Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:11 - ಕನ್ನಡ ಸತ್ಯವೇದವು C.L. Bible (BSI)

11 ‘ಇಲ್ಲಿಯತನಕ ಬರಬಹುದು, ಇದನು ಮೀರಿ ಬರಕೂಡದು’ ‘ಮೊರೆವ ನಿನ್ನ ತೆರೆಗೆ ಇಲ್ಲಿಗೇ ತಡೆ’ ಎಂದು ವಿಧಿಸಿದವನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ‘ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವುದು’ ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಇಲ್ಲಿಯ ತನಕ ಬರಬಹುದು; ಮೀರಿ ಬರಬೇಡ, ನಿನ್ನ ತೆರೆಗಳ ಹೆಮ್ಮೆಗೆ ಇಲ್ಲೇ ತಡೆಯಾಗುವದು ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಾನು ಸಮುದ್ರಕ್ಕೆ, ‘ನೀನು ಇಲ್ಲಿಯವರೆಗೆ ಬರಬಹುದು, ಆದರೆ ಇದಕ್ಕಿಂತ ಹೆಚ್ಚಿಗೆ ಬರಕೂಡದು. ನಿನ್ನ ಹೆಮ್ಮೆಯ ಅಲೆಗಳು ಇಲ್ಲೇ ನಿಲ್ಲಬೇಕು’ ಎಂದು ಅಪ್ಪಣೆಕೊಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ‘ಇಲ್ಲಿಯ ತನಕ ಬರಬಹುದು, ಇದನ್ನು ಮೀರಿ ಬರಕೂಡದು; ಇಲ್ಲಿಗೇ ನಿನ್ನ ತೆರೆಗಳ ಹೆಮ್ಮೆ ನಿಲ್ಲಲಿ,’ ಎಂದು ಆಜ್ಞಾಪಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:11
19 ತಿಳಿವುಗಳ ಹೋಲಿಕೆ  

ಕಡಲ ಕಲ್ಲೋಲಗಳನ್ನೆಲ್ಲ ಅಂಕೆಯಲಿ ಇಡುವವನು ನೀನು I ತರಂಗವೇಳುವಾಗಲು ಕೂಡ ತಡೆಹಿಡಿವವನು ನೀನು II


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


ಆದರೂ ಸರ್ವೇಶ್ವರ ತಮ್ಮ ಪ್ರಜೆಗೆ ಗಡೀಪಾರು ಶಿಕ್ಷೆಯನ್ನು ವಿಧಿಸಿದರು. ದೂರದ ಮೂಡಣ ಬಿರುಗಾಳಿಯ ಬಡಿತಕ್ಕೆ ಗುರಿಮಾಡಿ ಅವರನ್ನು ತೊಲಗಿಸಿದರು.


ಆಗ ಸರ್ವೇಶ್ವರ ಸೈತಾನನಿಗೆ, “ಸರಿ, ಆತನನ್ನು ನಿನ್ನ ಕೈಗೆ ಬಿಟ್ಟಿದ್ದೇನೆ. ಆದರೆ ಆತನ ಪ್ರಾಣವನ್ನು ಮಾತ್ರ ಮುಟ್ಟಕೂಡದು,” ಎಂದು ಆಜ್ಞಾಪಿಸಿದರು.


ನರರ ಕೋಪ, ದೇವಾ ನಿನ್ನ ಘನತೆಗೆ ಸಾಧಕ I ಅಳಿದುಳಿದಾ ಕೋಪ ನಿನ್ನ ನಡುಕಟ್ಟಿಗೆ ಲಾಯಕ II


ಈ ಎಲ್ಲ ವಿಪತ್ತು ಬಂದೊದಗಿದರೂ ಯೋಬನು ಪಾಪಮಾಡಲಿಲ್ಲ. ದೇವರ ಮೇಲೆ ತಪ್ಪುಹೊರಿಸಲಿಲ್ಲ.


ಅದಕ್ಕೆ ಸರಹದ್ದನು ನಿಯಮಿಸಿ ಕದಗಳನೂ ಅಗುಳಿಗಳನೂ ಇಟ್ಟವನಾರು?


ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?


ಗೊತ್ತುಮಾಡಿರುವೆ ಆ ಜಲರಾಶಿಗೆ ಮೇರೆಯನು I ಅವು ಮತ್ತೆ ಮುಚ್ಚದಂತೆ ಮಾಡಿರುವೆ ಭೂಮಿಯನು II


ಅವನು ಹೋಗಿ ಶವವು ದಾರಿಯಲ್ಲಿ ಬಿದ್ದಿರುವುದನ್ನೂ ಕತ್ತೆಯೂ ಸಿಂಹವೂ ಅದರ ಬಳಿಯಲ್ಲಿ ನಿಂತಿರುವುದನ್ನೂ ಕಂಡನು. ಸಿಂಹವು ಶವವನ್ನು ತಿನ್ನಲಿಲ್ಲ, ಕತ್ತೆಯನ್ನು ಕೊಲ್ಲಲೂ ಇಲ್ಲ.


ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ನೀವು ನನಗೆ ಅಂಜುವುದಿಲ್ಲವೋ? ನನ್ನೆದುರಿಗೆ ನಡುಗುವುದಿಲ್ಲವೊ? ಕಡಲು ದಾಟದ ಹಾಗೆ ಅದಕ್ಕೆ ಮರಳನ್ನು ನಿತ್ಯನಿಬಂಧನೆಯಿಂದ ಮೇರೆಯನ್ನಾಗಿ ನೇಮಿಸಿದವನು ನಾನು.ತೆರೆಗಳು ಅಲ್ಲಕಲ್ಲೋಲವಾದರೂ ಅದನ್ನು ಮೀರಲಾರವು. ಭೋರ್ಗರೆದರೂ ಹಾಯಲಾರವು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು