Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:17 - ಕನ್ನಡ ಸತ್ಯವೇದವು C.L. Bible (BSI)

17 ಮರಣದ ದ್ವಾರಗಳು ನಿನಗೆ ಗೋಚರವಾಗಿರುವುವೋ? ಘೋರಾಂಧಕಾರದ ಕದಗಳನ್ನು ನೀನು ಕಂಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಮರಣದ ಬಾಗಿಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

17 ಮರಣದ ಬಾಗಲುಗಳು ನಿನಗೆ ಗೋಚರವಾದವೋ? ಘೋರಾಂಧಕಾರದ ಕದಗಳನ್ನು ಕಂಡಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಯೋಬನೇ, ಪಾತಾಳದ ದ್ವಾರಗಳನ್ನಾಗಲಿ ಘೋರಾಂಧಕಾರದ ಬಾಗಿಲುಗಳನ್ನಾಗಲಿ ನೀನು ಎಂದಾದರೂ ನೋಡಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನಗೆ ಮರಣದ ಬಾಗಿಲುಗಳು ತೋರಿಸಲಾಗಿದೆಯೋ? ಘೋರಾಂಧಕಾರದ ಬಾಗಿಲುಗಳನ್ನು ನೀನು ಕಂಡಿರುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:17
15 ತಿಳಿವುಗಳ ಹೋಲಿಕೆ  

ಮೃತ್ಯುವಿನ ಬಾಯಿಂದೆನ್ನ ಬದುಕಿಸುವ ಪ್ರಭು, ಕನಿಕರಿಸು I ವೈರಿ-ವಿರೋಧಿಗಳೆನಗೆ ಗೈದ ಕಿರುಕುಳವನು, ನೀ ಗಮನಿಸು II


ಅಸಹ್ಯಪಟ್ಟರು ಅನ್ನ ಆಹಾರಗಳಿಗೆ I ಹತ್ತಿರವಾದರವರು ಮೃತ್ಯುದ್ವಾರಕೆ II


ಕಾರ್ಮೋಡಗಳು ಅದನ್ನು ಕವಿಯಲಿ ಇರುಳೂ ಮರಣದ ನೆರಳೂ ಅದನ್ನು ಆಕ್ರಮಿಸಲಿ ಹಗಲನ್ನೇ ಮಬ್ಬಾಗಿಸುವ ಮುಸುಕು ಅದನ್ನು ಹೆದರಿಸಲಿ.


ಕತ್ತಲು, ಕಗ್ಗತ್ತಲಿಂದವರನು ಹೊರತಂದನು I ಅವರ ಬೇಡಿಬಂಧನಗಳನು ಮುರಿದುಹಾಕಿದನು II


ದೇವರಾಜ್ಞೆಯನು ವಿರೋಧಿಸಿದ ಕಾರಣ I ಪರಾತ್ಪರನಾಜ್ಞೆಯನು ಹೀಗಳೆದ ಕಾರಣ II


ಕಾರ್ಗತ್ತಲ ಕಣಿವೆಯಲಿ ನಾ ನಡೆವಾಗಲು, ಅಂಜೆನು ಕೇಡಿಗೆ I ನಿನ್ನ ಕುರಿಗೋಲು, ಊರುಗೋಲು, ಧೈರ್ಯವನು ತರುವುದೆನಗೆ I ಕಾಣೆನೆಂದಿಗೂ ನಾ ದಿಗಿಲನು, ನೀನಿರಲು ನನ್ನೊಂದಿಗೆ II


ಇರುಳಿನ ಆಳದಲ್ಲಿರುವವುಗಳನ್ನು ಬೆಳಗಿಸುತ್ತಾನೆ ಗಾಢಾಂಧಕಾರವನ್ನು ಪ್ರಕಾಶಗೊಳಿಸುತ್ತಾನೆ.


ಕಾರ್ಗತ್ತಲಲಿ ವಾಸಿಸುವವರಿಗೆ ದಿವ್ಯಜ್ಯೋತಿಯೊಂದು ಕಾಣಿಸಿತು. ಮರಣಛಾಯೆ ಕವಿದ ನಾಡಿಗರಿಗೆ ಅರುಣೋದಯವಾಯಿತು,” ಎಂದು ನುಡಿದ ಪ್ರವಾದಿ ಯೆಶಾಯನ ವಚನಗಳು ಈಡೇರಿದವು.


ಕೃತ್ತಿಕೆ, ಮೃಗಶಿರ, ನಕ್ಷತ್ರಪುಂಜಗಳನು ಸೃಜಿಸಿದಾತನು ಕತ್ತಲನು ಬೆಳಕಾಗಿ, ಹಗಲನು ಇರುಳಾಗಿ ಮಾಡುವವನು, ಕಡಲಿನ ಜಲವನು ಮೇಲೆತ್ತಿ, ಧರೆಗೆ ಮಳೆಗರೆವಾತನು,


ಸುತ್ತುಕೊಂಡಿದ್ದವೆನ್ನನು ಮೃತ್ಯುಪಾಶಗಳು I ಬಿಗಿಹಿಡಿದಿದ್ದವು ಪಾತಾಳ ವೇದನೆಗಳು I ಬಂದೊದಗಿದ್ದವೆನಗೆ ಕಷ್ಟಸಂಕಟಗಳು II


ಸದಾ ಜೀವಿಸುವವನೂ ಆಗಿ ಇದ್ದೇನೆ. ಮರಣಹೊಂದಿದೆ ನಿಜ. ಆದರೆ ಇಗೋ ನೋಡು, ಯುಗಯುಗಾಂತರಕ್ಕೂ ಜೀವಿಸುವವನಾಗಿದ್ದೇನೆ. ಮೃತ್ಯುವಿನ ಮತ್ತು ಮೃತ್ಯುಲೋಕದ ಬೀಗದ ಕೈಗಳು ನನ್ನಲ್ಲಿವೆ.


ಮರಳಿ ಹಿಂದಿರುಗಲಾಗದ ನಾಡನು ನಾನು ಸೇರಲಿರುವೆ ಅಂಧಕಾರವೂ ಗಾಢಾಂಧಕಾರವೂ ಅಲ್ಲಿ ತುಂಬಿವೆ.


ಅದು ಆಕಾಶಕ್ಕಿಂತಲೂ ಎತ್ತರ; ನಿನ್ನಿಂದೇನು ಮಾಡಲು ಸಾಧ್ಯ? ಅದು ಪಾತಾಳಕ್ಕಿಂತಲೂ ಆಳ; ನಿನ್ನಿಂದ ಹೇಗೆ ತಿಳಿಯಲು ಸಾಧ್ಯ?


ಪಾತಾಳ ತೆರೆದಿದೆ ದೇವರ ದೃಷ್ಟಿಗೆ ಅಧೋಲೋಕ ಮರೆಯಾಗಿಲ್ಲ ಆತನಿಗೆ.


ಆತನ ದೃಷ್ಟಿಯಿಂದ ದುರುಳರು ಅಡಗಿಕೊಳ್ಳುವಂತಿಲ್ಲ ಅಂಥವರನ್ನು ಅಡಗಿಸಬಲ್ಲ ಇರುಳಿಲ್ಲ ಕಾರಿರುಳೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು