Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:6 - ಕನ್ನಡ ಸತ್ಯವೇದವು C.L. Bible (BSI)

6 ಉದಯ ನಕ್ಷತ್ರಗಳ ಜಯಕಾರದ ನಡುವೆ ದೇವದೂತರೆಲ್ಲರ ಆನಂದಘೋಷಣೆಯ ಮಧ್ಯೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 ಭೂಲೋಕದ ಅಸ್ತಿವಾರವು ಯಾವುದರ ಮೇಲೆ ನೆಲೆಗೊಂಡವು? ಅದರ ಮೂಲೆಗಲ್ಲನ್ನು ಹಾಕಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

6 ಮುಂಜಾನೆ ನಕ್ಷತ್ರಗಳು ಒಟ್ಟಾಗಿ ಉತ್ಸಾಹ ಧ್ವನಿಯೆತ್ತುತ್ತಾ ದೇವಕುಮಾರರೆಲ್ಲರೂ ಆನಂದಘೋಷಮಾಡುತ್ತಾ ಇರಲು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಭೂಮಿಯ ಆಧಾರಸ್ತಂಭಗಳು ಯಾವುದರ ಮೇಲೆ ನೆಲೆಗೊಂಡಿವೆ? ಭೂಮಿಯ ಅಸ್ತಿವಾರಕ್ಕೆ ಮೊದಲ ಕಲ್ಲನ್ನು ಹಾಕಿದವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಯಾವುದರ ಮೇಲೆ ಭೂಮಿಯ ಅಸ್ತಿವಾರ ಸ್ಥಿರಪಡಿಸಲಾಗಿದೆ? ಅದಕ್ಕೆ ಮೂಲೆಗಲ್ಲನ್ನು ಇಟ್ಟವರು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:6
13 ತಿಳಿವುಗಳ ಹೋಲಿಕೆ  

ಉತ್ತರ ದಿಕ್ಕನ್ನು ವಿಸ್ತರಿಸಿಹನು ಶೂನ್ಯದ ಮೇಲೆ ಭೂಮಂಡಲವನ್ನು ತೂಗುಹಾಕಿಹನು ಏನೂ ಇಲ್ಲದರ ಮೇಲೆ.


ಬುವಿಯನು ತಳಹದಿಯ ಮೇಲೆ ಸ್ಥಾಪಿಸಿರುವೆ I ಅದೆಂದಿಗೂ ಕದಲದಂತೆ ಮಾಡಿರುವೆ II


ಆದರೆ, ಅವರು ಒಂದು ವಿಷಯವನ್ನು ಉದ್ದೇಶಪೂರ್ವಕವಾಗಿ ಮರೆತುಬಿಡುತ್ತಾರೆ. ಅದೇನೆಂದರೆ, ಪ್ರಾರಂಭದಲ್ಲಿದ್ದ ಭೂಮ್ಯಾಕಾಶಗಳು ದೇವರ ವಾಕ್ಯದಿಂದಲೇ ಉಂಟಾದವು. ಜಲದಿಂದ, ಜಲದ ಮೂಲಕ ಭೂಮಿ ಉಂಟಾಯಿತು.


ಇಸ್ರಯೇಲಿನ ವಿಷಯವಾಗಿ ಸರ್ವೇಶ್ವರಸ್ವಾಮಿ ನುಡಿದ ದೈವೋಕ್ತಿ: ಆಕಾಶಮಂಡಲವನ್ನು ಹರಡಿ, ಭೂಲೋಕಕ್ಕೆ ಅಸ್ತಿಭಾರವನ್ನು ಹಾಕಿ, ಮಾನವನ ಜೀವಾತ್ಮವನ್ನು ಸೃಷ್ಟಿಸುವ ಸರ್ವೇಶ್ವರ ಇಂತೆನ್ನುತ್ತಾರೆ:


ಎಂದೇ, ಒಡೆಯರಾದ ಸರ್ವೇಶ್ವರ ಹೀಗೆನ್ನುತ್ತಾರೆ : ‘ಇಗೋ, ನಾನು ಸಿಯೋನಿನಲ್ಲಿ ಅಸ್ತಿವಾರದ ಕಲ್ಲೊಂದನ್ನು ಇಡುತ್ತೇನೆ. ಅದು ಸ್ಥಿರವಾದ, ಪರೀಕ್ಷಿತವಾದ, ಮೌಲ್ಯವಾದ ಮೂಲೆಗಲ್ಲು. ಇದರಲ್ಲಿ ವಿಶ್ವಾಸವಿಡುವವನು ತಾಳ್ಮೆಯಿಂದ ಬಾಳುವನು.


ಮನೆಕಟ್ಟುವವರು ಮೂಲೆಗೆಸೆದ ಕಲ್ಲು I ಆಯಿತು ನೋಡು, ಮುಖ್ಯವಾದ ಮೂಲೆಗಲ್ಲು II


ವಹಿಸಿಹನು ಪ್ರಭು, ರಾಜ್ಯಾಧಿಕಾರವನು I ಧರಿಸಿಹನು ಘನತೆಯ ವಸ್ತ್ರ ಲಾಂಛನವನು I ತೊಟ್ಟಿಹನು ಶೌರ್ಯವೆಂಬ ನಡುಕಟ್ಟನು I ಸ್ಥಿರಪಡಿಸಿಹನು ಕದಲದಂತೆ ಜಗವನು II


ನಮ್ಮ ಗಂಡು ಮಕ್ಕಳಿರಲಿ I ಯೌವನಾವಸ್ಥೆಯಲಿ ಹುಲುಸಾಗಿ ಬೆಳೆದ ಗಿಡಗಳಂತೆ II ನಮ್ಮ ಹೆಣ್ಣುಮಕ್ಕಳಿರಲಿ I ಅರಮನೆಯಲ್ಲಿ ಕೆತ್ತಿದ ಸುಂದರ ಮೂಲೆಗಂಬಗಳಂತೆ II


ಕಡಲನು ತಳಪಾಯವನಾಗಿಸಿದವನು ಆತನೆ I ಜಲರಾಶಿ ನಡುವೆ ಅದನು ಸ್ಥಿರಗೊಳಿಸಿದವನಾತನೆ II


ಎತ್ತುವನಾತ ದೀನರನು ಧೂಳಿಂದ, ದರಿದ್ರರನು ತಿಪ್ಪೆಯಿಂದ. ಕುಳ್ಳರಿಸುವನವರನು ಅಧಿಪತಿಗಳ ಸಮೇತ ಅನುಗ್ರಹಿಸುವನು ಹಕ್ಕಾಗಿ ಆ ಮಹಿಮಾಸನ. ಕಾರಣ-ಭೂಮಿಯ ಆಧಾರಸ್ತಂಭಗಳು ಸರ್ವೇಶ್ವರನವೇ ಭೂಮಂಡಲವನು ಅವುಗಳ ಮೇಲೆ ಸ್ಥಾಪಿಸಿದವನು ಆತನೇ.


ಜಲಪ್ರವಾಹಗಳು ತನ್ನ ಅಪ್ಪಣೆಯನ್ನು ಮೀರದ ಹಾಗೆ ಸಮುದ್ರಕ್ಕೆ ಎಲ್ಲೆಕಟ್ಟನ್ನು ನೇಮಿಸುವಾಗ ಭೂಮಿಯ ಅಸ್ತಿಭಾರವನ್ನು ಗೊತ್ತುಮಾಡುವಾಗ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು