Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:19 - ಕನ್ನಡ ಸತ್ಯವೇದವು C.L. Bible (BSI)

19 ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

19 ಬೆಳಕಿನ ನಿವಾಸಕ್ಕೆ ಹೋಗುವ ದಾರಿ ಎಲ್ಲಿ? ಕತ್ತಲಿನ ಸ್ವಸ್ಥಳವು ಎಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಯೋಬನೇ, ಬೆಳಕು ಎಲ್ಲಿಂದ ಬರುತ್ತದೆ? ಕತ್ತಲೆಯು ಎಲ್ಲಿಂದ ಬರುತ್ತದೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಬೆಳಕಿನ ನಿವಾಸಕ್ಕೆ ಹೋಗುವ ಮಾರ್ಗವೆಲ್ಲಿ? ಕತ್ತಲು ವಾಸಮಾಡುವ ಸ್ಥಳವೆಲ್ಲಿ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:19
17 ತಿಳಿವುಗಳ ಹೋಲಿಕೆ  

ನಿನ್ನ ಮೇಲೆ ಗಗನದಲಿ ಮಿನುಗುವ ಸಕಲ ಜ್ಯೋತಿಗಳನು ಮುಸುಕು ಮಾಡುವೆನು, ನಿನ್ನ ನಾಡಿನೊಳು ಕತ್ತಲನೊಡ್ಡುವೆನು.


ಆಗ ನಡುಮಧ್ಯಾಹ್ನ. ಆಗಿನಿಂದ ಮೂರು ಗಂಟೆಯವರೆಗೂ ನಾಡಿನಲ್ಲೆಲ್ಲಾ ಕತ್ತಲೆ ಕವಿಯಿತು.


ಬೆಟ್ಟಗುಡ್ಡಗಳನ್ನು ರೂಪಿಸಿದಾತ ದೇವನೇ ಗಾಳಿಬಿರುಗಾಳಿಯನು ಸೃಜಿಸಿದಾತ ಆತನೇ ತನ್ನಾಲೋಚನೆಯನ್ನು ನರರಿಗರುಹಿಸಿದವ ದೇವನೇ ಹಗಲನ್ನು ಇರುಳನ್ನಾಗಿಸುವವನು ಆತನೇ ಪೊಡವಿಯ ಉನ್ನತ ಸ್ಥಾನದಲ್ಲಿ ನಡೆದಾಡುವವನಾತನೇ ಆತನ ನಾಮಧೇಯ - ಸೇನಾಧೀಶ್ವರ ದೇವರಾದ ಸರ್ವೇಶ್ವರನೇ.


ಬೆಳಕಿಗೂ ಕತ್ತಲಿಗೂ ನಾನೆ ಸೃಷ್ಟಿಕರ್ತನೆಂದು ಸುಖದುಃಖಗಳಿಗೆ ಕಾರಣಕರ್ತನೆಂದು ಸಕಲವನು ನಡೆಸುವ ಸರ್ವೇಶ್ವರ ನಾನೇ ಎಂದು.


ಕಾಳ ರಾತ್ರಿಯಾಯಿತು ಪ್ರಭು ಕಳಿಸಲು ಕತ್ತಲನು I ಈಜಿಪ್ಟರಾದರೊ ಇದಿರಿಸಿದರು ಆತನ ಮಾತನು II


ರಾತ್ರಿಯಾಗುತ್ತದೆ ನೀ ಕತ್ತಲನು ಬರಮಾಡಲು I ತಿರುಗಾಡುತ್ತವೆ ಆಗ ಕಾಡಿನ ಜೀವಜಂತುಗಳು II


ಕತ್ತಲನು ಕವಿಸಿಕೊಂಡನು ಸುತ್ತಲು ಛತ್ರಾಂಬರದೊಳು I ಮರೆಯಾದನು ಜಲಮಯ ನೀಲಮೇಘಗಳ ಮಧ್ಯದೊಳು II


ನೀವು ಆಕಾಶದ ಕಡೆಗೆ ಕಣ್ಣೆತ್ತಿ ನೋಡುವಾಗ ಭ್ರಮೆಗೊಂಡು, ಸೂರ್ಯ, ಚಂದ್ರ, ನಕ್ಷತ್ರಗಳೆನಿಸಿಕೊಳ್ಳುವ ಆಕಾಶದ ಪರಿವಾರಗಳನ್ನು ಆರಾಧಿಸಬಾರದು, ಪೂಜಿಸಬಾರದು. ಏಕೆಂದರೆ ನಿಮ್ಮ ದೇವರಾದ ಸರ್ವೇಶ್ವರ ಅವುಗಳನ್ನು ಜಗದ ಬೇರೆ ಎಲ್ಲ ಜನಾಂಗಗಳಿಗಾಗಿ ಕೊಟ್ಟಿದ್ದಾರೆ.


ಬಳಿಕ ಯೇಸು ಸ್ವಾಮಿ ಜನರನ್ನು ಮತ್ತೊಮ್ಮೆ ಕಂಡು ಹೀಗೆಂದರು: “ನಾನೇ ಜಗಜ್ಯೋತಿ, ನನ್ನನ್ನು ಹಿಂಬಾಲಿಸುವವನು ಕತ್ತಲಲ್ಲಿ ನಡೆಯುವುದಿಲ್ಲ. ಜೀವದಾಯಕ ಜ್ಯೋತಿ ಅವನಲ್ಲಿರುತ್ತದೆ.”


ನಿಜವಾದ ಜ್ಯೋತಿ ಆ ದಿವ್ಯವಾಣಿಯೇ. ಮಾನವರೆಲ್ಲರನ್ನು ಬೆಳಗಿಸಲು ಲೋಕಕ್ಕೆ ಆಗಮಿಸಲಿದ್ದ ಜಗಜ್ಜ್ಯೋತಿ ಅವರೇ.


ನಿಮ್ಮ ದೇವರಾದ ಸರ್ವೇಶ್ವರನಿಗೆ ಸಲ್ಲಿಸಿ ಗೌರವವನ್ನು ಇಲ್ಲವಾದರೆ ಆತ ಬರಮಾಡುವನು ಸ್ವಲ್ಪಕಾಲದಲ್ಲೇ ಕತ್ತಲನ್ನು. ನಿಮ್ಮ ಕಾಲುಗಳು ಮುಗ್ಗರಿಸುವುವು ಮಬ್ಬಿನ ಗುಡ್ಡಗಳ ನಡುವೆ.


ಬೆಳಕು-ಕತ್ತಲು ಸಂಧಿಸುವ ಸ್ಥಾನದಲಿ ಮೇರೆಹಾಕಿದ್ದಾನೆ ಸಮುದ್ರದ ಸುತ್ತಲಲಿ.


ಭೂವಿಸ್ತಾರವನ್ನು ಗ್ರಹಿಸಿರುವೆಯೋ? ಇದೆಲ್ಲವು ನಿನಗೆ ತಿಳಿದಿದ್ದರೆ ಹೇಳು, ನೋಡೋಣ!


ನೀನು ಅವುಗಳನು ಅವುಗಳ ಪ್ರಾಂತ್ಯಕ್ಕೆ ಕರೆದೊಯ್ಯಬಲ್ಲೆಯಾ? ಅವುಗಳ ನಿವಾಸಕೆ ಹಾದಿಯನು ಕಂಡುಹಿಡಿಯಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು