Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:23 - ಕನ್ನಡ ಸತ್ಯವೇದವು C.L. Bible (BSI)

23 ಇಕ್ಕಟ್ಟಿನ ಕಾಲಕ್ಕಾಗಿ ಅವುಗಳನು ನಾನು ಇಟ್ಟಿರುವೆನು ಯುದ್ಧಕದನಗಳ ದಿನಗಳಿಗಾಗಿ ನಾನು ಕಾದಿಟ್ಟಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೀಯಾ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೀಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

23 ಹಿಮದ ಭಂಡಾರಗಳನ್ನು ಪ್ರವೇಶಿಸಿದ್ದೆಯೋ? ಕಲ್ಮಳೆಯ ಬೊಕ್ಕಸಗಳನ್ನು ನೋಡಿದ್ದೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

23 ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ಕಾಲಕ್ಕಾಗಿಯೂ ನಾನು ಅವುಗಳನ್ನು ಕೂಡಿಸಿಟ್ಟಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

23 ಅವುಗಳನ್ನು ನಾನು ಇಕ್ಕಟ್ಟಿನ ಕಾಲಕ್ಕಾಗಿ ಇಟ್ಟಿರುವೆನು; ಯುದ್ಧಕದನಗಳ ದಿನಗಳಿಗಾಗಿಯೂ ಕಾದಿಟ್ಟಿರುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:23
11 ತಿಳಿವುಗಳ ಹೋಲಿಕೆ  

ಅವರು ಇಸ್ರಯೇಲರಿಗೆ ಬೆಂಗೊಟ್ಟು ಬೇತ್ ಹೋರೋನಿನ ಇಳಿಜಾರಿನಲ್ಲಿ ಓಡುತ್ತಾ ಅಜೇಕವನ್ನು ಮುಟ್ಟುವವರೆಗೂ ಸರ್ವೇಶ್ವರ ಆಕಾಶದಿಂದ ದೊಡ್ಡ ಕಲ್ಮಳೆಯನ್ನು ಸುರಿಸಿದರು. ಈ ಕಾರಣ ಅನೇಕರು ಸತ್ತರು. ಇಸ್ರಯೇಲರ ಕತ್ತಿಗೆ ಈಡಾದವರಿಗಿಂತ ಕಲ್ಮಳೆಯಿಂದ ನಾಶವಾದವರೇ ಹೆಚ್ಚುಮಂದಿ.


ಆಗ ಸರ್ವೇಶ್ವರ ತಮ್ಮ ಗಂಭೀರವಾದ ವಾಣಿಯನ್ನು ಕೇಳುವಂತೆ ಮಾಡುವರು. ತೀವ್ರಕೋಪ, ದಹಿಸುವ ಅಗ್ನಿಜ್ವಾಲೆ, ಸಿಡಿಯುವ ಮೋಡ, ಚಂಡಮಾರುತ, ಕಲ್ಮಳೆ - ಇವುಗಳಿಂದ ತಮ್ಮ ಶಿಕ್ಷಾಹಸ್ತವನ್ನು ಪ್ರದರ್ಶಿಸುವರು.


ಹಾಗಾದರೆ ನಾಳೆ ಇಷ್ಟು ಹೊತ್ತಿಗೆ ವಿಪರೀತವಾದ ಆನೆಕಲ್ಲಿನ ಮಳೆ ಬೀಳುವಂತೆ ಮಾಡುವೆನು. ಈಜಿಪ್ಟಿನ ರಾಜ್ಯ ಸ್ಥಾಪಿತವಾಗಿ ಇಂದಿನವರೆಗೂ ಬೀಳದಂಥ ಕಲ್ಲಿನ ಮಳೆ ಬೀಳುವುದು.


ಆಕಾಶದಿಂದ ಮನುಷ್ಯರ ಮೇಲೆ ಆಲಿಕಲ್ಲಿನ ಮಳೆ ಸುರಿಯಿತು. ಒಂದೊಂದು ಆಲಿಕಲ್ಲಿನ ತೂಕ ಸುಮಾರು ಐವತ್ತು ಕಿಲೊಗ್ರಾಮಿನಷ್ಟು ಇತ್ತು. ಆ ಆಲಿಕಲ್ಲಿನ ವಿಪತ್ತು ಅಧಿಕವಾದುದರಿಂದಲೂ ಭಯಂಕರವಾದುದರಿಂದಲೂ ಜನರು ದೇವರನ್ನು ದೂಷಿಸಿದರು.


ಮಳೆ ಬಿತ್ತು, ನೆರೆ ಬಂತು, ಗಾಳಿ ಬೀಸಿ ಆ ಮನೆಗೆ ಅಪ್ಪಳಿಸಿತು; ಅದು ಕುಸಿದು ಬಿತ್ತು. ಅದಕ್ಕಾದ ಪತನವೋ ಅಗಾಧ!”


ಹೀಗೆ ಜನಾಂಗಗಳನ್ನು ಪೋಷಣೆ ಮಾಡುತ್ತಾನೆ ಆಹಾರವನ್ನು ಧಾರಾಳವಾಗಿ ದಯಪಾಲಿಸುತ್ತಾನೆ.


ಕಪಟ ಹೃದಯಿಗಳು ಕೋಪಿಷ್ಠರಾಗುವರು ತಮ್ಮನ್ನು ಬಂಧಿಸುವಾಗಲು ಮೊರೆಯಿಡಲು.


ಆ ಮಳೆ ಬಲು ರಭಸವಾಗಿತ್ತು. ಅದರೊಂದಿಗೆ ಮಿಂಚು ಫಳಫಳನೆ ಹೊಳೆಯುತ್ತಿತ್ತು. ಈಜಿಪ್ಟಿನವರು ಒಂದು ರಾಷ್ಟ್ರವಾದಂದಿನಿಂದ ಆ ದೇಶದಲ್ಲಿ ಅಂಥ ಘೋರವಾದ ಆನೆಕಲ್ಲಿನ ಮಳೆ ಆಗಿರಲಿಲ್ಲ.


ಹಿಮದ ಭಂಡಾರವನು ಹೊಕ್ಕಿರುವೆಯಾ? ಕಲ್ಮಳೆಯ ಬೊಕ್ಕಸವನು ನೋಡಿರುವೆಯಾ?


ಬೆಳಕು ಏರಿಬರುವ ಜಾಗವೆಲ್ಲಿ? ಬಿಸಿಗಾಳಿ ಬೀಸಿಬರುವ ಮಾರ್ಗವೆಲ್ಲಿ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು