Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:5 - ಕನ್ನಡ ಸತ್ಯವೇದವು C.L. Bible (BSI)

5 ಅದರಳತೆಯನ್ನು ಗೊತ್ತುಮಾಡಿದವನಾರೆಂದು ನಿನಗೆ ತಿಳಿದಿದೆಯೆ? ಅದರ ಮೇಲೆ ನೂಲು ಹಿಡಿದವನಾರೆಂದು ನಿನಗೆ ಗೊತ್ತಿದೆಯೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

5 ಅದರ ಅಳತೆಗಳನ್ನು ಯಾರು ಗೊತ್ತುಮಾಡಿದರು? ನೀನೇ ಬಲ್ಲೆ. ಅದರ ಮೇಲೆ ನೂಲುಹಿಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಯೋಬನೇ, ಭೂಮಿಯ ಅಳತೆಗಳನ್ನು ಯಾರು ನಿರ್ಧರಿಸಿದರು? ಭೂಮಿಯ ಅಳತೆಯನ್ನು ನೂಲುಗುಂಡಿನಿಂದ ಅಳೆದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಭೂಮಿಯ ಅಳತೆಯನ್ನು ಗೊತ್ತುಮಾಡಿದವರು ಯಾರು? ನಿಶ್ಚಯವಾಗಿ ನಿನಗೆ ಗೊತ್ತಿರಬೇಕಲ್ಲಾ? ಭೂಮಿಯ ಮೇಲೆ ನೂಲು ಹಿಡಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:5
13 ತಿಳಿವುಗಳ ಹೋಲಿಕೆ  

ಅಳೆವನಾರು ಸಮುದ್ರಸಾಗರಗಳನ್ನು ಬೊಗಸೆಗೈಯಿಂದ? ಮೊಳ ಹಾಕುವವನಾರು ಆಕಾಶಮಂಡಲವನ್ನು ಕೈಗೇಣಿನಿಂದ? ತುಂಬುವವನಾರು ಧರೆಯ ಮರಳನ್ನೆಲ್ಲಾ ಕೊಳಗದೊಳಗೆ? ತೂಗಿದವನಾರು ಬೆಟ್ಟಗುಡ್ಡಗಳನ್ನು ತ್ರಾಸುತಕ್ಕಡಿಯೊಳಗೆ?


ಅದು ಭೂಮಿಗಿಂತಲು ಉದ್ದ ಸಮುದ್ರಕ್ಕಿಂತಲು ಅಗಲ.


ಮತ್ತೊಬ್ಬರ ಕ್ಷೇತ್ರದ ಸೇವಾಫಲಗಳನ್ನು ನಮ್ಮದೆಂದು ಹೊಗಳಿಕೊಳ್ಳದೆ, ನಿಮ್ಮ ಗಡಿಯಾಚೆಯ ನಾಡುಗಳಲ್ಲೂ ಶುಭಸಂದೇಶವನ್ನು ಸಾರಬೇಕೆಂಬುದೇ ನಮ್ಮ ಆಶಯ.


ಆಸೀನನಾಗಿಹನು ಆತ ಭೂಮಂಡಲಕ್ಕಿಂತ ಮೇಲೆ ಭೂನಿವಾಸಿಗಳು ಕಾಣುತಿಹರು ಆತನಿಗೆ ಮಿಡತೆಗಳಂತೆ ಹರಡಿಹನು ಆಕಾಶಮಂಡಲವನು ನವಿರು ಬಟ್ಟೆಯಂತೆ ಮೇಲೆತ್ತಿಕಟ್ಟಿಹನು ಅದನ್ನು ನಿವಾಸದ ಗುಡಾರದಂತೆ.


ಅದು ಹದ್ದುಗಳ, ಮುಳ್ಳುಹಂದಿಗಳ ಸ್ವಾಧೀನವಾಗುವುದು. ಕಾಗೆಗೂಗೆಗಳಿಗೆ ಅದು ಗೂಡಾಗುವುದು. ಸರ್ವೇಶ್ವರ ಹಾಳುಪಾಳನ್ನೇ ಅದರ ಅಳತೆಗೋಲನ್ನಾಗಿಯೂ ಅಸ್ತವ್ಯಸ್ತತೆಯನ್ನೇ ಅದರ ಮಟ್ಟಗೋಲನ್ನಾಗಿಯೂ ಮಾಡುವರು.


ನಾನು ಅಲ್ಲಿದ್ದೆ ಆತ ಆಕಾಶಮಂಡಲವನ್ನು ಸ್ಥಾಪಿಸುವಾಗ ಸಾಗರದ ಮೇಲೆ ಚಕ್ರಾಕಾರದ ಗೆರೆಯನ್ನು ಎಳೆವಾಗ,


ಓಡಿಸಿದನು ಅವರಿಗೆದುರಾಗಿದ್ದ ಜನಾಂಗಗಳನು I ಸೊತ್ತಾಗಿ ಹಂಚಿದನು ಇಸ್ರಯೇಲರಿಗಾ ನಾಡನು I ನೆಲೆಗೊಳಿಸಿದನಾ ಜನಾಂಗದ ಬಿಡಾರದಲಿ ಇವರನು II


ಆದರೂ ಅವುಗಳ ಧ್ವನಿರೇಖೆ ಹರಡಿದೆ ಬುವಿಯಾದ್ಯಂತ I ಅವುಗಳ ನುಡಿಮಾತು ವ್ಯಾಪಿಸಿದೆ ಜಗದಾದ್ಯಂತ II


ಗಾಳಿಗೆ ತಕ್ಕ ವೇಗವನು ನೇಮಿಸಿದಾಗ ಜಲಕ್ಕೆ ತಕ್ಕ ಜಾಗವನು ನಿರ್ಣಯಿಸಿದಾಗ,


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


ಭೂಲೋಕವನು ಆತನ ವಶಕ್ಕೆ ಕೊಟ್ಟವನುಂಟೆ? ಆತನಲ್ಲದೆ ಭೂಮಂಡಲವನು ಕ್ರಮಪಡಿಸಿದವನುಂಟೆ?


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು