Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:5 - ಕನ್ನಡ ಸತ್ಯವೇದವು C.L. Bible (BSI)

5 ದೇವರಕಂಠ ತನ್ನ ಅದ್ಭುತಕಾರ್ಯಗಳನು ಘೋಷಿಸುತ್ತದೆ ನಮ್ಮಿಂದರಿಯಲಾಗದ ಮಹಾತ್ಕಾರ್ಯಗಳನು ಎಸಗುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡೆಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ದೇವರು ತನ್ನ ಧ್ವನಿಯಿಂದ ಅದ್ಭುತವಾಗಿ ಗುಡುಗುವನು; ನಾವು ಗ್ರಹಿಸಲಾಗದ ಮಹಾಕಾರ್ಯಗಳನ್ನು ನಡಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ದೇವರ ಗುಡುಗುಟ್ಟುವ ಧ್ವನಿಯು ಆಶ್ಚರ್ಯಕರವಾಗಿದೆ! ನಾವು ಅರ್ಥಮಾಡಿಕೊಳ್ಳಲಾಗದ ಮಹಾಕಾರ್ಯಗಳನ್ನು ಆತನು ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ದೇವರು ತಮ್ಮ ಸ್ವರದಿಂದ ಅದ್ಭುತಕಾರ್ಯಗಳನ್ನು ಗುಡುಗುತ್ತಾರೆ; ನಾವು ಗ್ರಹಿಸಲಾಗದ ಮಹಾತ್ಕಾರ್ಯಗಳನ್ನು ದೇವರು ಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:5
18 ತಿಳಿವುಗಳ ಹೋಲಿಕೆ  

ದೇವರೆಸಗುತ್ತಾನೆ ಅಸಾಧ್ಯ ಅತಿಶಯಗಳನು ಅಸಂಖ್ಯವಾದ ಅದ್ಭುತಕಾರ್ಯಗಳನು.


ದೇವರ ಸಿರಿಸಂಪತ್ತು, ಜ್ಞಾನವಿಜ್ಞಾನ ಎಷ್ಟು ಅಗಾಧ! ಪರಿಶೋಧನೆಗೂ ನಿಲುಕದ ಅವರ ನಿರ್ಣಯ ಎಷ್ಟು ಅಗಮ್ಯ! ಅವರ ನಿಯೋಜನೆಗಳು ಗ್ರಹಿಕೆಗೂ ಎಷ್ಟು ಅಸಾಧ್ಯ!


ನೀವು ಕೇಳಿಲ್ಲವೇ? ನಿಮಗೆ ತಿಳಿದಿಲ್ಲವೇ? ಸರ್ವೇಶ್ವರ ಅನಂತ ದೇವರಲ್ಲವೇ? ಭೂದಿಗಂತಗಳನ್ನು ಆತ ಸೃಜಿಸಿದನಲ್ಲವೇ? ದಣಿವೆಂಬುದು ಇಲ್ಲ, ಬಳಲಿಕೆ ಎಂಬುದು ಇಲ್ಲ ಆತನಿಗೆ. ಆತನ ದಕ್ಷಸಾಮರ್ಥ್ಯ ಅಗಮ್ಯ ಪರಿಶೋಧನೆಗೆ.


ಒಂದೊಂದು ವಸ್ತುವನ್ನೂ ಸಮಯಕ್ಕೆ ತಕ್ಕಂತೆ ಸುಂದರವಾಗಿ ನಿರ್ಮಿಸಿದ್ದಾರೆ ದೇವರು. ಇದಲ್ಲದೆ, ಮನುಷ್ಯನ ಹೃದಯದಲ್ಲಿ ಅಮರತ್ವದ ಪ್ರತಿಯನ್ನು ಮೂಡಿಸಿದ್ದಾರೆ.


ದೇವರ ಅದ್ಭುತಗಳಲ್ಲಿ ಇವು ಕೆಲವು ಮಾತ್ರ ಆತನ ಬಗ್ಗೆ ನಾವು ಕೇಳಿರುವುದು ಕಿಂಚಿತ್ತು ಮಾತ್ರ ಆತನ ಘನ ಗರ್ಜನೆಯ ಪ್ರಾಬಲ್ಯವನ್ನು ಗ್ರಹಿಸಲು ಯಾರಿಂದ ಸಾಧ್ಯ?”


ದೇವರೆನಿತೋ ಮಹೋನ್ನತನು ನಮ್ಮ ಅರಿವಿಗಾತನು ಎಟುಕನು ಅಸಂಖ್ಯಾತ ಆತನ ವರುಷಗಳು.


ಅಪ್ರತಿಮ ಮಹಾಕಾರ್ಯಗಳನ್ನು ಎಸಗಿರುವನು ಅಸಂಖ್ಯ ಅದ್ಭುತಕರ ಪವಾಡಗಳನ್ನು ಮಾಡಿರುವನು.


ಅವರು ದೇವರ ದಾಸನಾದ ಮೋಶೆಯ ಗೀತೆಯನ್ನೂ ಯಜ್ಞದ ಕುರಿಮರಿಯ ಗೀತೆಯನ್ನೂ ಹಾಡುತ್ತಿದ್ದರು. ಅದು ಯಾವುದೆಂದರೆ : ಹೇ ದೇವಾ, ಹೇ ಪ್ರಭೂ, ನೀ ಸರ್ವಶಕ್ತ ! ಏನು ಘನ, ಏನು ಅದ್ಭುತ, ನಿನ್ನ ಸತ್ಕಾರ್ಯ ! ರಾಷ್ಟ್ರಗಳಿಗೆಲ್ಲಾ ನೀ ರಾಜಾಧಿರಾಜ ನಿಜವಾದುದು, ಋಜುವಾದುದು ನಿನ್ನ ಸನ್ಮಾರ್ಗ.


ನೀನು ಕಂಡುಕೊಳ್ಳಬಲ್ಲೆಯಾ ದೇವರ ಅಂತರಾಳವನ್ನು? ಗ್ರಹಿಸಿಕೊಳ್ಳಬಲ್ಲೆಯಾ ಸರ್ವಶಕ್ತನ ಇತಿಮಿತಿಯನ್ನು?


ದೇವರ ಧ್ವನಿಯ ಗರ್ಜನೆಯನು ಕಿವಿಗೊಟ್ಟು ಕೇಳು ಆತನ ಬಾಯಿಂದ ಹೊರಡುವ ಮಾತನು ಆಲಿಸು.


ಮಿಂಚಿನ ಬಳಿಕ ಕೇಳಿಬರುವುದು ಗರ್ಜನೆಯ ಶಬ್ದ ಗುಡುಗಿನಂಥ ಗಂಭೀರವಾದ ಆತನ ಕಂಠನಾದ ಆತನ ಸ್ವರ ಕೇಳುವಾಗ ನಿಲ್ಲದು ಮಿಂಚಿನ ಹೊಳೆತ.


ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:


ಮೋಡಗಳ ತೇಲಾಟವನು ಬಲ್ಲೆಯಾ? ಜ್ಞಾನಪೂರ್ಣನಾ ಅದ್ಭುತಕಾರ್ಯಗಳನು ಗ್ರಹಿಸಿರುವೆಯಾ?


ದೇವರಾದ ನನಗಿರುವಂಥ ಭುಜಬಲ ನಿನಗಿದೆಯೋ? ನನ್ನ ಧ್ವನಿಗೆ ಸಮನಾಗಿ ನೀನು ಗುಡುಗಬಲ್ಲೆಯೋ?


ಪ್ರಭು ಆಸೀನನು ಆಗಸದ ಜಲರಾಶಿಗಳ ಮೇಲೆ I ಪ್ರತಿಭಾಸ್ವರೂಪನಾದ ದೇವನಿದೋ, ಗುಡುಗುತ್ತಲೇ I ಆತನಾಡಂಬರ ಧ್ವನಿ ಮೇಘಮಂಡಲದ ಮೇಲೆ II


ಚದರಿಸಿದನು ಶತ್ರುಗಳನು ಬಾಣಗಳನ್ನೆಸೆದು I ತಳಮಳಗೊಳಿಸಿದನವರನು ಸಿಡಿಲನು ಹೊಡೆದು II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು