Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 37:6 - ಕನ್ನಡ ಸತ್ಯವೇದವು C.L. Bible (BSI)

6 ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂದು, ತನ್ನ ಶಕ್ತಿಯ ದೊಡ್ಡ ಮಳೆಗೆ, ‘ರಭಸದಿಂದ ಸುರಿ’ ಎಂದು ಅಪ್ಪಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಆತನು ಹಿಮಕ್ಕೂ ಹದಮಳೆಗೂ ತನ್ನ ಶಕ್ತಿಯ ದೊಡ್ಡ ಮಳೆಗೂ ಭೂವಿುಯ ಮೇಲೆ ಬೀಳು ಎಂದು ಅಪ್ಪಣೆಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಆತನು ಹಿಮಕ್ಕೆ, ‘ಭೂಮಿಯ ಮೇಲೆ ಬೀಳು’ ಎಂತಲೂ ಮಳೆಗೆ, ‘ಭೂಮಿಯ ಮೇಲೆ ಸುರಿ’ ಎಂತಲೂ ಆಜ್ಞಾಪಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ದೇವರು ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎಂದು ಹೇಳುತ್ತಾರೆ. ಮಳೆಗೆ, ‘ಭೂಮಿಯ ಮೇಲೆ ರಭಸದಿಂದ ಸುರಿ’ ಎಂದು ಆಜ್ಞಾಪಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 37:6
14 ತಿಳಿವುಗಳ ಹೋಲಿಕೆ  

ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ನೀರಿನ ಹನಿಗಳನು ಹೀರಿಕೊಳ್ಳುತ್ತಾನೆ ಮಂಜಿನಿಂದ ತಿಳಿಮಳೆಯನು ಸುರಿಸುತ್ತಾನೆ.


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಉನ್ನತದಲ್ಲಿ ಹಲವು ಉಪ್ಪರಿಗೆಗಳನ್ನು ನಿರ್ಮಿಸುವವ ಆತನೆ ಭುವಿಯಲ್ಲಿ ಗುಮ್ಮಟವನ್ನು ಸ್ಥಾಪಿಸಿಕೊಂಡವನು ಆತನೆ ಸಾಗರದ ನೀರನ್ನು ಸೇದಿ ಧರೆಯ ಮೇಲೆ ಸುರಿಯುವವ ಆತನೆ ಆತನ ನಾಮಧೇಯ ಸರ್ವೇಶ್ವರಸ್ವಾಮಿ ಎಂಬುದೇ.


ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;


ದಲಿತರನ್ನೇ ಹಿಂಸಿಸುವ ಬಡವ, ಕಾಳೂ ಉಳಿಯದಂತೆ ಜಡಿಯುವ ಮಳೆಗೆ ಸಮಾನ.


ಕಿಚ್ಚು, ಕಲ್ಮಳೆ, ಹಿಮ, ಹಬೆ ಇವುಗಳೆಲ್ಲವೂ I ಆತ ಹೇಳಿದಂತೆ ಕೇಳುವ ಬಿರುಗಾಳಿಯೂ, II


ಆದರೆ ಕೂಡಿಬಂದಿರುವವರು ಬಹುಮಂದಿ; ಈಗ ಮಳೆಗಾಲ; ಹೊರಗೆ ನಿಲ್ಲುವುದು ಅಸಾಧ್ಯ. ಈ ಕೆಲಸ ಒಂದೆರಡು ದಿನಗಳಲ್ಲಿ ತೀರುವಂಥದಲ್ಲ; ಈ ವಿಷಯದಲ್ಲಿ ನಮ್ಮ ಅಪರಾಧ ದೊಡ್ಡದು.


ಆಗ ಮೂರನೆಯ ದಿನದಲ್ಲಿ ಅಂದರೆ, ಒಂಬತ್ತನೆಯ ತಿಂಗಳಿನ ಇಪ್ಪತ್ತನೆಯ ದಿನದಲ್ಲಿ, ಯೆಹೂದ್ಯರ ಮತ್ತು ಬೆನ್ಯಾಮೀನ್ಯರ ಎಲ್ಲ ಪುರುಷರೂ ಜೆರುಸಲೇಮಿನಲ್ಲಿ ಕೂಡಿಬಂದರು. ಆ ಸಂಗತಿಯ ನಿಮಿತ್ತ ಹಾಗು ದೊಡ್ಡ ಮಳೆಯ ದೆಸೆಯಿಂದ ನಡುಗುತ್ತಾ ಬಂದು ದೇವಾಲಯದ ಬಯಲಿನಲ್ಲಿ ಕುಳಿತುಕೊಂಡರು.


ಮಳೆಗರೆಯುತ್ತಾನೆ ಭೂಮಿಯ ಮೇಲೆ ನೀರೊದಗಿಸುತ್ತಾನೆ ಹೊಲಗದ್ದೆಗಳಿಗೆ.


ಮಳೆಗೆ ಕಟ್ಟಳೆಯನು ವಿಧಿಸಿದಾಗ ಗುಡುಗು ಮಿಂಚಿಗೆ ಮಾರ್ಗವನ್ನೇರ್ಪಡಿಸಿದಾಗ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು