ದೇವರಿಗೆ ಸಮಾನನಾರೂ ಇಲ್ಲ, ಆತ ಬರುವನು ಆಕಾಶವನ್ನೇರಿ, ಮೇಘಾರೂಢನಾಗಿ ಮಹಾಗಾಂಭೀರ್ಯದಿಂದ ಬರುವನು ನಿಮ್ಮ ನೆರವಿಗಾಗಿ.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು