Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 38:9 - ಕನ್ನಡ ಸತ್ಯವೇದವು C.L. Bible (BSI)

9 ಅದಕ್ಕೆ ಮೋಡಗಳನು ತೊಡಿಸಿ, ಕಾರ್ಗತ್ತಲನು ಉಡಿಸಿದವನು ಯಾರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ, ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

9 ಆ ಕಾಲದಲ್ಲಿ ನಾನು ಮೋಡಗಳನ್ನು ಅದಕ್ಕೆ ವಸ್ತ್ರವನ್ನಾಗಿಯೂ ಕಾರ್ಗತ್ತಲನ್ನು ಸುತ್ತುಬಟ್ಟೆಯನ್ನಾಗಿಯೂ ಮಾಡಿದೆನಲ್ಲವೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಆ ಸಮಯದಲ್ಲಿ ನಾನು ಸಮುದ್ರವನ್ನು ಮೋಡಗಳಿಂದ ಮುಚ್ಚಿ ಕಾರ್ಗತ್ತಲನ್ನು ಬಟ್ಟೆಯಂತೆ ಸುತ್ತಿಟ್ಟೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ನಾನು ಸಮುದ್ರಕ್ಕೆ ಮೇಘವನ್ನು ವಸ್ತ್ರವನ್ನಾಗಿ ತೊಡಿಸಿ, ಅದಕ್ಕೆ ಕಾರ್ಗತ್ತಲನ್ನು ಉಡಿಸಿದೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 38:9
4 ತಿಳಿವುಗಳ ಹೋಲಿಕೆ  

ಭೂಮಿ ನಿರಾಕಾರವಾಗಿಯೂ ಬರಿದಾಗಿಯೂ ಇತ್ತು. ಆದಿಸಾಗರದ ಮೇಲೆ ಕಗ್ಗತ್ತಲು ಕವಿದಿತ್ತು. ದೇವರಾತ್ಮ ಜಲರಾಶಿಯ ಮೇಲೆ ಚಲಿಸುತ್ತಿತ್ತು.


“ಭೂಗರ್ಭವನ್ನು ಭೇದಿಸಿಕೊಂಡು ಬಂದ ಸಮುದ್ರವನು ದ್ವಾರಗಳಿಂದ ಬಂಧಿಸಿ ಮುಚ್ಚಿದವನಾರು?


ಅದಕ್ಕೆ ಸರಹದ್ದನು ನಿಯಮಿಸಿ ಕದಗಳನೂ ಅಗುಳಿಗಳನೂ ಇಟ್ಟವನಾರು?


ಆಕಾಶಕ್ಕೆ ಏರಿ ಮರಳಿದವನು ಯಾರು? ಮುಷ್ಟಿಯಲ್ಲಿ ಗಾಳಿಯನ್ನು ಹಿಡಿದಿಟ್ಟವನು ಯಾರು? ಬಟ್ಟೆಯಲ್ಲಿ ನೀರನ್ನು ಮೂಟೆಕಟ್ಟಿದವನು ಯಾರು? ಭೂಮಿಗೆ ಎಲ್ಲೆಮೇರೆಗಳನ್ನು ನಿಗದಿಮಾಡಿದವನು ಯಾರು? ಆತನ ಹೆಸರೇನು? ಆತನ ಮಗನ ಹೆಸರೇನು? ಬಲ್ಲೆಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು