Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:15 - ಕನ್ನಡ ಸತ್ಯವೇದವು C.L. Bible (BSI)

15 ದುರುಳರಿಂದ ಬೆಳಕನು ಹಿಂತೆಗೆದುಕೊಳ್ಳಲಾಗುವುದು ಅವರು ಎತ್ತಿದ ಕೈಯನು ಮುರಿಯಲಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವುದು, ಎತ್ತಿದ ಕೈ ಮುರಿಯುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

15 ಮತ್ತು ದುಷ್ಟರಿಗೆ ಬೆಳಕಿಲ್ಲವಾಗುವದು, ಎತ್ತಿದ ಕೈ ಮುರಿಯುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ದುಷ್ಟರು ಹಗಲುಬೆಳಕನ್ನು ಇಷ್ಟಪಡುವುದಿಲ್ಲ. ಅದು ಪ್ರಕಾಶಮಾನವಾಗಿ ಹೊಳೆಯುವಾಗ, ದುಷ್ಕೃತ್ಯಗಳನ್ನು ಮಾಡದಂತೆ ಅದು ಅವರನ್ನು ತಡೆಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಅದರಂತೆ ದುಷ್ಟರಿಗೆ ಬೆಳಕು ನಿರಾಕರಿಸಲಾಗುವುದು; ಅವರ ಹಿಂಸಾಚಾರವೂ ಮುರಿದು ಹೋಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:15
17 ತಿಳಿವುಗಳ ಹೋಲಿಕೆ  

ಧೂರ್ತನ, ದುರುಳನ ಭುಜಬಲವನು ನೀ ಮುರಿದುಬಿಡು I ಆತನ ನೀಚತನವನು ಪರೀಕ್ಷಿಸಿ ಶೂನ್ಯಮಾಡು II


ಬತ್ತಿಹೋಗುವುದು ದುರ್ಜನರ ಭುಜಬಲ I ಸತ್ಯವಂತರಿಗೆ ಪ್ರಭುವೇ ಉನ್ನತಬಲ II


ಹೌದು, ದುರುಳನ ದೀಪ ಆರಿಹೋಗುವುದು ಅವನ ಒಲೆಯು ಉರಿಯದೆ ಹೋಗುವುದು.


ದುರ್ಜನರ ಮಾರ್ಗ ಕಗ್ಗತ್ತಲಿನ ಹಾಗೆ, ಎಡವಿಬಿದ್ದ ಸ್ಥಳವೇ ತಿಳಿಯದು ಅವರಿಗೆ.


ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ - ನಾನು ಈಜಿಪ್ಟಿನ ಅರಸ ಫರೋಹನಿಗೆ ವಿರುದ್ಧನಾಗಿ ಅವನ ಕೈಗಳನ್ನು, ಅಂದರೆ ಸರಿಯಾಗಿ ಇರುವುದನ್ನೂ, ಮುರಿದದ್ದನ್ನೂ ಪೂರ್ತಿಯಾಗಿ ಮುರಿದುಬಿಟ್ಟು, ಖಡ್ಗವು ಅವನ ಕೈಯೊಳಗಿನಿಂದ ಬೀಳುವಂತೆ ಮಾಡುವೆನು.


ಅವನನ್ನು ಬೆಳಕಿನಿಂದ ತಳ್ಳುವರು ಕತ್ತಲಿಗೆ ಅಟ್ಟಿಬಿಡುವರು ಅವನನ್ನು ಲೋಕದಿಂದಲೆ.


ಕತ್ತಲು ಅಂಥವರನು ಸುತ್ತುವರೆದಿರುತ್ತದೆ ಹಾಡುಹಗಲಲ್ಲೆ ರಾತ್ರಿಯಲ್ಲೋ ಎಂಬಂತೆ ತಡಕಾಡುತ್ತಾರೆ ಅವರು ನಡುಹಗಲಲ್ಲೇ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಶತ್ರುಗಳು ಸಮೀಪಕ್ಕೆ ಬಂದಾಗ ಎಲೀಷನು, “ಸ್ವಾಮೀ, ಈ ಜನರನ್ನು ಕುರುಡರನ್ನಾಗಿ ಮಾಡಿ,” ಎಂದು ಸರ್ವೇಶ್ವರನನ್ನು ಪ್ರಾರ್ಥಿಸಿದನು. ಅವರು ಅವನ ಮೊರೆಯನ್ನು ಆಲಿಸಿ ಆ ಜನರನ್ನು ಕುರುಡರನ್ನಾಗಿ ಮಾಡಿದರು.


ಆದರೆ ಒಬ್ಬನು ಸ್ವದೇಶದವನೇ ಆಗಲಿ ವಿದೇಶದವನೇ ಆಗಲಿ ಮನಪೂರ್ವಕವಾಗಿ, ಬೇಕು ಬೇಕೆಂದು ಪಾಪವನ್ನು ಮಾಡಿದರೆ ಅಂಥವನನ್ನು ಕುಲದಿಂದ ತೆಗೆದುಹಾಕಬೇಕು. ಏಕೆಂದರೆ ಅವನು ಸರ್ವೇಶ್ವರನನ್ನು ತೃಣೀಕರಿಸಿದ್ದಾನೆ.


ದಿಕ್ಕಿಲ್ಲದವರನು ರಕ್ಷಿಸುತ್ತಾನೆ ದೇವರು ಅಂಥವರ ಬಾಯಿಗತ್ತಿಯಿಂದ ಬಿಡಿಸುತ್ತಾನೆ ಅವರನ್ನು ಬಲಾಢ್ಯರ ಕೈಯಿಂದ.


ನನ್ನ ಹೆಗಲಿನ ಕೀಲು ತಪ್ಪಿಹೋಗಲಿ ನನ್ನ ತೋಳು ಅದರ ಸಂದಿನಿಂದ ಕಳಚಿಬೀಳಲಿ.


ಮುದ್ರೆ ಒತ್ತಿದ ಜೇಡಿಮಣ್ಣಿನಂತೆ ಭೂಮಿ ರೂಪತಾಳುತ್ತದೆ ಅದು ನೆರಿಗೆ ಕಟ್ಟಿದ ಉಡಿಗೆಯಂತೆ ಕಾಣಿಸುತ್ತದೆ.


ಬೆಳಕನ್ನು ಪ್ರತಿಭಟಿಸುವವರಿದ್ದಾರೆ ಅದರ ಮಾರ್ಗವನ್ನು ತಿಳಿಯದೆ ಅದರ ಹಾದಿಯನ್ನು ಕೈಗೊಳ್ಳದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು