Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:35 - ಕನ್ನಡ ಸತ್ಯವೇದವು C.L. Bible (BSI)

35 ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು ‘ಇದೋ ಬಂದಿದ್ದೇವೆ’ ಎಂದು ನಿನಗೆ ಹೇಳುತ್ತವೆಯೊ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

35 ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು, ‘ಇಗೋ, ಬಂದಿದ್ದೇವೆ’ ಎನ್ನುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

35 ಸಿಡಿಲುಗಳು ನಿನ್ನ ಅಪ್ಪಣೆಯಂತೆ ಹೋಗಿ ಬಂದು - ಇಗೋ, ಬಂದಿದ್ದೇವೆ ಎನ್ನುವವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

35 ಯೋಬನೇ, ನೀನು ಸಿಡಿಲಿಗೆ ಆಜ್ಞಾಪಿಸಬಲ್ಲೆಯಾ? ಅದು ನಿನ್ನ ಬಳಿಗೆ ಬಂದು, ‘ಇಗೋ ಬಂದಿದ್ದೇನೆ; ತಮಗೇನಾಗಬೇಕು’ ಎನ್ನುವುದೇ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

35 ನಿನ್ನ ಅಪ್ಪಣೆಯಂತೆ ಸಿಡಿಲುಗಳು ಹೋಗಿಬಂದು, ‘ಇಗೋ, ನಾವು ಇಲ್ಲಿದ್ದೇವೆ,’ ಎಂದು ನಿನಗೆ ಹೇಳುತ್ತವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:35
13 ತಿಳಿವುಗಳ ಹೋಲಿಕೆ  

ಸರ್ವೇಶ್ವರ ಸ್ವಾಮಿ ಹೀಗೆನ್ನುತ್ತಾರೆ : “ನನ್ನನ್ನು ವಿಚಾರಿಸದವರಿಗೂ ನಾ ದರ್ಶನವಿತ್ತೆ. ನನ್ನನ್ನು ಹುಡುಕದವರಿಗೂ ನಾ ಒಡನೆ ಸಿಕ್ಕಿದೆ. ನನ್ನ ನಾಮಸ್ಮರಣೆ ಮಾಡದ ಜನಾಂಗಕ್ಕೆ, ಇಗೋ, ‘ಇದ್ದೇನೆ, ಇಲ್ಲೇ ಇದ್ದೇನೆ’ ಎನ್ನುತ್ತಿದ್ದೆ.


ಆಗ, “ಯಾರನ್ನು ಕಳುಹಿಸಲಿ? ನಮ್ಮ ಪರವಾಗಿ ಹೋಗುವವರು ಯಾರು?” ಎಂಬ ನುಡಿ ಕೇಳಿಸಿತು. ಅದಕ್ಕೆ ನಾನು, “ಇಗೋ, ನಾನು ಸಿದ್ಧ, ನನ್ನನ್ನು ಕಳುಹಿಸಿ” ಎಂದೆನು.


ಅದನ್ನು ಗಗನಮಂಡಲದೊಳು ಹರಡುತ್ತಾನೆ ಜಗದ ಅಂಚಿನ ತನಕ ಮಿಂಚು ಹೊಳೆಯುವಂತೆ ಮಾಡುತ್ತಾನೆ.


ಸಿಡಿಲನ್ನೇ ಕೈತುಂಬ ಹಿಡಿದು ಗುರಿಮುಟ್ಟಲೆಂದು ಆಜ್ಞೆಯಿಡುತ್ತಾನೆ.


ಆಕಾಶದಿಂದ ಬೆಂಕಿಬಿದ್ದು ನನಗೆ ಮುಂದೆ ಬಂದ ಆ ಇಬ್ಬರು ಪಂಚಾಶದಧಿಪತಿಗಳನ್ನೂ ಅವರ ಸಿಪಾಯಿಗಳನ್ನೂ ದಹಿಸಿಬಿಟ್ಟಿತಲ್ಲವೆ? ನನ್ನ ಪ್ರಾಣವಾದರೂ ನಿಮ್ಮ ದೃಷ್ಟಿಯಲ್ಲಿ ಮೌಲ್ಯವುಳ್ಳದೆಂದು ಮಾನ್ಯವಾಗಲಿ,” ಎಂದು ಬೇಡಿಕೊಂಡನು.


ಅದಕ್ಕೆ ಎಲೀಯನು, “ನಾನು ದೈವಪುರುಷನಾಗಿ ಇರುವುದು ನಿಜವಾದರೆ ಆಕಾಶದಿಂದ ಬೆಂಕಿಬಿದ್ದು ನಿನ್ನನ್ನೂ ನಿನ್ನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಡಲಿ,” ಎಂದನು. ಕೂಡಲೆ ಆಕಾಶದಿಂದ ಬೆಂಕಿಬಿದ್ದು ಅವನನ್ನೂ ಅವನ ಐವತ್ತುಮಂದಿ ಸಿಪಾಯಿಗಳನ್ನೂ ದಹಿಸಿಬಿಟ್ಟಿತು.


ಅರಸನು, “ಅಹೀಟೂಬನ ಮಗನೇ, ನಾನು ಕೇಳುವ ಪ್ರಶ್ನೆಗೆ ಉತ್ತರಕೊಡು,” ಎಂದನು. ಅದಕ್ಕೆ ಅವನು, “ಒಡೆಯಾ, ಅಪ್ಪಣೆಯಾಗಲಿ,” ಎಂದನು.


ಸರ್ವೇಶ್ವರನ ಬಳಿಯಿಂದ ಬೆಂಕಿ ಹೊರಟು ಧೂಪಾರತಿಯನ್ನು ಅರ್ಪಿಸುತ್ತಿದ್ದ ಆ 250 ಮಂದಿಯನ್ನು ಭಸ್ಮಮಾಡಿತು.


ಇಸ್ರಯೇಲರು ತಮಗೆ ದುರವಸ್ಥೆ ಪ್ರಾಪ್ತವಾಯಿತೆಂದು ಸರ್ವೇಶ್ವರ ಸ್ವಾಮಿಗೆ ವಿರುದ್ಧ ಗುಣಗುಟ್ಟಿದರು. ಅದಕ್ಕೆ ಕೋಪಗೊಂಡ ಸರ್ವೇಶ್ವರ ಅವರ ಮಧ್ಯೆ ಬೆಂಕಿ ಬೀಳುವಂತೆ ಮಾಡಿದರು. ಇದರ ಪರಿಣಾಮವಾಗಿ ಪಾಳೆಯದ ಕಡೇಭಾಗದಲ್ಲಿದ್ದವರು ಸುಟ್ಟುಹೋದರು.


ಆಗ ಸರ್ವೇಶ್ವರನ ಸನ್ನಿಧಿಯಿಂದ ಬೆಂಕಿ ಹೊರಟು ಅವರನ್ನು ನಾಶಮಾಡಿತು. ಅವರು ಸರ್ವೇಶ್ವರನ ಸನ್ನಿಧಿಯಲ್ಲೇ ಸತ್ತರು.


ಅದಕ್ಕೆ ಮೋಶೆ, “ನಾನು ಈ ಪಟ್ಟಣದಿಂದಾಚೆಗೆ ಹೋದ ಕೂಡಲೆ ಸರ್ವೇಶ್ವರ ಸ್ವಾಮಿಯ ಕಡೆಗೆ ಕೈಯೆತ್ತಿ ಪ್ರಾರ್ಥಿಸುವೆನು. ಆಗ ಗುಡುಗು ಮತ್ತು ಕಲ್ಲಿನ ಮಳೆಯು ನಿಂತುಹೋಗುವುವು. ಇದರಿಂದ ಇಡೀ ಲೋಕವು ಸರ್ವೇಶ್ವರನ ಅಧೀನದಲ್ಲಿದೆ ಎಂದು ತಾವು ತಿಳಿದುಕೊಳ್ಳುವಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು