Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:1 - ಕನ್ನಡ ಸತ್ಯವೇದವು C.L. Bible (BSI)

1 ಬಿರುಗಾಳಿಯೊಳಗಿಂದ ಸರ್ವೇಶ್ವರ ಯೋಬನಿಗೆ ಕೊಟ್ಟ ಪ್ರತ್ಯುತ್ತರ ಇದು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

1 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

1 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು -

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

1 ಆಗ ಯೆಹೋವನು ಬಿರುಗಾಳಿಯೊಳಗಿಂದ ಯೋಬನಿಗೆ ಪ್ರತ್ಯುತ್ತರವಾಗಿ ಹೀಗೆಂದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

1 ಆಗ ಯೆಹೋವ ದೇವರು ಬಿರುಗಾಳಿಯೊಳಗಿಂದ ಯೋಬನಿಗೆ ಹೀಗೆಂದು ಉತ್ತರಕೊಟ್ಟರು:

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:1
16 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಬಿರುಗಾಳಿಯೊಳಗಿಂದ ಯೋಬನಿಗೆ ಕೊಟ್ಟ ಪ್ರತ್ಯುತ್ತರವಿದು:


ಅವರು ಮಾತನಾಡುತ್ತಾ ಮುಂದೆ ಹೋಗುತ್ತಿರುವಾಗ ಫಕ್ಕನೆ ಅಗ್ನಿಮಯವಾದ ರಥರಥಾಶ್ವಗಳು ನಡುವೆ ಬಂದು ಅವರನ್ನು ವಿಂಗಡಿಸಿದವು. ಎಲೀಯನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಹೋದನು.


ಆಗ ಇನ್ನೊಮ್ಮೆ, “ನೀನು ಹೊರಗೆ ಬಂದು ಬೆಟ್ಟದ ಮೇಲೆ ಸರ್ವೇಶ್ವರನ ಮುಂದೆ ನಿಲ್ಲು,” ಎಂದು ವಾಣಿಯಾಯಿತು; ಆಹಾ! ಸರ್ವೇಶ್ವರ ಅಲ್ಲೇ ಹಾದುಹೋದರು, ಅವರ ಮುಂದೆ ಪರ್ವತಗಳನ್ನು ಭೇದಿಸಿ ಬಂಡೆಗಳನ್ನು ಪುಡಿಪುಡಿಮಾಡುವಂಥ ದೊಡ್ಡ ಬಿರುಗಾಳಿ ಬೀಸಿತು; ಸರ್ವೇಶ್ವರ ಅದರಲ್ಲಿ ಇರಲಿಲ್ಲ. ತರುವಾಯ ಭೂಕಂಪವುಂಟಾಯಿತು; ಅದರಲ್ಲೂ ಅವರಿರಲಿಲ್ಲ.


ಸರ್ವೇಶ್ವರ ಶಾಂತಿಸ್ವರೂಪಿ; ಆದರೆ ಆತನ ಶಕ್ತಿ ಅಪಾರ, ಅಪರಾಧಿಗಳನ್ನು ಆತ ಶಿಕ್ಷಿಸದೆ ಬಿಡ; ಗಾಳಿಬಿರುಗಾಳಿಗಳ ನಡುವೆ ಆತನ ಹಾದಿ; ಮೋಡಗಳು ಆತನ ನಡೆಯಿಂದೇಳುವ ಧೂಳಿ.


ನಾನು ಕಂಡ ದರ್ಶನ ಹೀಗಿತ್ತು: ಇಗೋ, ಉತ್ತರ ದಿಕ್ಕಿನಿಂದ ಬಿರುಗಾಳಿ ಬೀಸಿತು. ಎಡೆಬಿಡದೆ ಝಗಝಗಿಸುವ ಜ್ವಾಲೆಯಿಂದ ಕೂಡಿದ ಮಹಾ ಮೇಘವೊಂದು ಕಾಣಿಸಿತು. ಅದರ ಸುತ್ತಲೂ ಮಿಂಚು ಹೊಳೆಯಿತು. ಅದರ ನಡುವೆ, ಆ ಜ್ವಾಲೆಯ ಮಧ್ಯೆ, ಸುವರ್ಣದಂಥ ಕಾಂತಿ ಬೆಳಗಿತು.


ದೇವರ ಭಂಡಾರದಿಂದ ಬಿರುಗಾಳಿ ಬೀಸುತ್ತದೆ ಉತ್ತರ ದಿಕ್ಕಿನಿಂದ ಚಳಿ ಹೊರಬರುತ್ತದೆ.


ಸರ್ವೇಶ್ವರಸ್ವಾಮಿ ಎಲೀಯನನ್ನು ಸುಂಟರಗಾಳಿಯಲ್ಲಿ ಪರಲೋಕಕ್ಕೆ ಸೇರಿಸುವ ಸಮಯ ಬಂದಿತು. ಆಗ ಎಲೀಯನು ಎಲೀಷನೊಡನೆ ಗಿಲ್ಗಾಲನ್ನು ಬಿಟ್ಟು ಹೊರಟನು.


ಯೋಬನೇ, ಈ ಮಾತುಗಳನು ಕೇಳು ದೇವರ ಅದ್ಭುತಗಳನು ಮೌನದಿಂದ ಧ್ಯಾನಿಸು:


ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ನಿಮ್ಮ ಕೂಡ ನಾವೆಯಿಂದ ಹೊರಟುಬಂದ ಪ್ರಾಣಿ-ಪಕ್ಷಿ-ಮೃಗಾದಿ ಸಕಲ ಭೂಜಂತುಗಳನ್ನೂ ಕುರಿತು ಒಂದು ಸ್ಥಿರ ಪ್ರತಿಜ್ಞೆಯನ್ನು ಮಾಡುತ್ತೇನೆ.


ಆದರೆ ದೇವರೇ ಬಾಯ್ದೆರೆದು ನಿನಗೆ ವಿರುದ್ಧ ಮಾತನಾಡಿದರೆ ಒಳಿತು!


ಯೋಬನಿಗೆ ಸರ್ವೇಶ್ವರ ಮತ್ತೆ ಇಂತೆಂದನು:


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು