Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:22 - ಕನ್ನಡ ಸತ್ಯವೇದವು C.L. Bible (BSI)

22 ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ, ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

22 ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 “ಯೋಬನೇ, ನಾನು ಹಿಮವನ್ನೂ ಆಲಿಕಲ್ಲನ್ನೂ ಇಟ್ಟಿರುವ ಉಗ್ರಾಣಗಳೊಳಗೆ ನೀನು ಎಂದಾದರೂ ಹೋಗಿರುವಿಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 “ಯೋಬನೇ, ನೀನು ಹಿಮದ ಉಗ್ರಾಣಗಳಲ್ಲಿ ಪ್ರವೇಶಿಸಿರುವೆಯಾ? ಕಲ್ಮಳೆಯ ಉಗ್ರಾಣಗಳನ್ನು ನೋಡಿರುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:22
13 ತಿಳಿವುಗಳ ಹೋಲಿಕೆ  

ಹಿಮಕ್ಕೆ, ‘ಹದವಾಗಿ ಭೂಮಿಗೆ ಬೀಳು’ ಎನ್ನುತ್ತಾನೆ ಭಾರಿಮಳೆಗೆ, ‘ರಭಸದಿಂದ ಸುರಿ’ ಎನ್ನುತ್ತಾನೆ.


ಏಳಮಾಡುವನು ದಿಗಂತದೊಳು ಮೋಡವನು I ಹೊಳೆಯಮಾಡುವನು ಮಳೆಗೋಸ್ಕರ ಮಿಂಚನು I ಬೀಸಮಾಡುವನು ಉಗ್ರಾಣದಿಂದ ಗಾಳಿಯನು II


ತುಂಬಿಟ್ಟಿಹನು ಜಲರಾಶಿಗಳನು ಕಡಲೆಂಬ ಕುಡಿಕೆಯಲಿ I ಕೂಡಿಟ್ಟಿಹನು ಜಲಾಶಯಗಳನು ಬುವಿಯುಗ್ರಾಣದಲಿ II


ಕಪ್ಪಾಗಿದೆ ಆ ತೊರೆಗಳ ನೀರು ಮಂಜುಗಡ್ಡೆಯಿಂದ ಕದಡಿಹೋಗಿವೆ ಹಿಮಗಡ್ಡೆಯಿಂದ.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.


ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಆದಕಾರಣ, ನೀನು ಸುಣ್ಣ ಬಳಿಯುವವರಿಗೆ ಹೀಗೆ ನುಡಿ: ‘ವಿಪರೀತ ಮಳೆಯಾಗಿ ಗೋಡೆ ಬಿದ್ದುಹೋಗುವುದು, ಆನೆಕಲ್ಲುಗಳು ಸುರಿಯುವುವು; ಬಿರುಗಾಳಿ ಗೋಡೆಯನ್ನು ಕೆಡವಿಹಾಕುವುದು;


“ಹೀಗಿರಲು ಸರ್ವೇಶ್ವರನಾದ ದೇವರು ಇಂತೆನ್ನುತ್ತಾರೆ: ‘ನಾನು ಸಿಟ್ಟುಗೊಂಡು ಗೋಡೆಯನ್ನು ಬಿರುಗಾಳಿಯಿಂದ ಕೆಡವಿಹಾಕುವೆನು; ಅದನ್ನು ನಾಶಮಾಡಲು ನನ್ನ ಕೋಪದಿಂದ ವಿಪರೀತ ಮಳೆಯುಂಟಾಗುವುದು; ರೋಷದಿಂದ ಆನೆಕಲ್ಲುಗಳು ಸುರಿಯುವುವು.


ಸುರಿಸುವನು ಹಿಮವನು ಉಣ್ಣೆಯಂತೆ I ಹರಡುವನು ಇಬ್ಬನಿಯನು ಬೂದಿಯಂತೆ II


ಸುರಿಸುವನು ಆಲಿಕಲ್ಲನು ರೊಟ್ಟಿ ತುಂಡುಗಳಂತೆ I ಕೊರೆಯುವ ಚಳಿಯನು ಕಳಿಸುವನು ಸಹಿಸಲಾಗದಂತೆ II


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು