Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:36 - ಕನ್ನಡ ಸತ್ಯವೇದವು C.L. Bible (BSI)

36 ಜ್ಞಾನವನು ದಯಪಾಲಿಸಿದವನಾರು ಇಬಿಸ್ ಪಕ್ಷಿಗೆ? ವಿವೇಕವನು ಅನುಗ್ರಹಿಸಿದವನಾರು ಕೋಳಿಹುಂಜಕ್ಕೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

36 ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

36 ಯಾರು ಕಾರ್ಮುಗಿಲಿಗೆ ಜ್ಞಾನವನ್ನು ದಯಪಾಲಿಸಿದರು? ಉತ್ಪಾತಗಳಿಗೆ ವಿವೇಕವನ್ನು ಅನುಗ್ರಹಿಸಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

36 “ಯೋಬನೇ, ಮನುಷ್ಯರನ್ನು ಜ್ಞಾನಿಗಳನ್ನಾಗಿ ಮಾಡುವವರು ಯಾರು? ಅವರ ಅಂತರಾಳದಲ್ಲಿ ಜ್ಞಾನವನ್ನು ಇಡುವವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

36 ಇಬಿಸ್ ಪಕ್ಷಿಗೆ ಜ್ಞಾನವನ್ನು ಕೊಟ್ಟವರು ಯಾರು? ಕೋಳಿಹುಂಜಕ್ಕೆ ಅರಿವನ್ನು ಕೊಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:36
11 ತಿಳಿವುಗಳ ಹೋಲಿಕೆ  

ಆದರೆ ಮಾನವರಿಗುಂಟು ಒಂದು ಆತ್ಮ ಸರ್ವಶಕ್ತಸ್ವಾಮಿಯ ಉಸಿರಿನ ಮೂಲಕ ಅವರಿಗೆ ದೊರಕುತ್ತದೆ ವಿವೇಕ.


ಅಂತರಂಗ ಶುದ್ಧಿಯನು ನೀ ಬಯಸುತಿ I ಅಂತರ್ಯ ಜ್ಞಾನವನು ಉದಯಗೊಳಿಸುತಿ II


ದೇವರು ತಾವು ಮೆಚ್ಚಿದವನಿಗೆ ಜ್ಞಾನವನ್ನೂ, ತಿಳುವಳಿಕೆಯನ್ನೂ, ಸುಖಸಂತೋಷವನ್ನೂ ದಯಪಾಲಿಸುತ್ತಾರಲ್ಲವೇ? ಪಾಪಿಗಾದರೋ, ಪ್ರಯೋಜನಕರವಾದುವುಗಳನ್ನು ಕೂಡಿಸಿಡುವ ಪ್ರಯಾಸವನ್ನು ಮಾತ್ರ ವಿಧಿಸಿದ್ದಾರೆ. ಆದರೆ ಅವು ತಮಗೆ ಮೆಚ್ಚುಗೆಯಾದವರಿಗೆ ಸೇರಬೇಕಾದವು. ಇದೂ ಕೂಡ ಗಾಳಿಯನ್ನು ಹಿಡಿಯಲು ಬೆನ್ನಟ್ಟಿದಂತೆ ವ್ಯರ್ಥ.


ಜ್ಞಾನವನ್ನು ನೀಡುವಾತ ಸರ್ವೇಶ್ವರನೇ; ತಿಳುವಳಿಕೆ, ವಿವೇಕ ಹೊರಡುವುದು ಆತನ ಬಾಯಿಂದಲೇ.


ನಿಮ್ಮಲ್ಲಿ ಯಾರಿಗಾದರೂ ಜ್ಞಾನದ ಕೊರತೆಯಿದ್ದರೆ ಅಂಥವನು ದೇವರಲ್ಲಿ ಬೇಡಿಕೊಳ್ಳಲಿ. ಯಾರನ್ನೂ ತಿರಸ್ಕರಿಸದೆ ಎಲ್ಲರಿಗೂ ಯಥೇಚ್ಛವಾಗಿ ನೀಡುವ ದೇವರು, ಅವನಿಗೆ ಜ್ಞಾನವನ್ನು ದಯಪಾಲಿಸುತ್ತಾರೆ.


ದೇವರ ಹೃದಯ ಧೀಮಂತ, ಅವರ ಶಕ್ತಿ ಅತುಳ ಆತನನ್ನು ಪ್ರತಿಭಟಿಸಿ ಜಯಗಳಿಸಿದವನಿಲ್ಲ.


ಮತ್ತು ಅವನಿಗೆ ದೈವಾತ್ಮಶಕ್ತಿಯನ್ನು ಕೊಟ್ಟು, ತಕ್ಕಜ್ಞಾನ, ವಿವೇಕ ವಿವಿಧ ಶಿಲ್ಪಶಾಸ್ತ್ರ ಕುಶಲತೆಯನ್ನು ಅನುಗ್ರಹಿಸಿದ್ದೇನೆ.


ಎಲ್ಲಾ ಯೋಗ್ಯ ವರಗಳೂ ಉತ್ತಮ ಕೊಡುಗೆಗಳೂ ಬರುವುದು ಮೇಲಿನಿಂದಲೇ. ಜ್ಯೋತಿರ್ಮಂಡಲವನ್ನು ಉಂಟುಮಾಡಿದ ದೇವರೇ ಅವುಗಳ ಮೂಲದಾತರು. ಅವರಲ್ಲಿ ಚಂಚಲತೆ ಇಲ್ಲ, ಮಬ್ಬು ಮುಸುಕಿನ ಛಾಯೆಯೂ ಇಲ್ಲ.


ಅವನ ದೇವರು ಇದನ್ನೆಲ್ಲಾ ಸರಿಯಾಗಿ ತಿಳಿಸಿ ಕಲಿಸಿಕೊಡುತ್ತಾರೆ.


ಆದರೆ ದೇವರಲ್ಲಿದೆ ಜ್ಞಾನದೊಡನೆ ಶಕ್ತಿಕೂಡ ಆತನಲ್ಲಿದೆ ವಿವೇಕ ಮತ್ತು ಸನ್ಮತಿ ಸಹ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು