Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:13 - ಕನ್ನಡ ಸತ್ಯವೇದವು C.L. Bible (BSI)

13 ‘ಧರಣಿಯ ಅಂಚುಗಳನು ಹಿಡಿದು ದುರುಳರನ್ನು ಅದರೊಳಗಿಂದ ಒದರಿಬಿಡು’ ಎಂದು ಅದಕ್ಕೆ ಅಪ್ಪಣೆಮಾಡಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 ಭೂಮಿಯ ಅಂಚುಗಳನ್ನು ಹಿಡಿದು ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

13 ದುಷ್ಟರನ್ನು ಅದರೊಳಗಿಂದ ಒದರಿಬಿಡು ಎಂದು ಉದಯಕ್ಕೆ ಅಪ್ಪಣೆಕೊಟ್ಟಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 ಯೋಬನೇ, ದುಷ್ಟರನ್ನು ಅವರು ಅಡಗಿಕೊಂಡಿರುವ ಸ್ಥಳಗಳಲ್ಲಿ ಹಿಡಿದು ನಡುಗಿಸಬೇಕೆಂದು ನೀನು ಮುಂಜಾನೆಯ ಬೆಳಕಿಗೆ ಎಂದಾದರೂ ಆಜ್ಞಾಪಿಸಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 ‘ದುಷ್ಟರನ್ನು ಅದರೊಳಗಿಂದ ಒದರಿಬಿಡು,’ ಎಂದು ನೀನು ಭೂಮಿಯ ಅಂಚುಗಳನ್ನು ಹಿಡಿದು ಉದಯಕ್ಕೆ ಎಂದಾದರೂ ಅಪ್ಪಣೆಮಾಡಿದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:13
13 ತಿಳಿವುಗಳ ಹೋಲಿಕೆ  

ದಹಿಸಿಹೋಗಲಿ ಧರೆಯಿಂದ ದುಷ್ಟರು I ನಿರ್ಮೂಲವಾಗಲಿ ಸಕಲ ದುರುಳರು I ಪ್ರಭುವನು ನನ್ನ ಮನ ಸ್ತುತಿಸಲಿ I ಪ್ರಭುವಿಗೆ ಸ್ತುತಿಸ್ತೋತ್ರವಾಗಲಿ II


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


ಅಂತೆಯೇ ಮೋಶೆ ಸಮುದ್ರದ ಮೇಲೆ ಕೈ ಚಾಚಿದನು. ಬೆಳಗಾಗುವಾಗಲೇ ಸಮುದ್ರದ ನೀರು ಮೊದಲಿದ್ದಂತೆಯೇ ತುಂಬಿಕೊಂಡಿತು. ಈಜಿಪ್ಟಿನವರು ಓಡಿಹೋಗುತ್ತಾ ಅದಕ್ಕೆ ಎದುರಾಗಿಯೇ ಬಂದರು. ಹೀಗೆ ಸರ್ವೇಶ್ವರ ಈಜಿಪ್ಟಿನವರನ್ನು ಸಮುದ್ರದೊಳಗೆ ಕೆಡವಿಬಿಟ್ಟರು.


ಭೂಮಿಯ ಕಟ್ಟಕಡೆಯ ತನಕ ದೃಷ್ಟಿಸಬಲ್ಲವನು ದೇವರೇ ಆಕಾಶದ ಕೆಳಗಿನ ಸಮಸ್ತವನು ನೋಡಬಲ್ಲವನು ಆತನೊಬ್ಬನೇ!


ದುಷ್ಕಾರ್ಯಗಳು ಆತನಿಗೆ ತಿಳಿದಿರುವ ಕಾರಣ ಇರುಳಲ್ಲೇ ದುರುಳರನು ಕೆಡವಿ ನಾಶಕ್ಕೆ ಗುರಿಮಾಡುವನು.


ಅಪರಾಧಿಗಳಂತೆ ಅವರನು ದಂಡಿಸುವನು ಎಲ್ಲರು ನೋಡುವಂತೆ ಅವರನು ಖಂಡಿಸುವನು.


ದುರುಳರ ಪ್ರಾಣವನ್ನು ಆತ ಉಳಿಸನು ನಿರ್ಗತಿಕರ ನ್ಯಾಯವನು ಸ್ಥಾಪಿಸುವನು.


ನಿನ್ನ ಜೀವಮಾನದಲಿ ಎಂದಾದರೂ ‘ಅರುಣೋದಯವಾಗಲಿ’ ಎಂದು ಆಜ್ಞಾಪಿಸಿರುವೆಯಾ?


ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪತಾಳುತ್ತದೆ ಅದು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುತ್ತದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು