Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೋಬ 39:11 - ಕನ್ನಡ ಸತ್ಯವೇದವು C.L. Bible (BSI)

11 ಬಲವಿದೆಯೆಂದು ಅದರಲಿ ನಂಬಿಕೆಯಿಡುವೆಯಾ? ಬಲಿಷ್ಠಕಾರ್ಯಗಳನು ಅದಕ್ಕೆ ಒಪ್ಪಿಸಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 ಬಲ ಹೆಚ್ಚಾಗಿರುವುದರಿಂದ ಅದರಲ್ಲಿ ನಂಬಿಕೆಯಿಟ್ಟು, ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು J.V. (BSI)

11 ಬಲಹೆಚ್ಚಾಗಿರುವದರಿಂದ ಅದರಲ್ಲಿ ನಂಬಿಕೆಯಿಟ್ಟು ನಿನ್ನ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವಿಯೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 ನಿನ್ನ ಬೇಸಾಯಕ್ಕೆ ಕಾಡುಕೋಣದ ಶಕ್ತಿಯನ್ನು ಅವಲಂಭಿಸಿಕೊಳ್ಳಬಲ್ಲೆಯಾ? ಪ್ರಯಾಸದ ಕೆಲಸವನ್ನು ಅದು ಮಾಡಬೇಕೆಂದು ಅಪೇಕ್ಷಿಸುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 ಅದರ ಶಕ್ತಿ ಹೆಚ್ಚಾಗಿರುವುದರಿಂದ ನೀನು ಕೆಲಸಕ್ಕಾಗಿ ಅದನ್ನೇ ನಂಬಿರುವೆಯಾ? ನಿನ್ನ ಭಾರವಾದ ಕೆಲಸವನ್ನು ಅದಕ್ಕೆ ಒಪ್ಪಿಸಿಬಿಡುವೆಯಾ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೋಬ 39:11
16 ತಿಳಿವುಗಳ ಹೋಲಿಕೆ  

ಬದಲಿಗೆ, “ಬೇಡ ಬೇಡ, ನಾವು ಕುದುರೆಗಳ ಮೇಲೆ ಓಡಿಹೋಗುತ್ತೇವೆ,” ಎಂದುಕೊಂಡಿರಿ. ಅಂತೆಯೇ ಓಡಿಹೋಗುವಿರಿ.” ನಾವು ದೌಡೋಡುವ ಕುದುರೆಗಳ ಮೇಲೆ ಸವಾರಿಮಾಡುತ್ತೇವೆ,” ಎಂದುಕೊಂಡಿರಿ. ಅಂತೆಯೇ ದೌಡೋಡುವವರೇ ನಿಮ್ಮನ್ನು ಅಟ್ಟಿಕೊಂಡುಬರುವರು.


ನೆಗೇಬಿನ ಮೃಗಗಳನ್ನು ಕುರಿತ ದೈವವಾಣಿ : ಸಿಂಹಸಿಂಹಿಣಿಗಳಿಂದಲೂ ವಿಷಸರ್ಪ - ಘಟಸರ್ಪಗಳಿಂದಲೂ ಕೂಡಿದ ಭಯಂಕರ ಹಾಗೂ ಸಂಕಟಕರವಾದ ಆ ನಾಡಿನ ಮಾರ್ಗವಾಗಿ ತಮ್ಮ ಧನಕನಕಗಳನ್ನು ಕತ್ತೆಗಳ ಮೇಲೂ ಆಸ್ತಿಪಾಸ್ತಿಗಳನ್ನು ಒಂಟೆಗಳ ಮೇಲೂ ಹೊರಿಸಿಕೊಂಡು ನಿಷ್ಪ್ರಯೋಜಕವಾದ ಆ ರಾಷ್ಟ್ರಕ್ಕೆ ಹೋಗುತ್ತಾರೆ.


ಎತ್ತುಗಳಿಲ್ಲದಿರುವಾಗ ಗೋದಲಿ ಶುದ್ಧ; ಆದರೆ ಎತ್ತಿನ ಶಕ್ತಿಯಿಂದಲೇ ಬೆಳೆಯ ಉತ್ಪನ್ನ.


ಅಶ್ವಬಲದಲಿ ಆತನಿಗೆ ಇಷ್ಟವಿಲ್ಲ I ಶೂರನ ಶಕ್ತಿಯನವನು ಮೆಚ್ಚುವುದಿಲ್ಲ II


ನಮ್ಮ ಹಸುಗಳು ನೂರಾರು ಕರುಗಳನ್ನೀಯಲಿ I ಮೈಯಿಳಿಯದೆ, ಲೋಪವಿಲ್ಲದೆಯೆ ಗರ್ಭಧರಿಸಲಿ I ನಮ್ಮ ಬೀದಿಗಳಲಿ ಗೋಳಾಟ ಕೇಳಿಬರದಿರಲಿ II


ಹೆಚ್ಚಳಪಡುತಿಹರು ಕೆಲವರು ರಥಗಳಲಿ, ಹಲವರು ಅಶ್ವಗಳಲಿ I ಹೆಮ್ಮೆಪಡುತಿಹೆವು ನಾವಾದರೋ, ನಮ್ಮ ದೇವರ ನಾಮದಲಿ II


ಅಣ್ಣಂದಿರು ತಾವು ಕೊಂಡುಕೊಂಡ ಧಾನ್ಯವನ್ನು ಕತ್ತೆಗಳ ಮೇಲೆ ಹೇರಿಕೊಂಡು ಹೊರಟರು.


ಭೂಮಿಯ ಮೇಲಿರುವ ಎಲ್ಲ ಪ್ರಾಣಿಗಳೂ ಆಕಾಶದ ಎಲ್ಲ ಪಕ್ಷಿಗಳೂ ನೆಲದ ಮೇಲೆ ಹರಿದಾಡುವ ಎಲ್ಲ ಕ್ರಿಮಿಕೀಟಗಳೂ ಸಮುದ್ರದ ಎಲ್ಲ ಮೀನುಗಳೂ ನಿಮಗೆ ಹೆದರಿ ಬೆದರುವುವು. ಅವುಗಳನ್ನೆಲ್ಲ ನಿಮ್ಮ ಸ್ವಾಧೀನಕ್ಕೆ ಕೊಟ್ಟಿದ್ದೇನೆ.


ಅವರನ್ನು ದೇವರು ಆಶೀರ್ವದಿಸಿ, “ನೀವು ಅಭಿವೃದ್ಧಿಯಾಗಿ, ಅನೇಕ ಮಕ್ಕಳನ್ನು ಪಡೆಯಿರಿ; ಭೂಮಿಯಲ್ಲಿ ಹರಡಿಕೊಂಡು ಅದನ್ನು ವಶಪಡಿಸಿಕೊಳ್ಳಿರಿ; ಸಮುದ್ರದ ಮೀನುಗಳ ಮೇಲೆಯೂ ಆಕಾಶದ ಪಕ್ಷಿಗಳ ಮೇಲೆಯೂ ಭೂಮಿಯಲ್ಲಿ ಚಲಿಸುವ ಎಲ್ಲ ಪ್ರಾಣಿಗಳ ಮೇಲೆಯೂ ದೊರೆತನ ಮಾಡಿರಿ.


ಅದಾದನಂತರ ದೇವರು, “ನಮ್ಮಂತೆಯೇ ಇರುವ ಹಾಗು ನಮ್ಮನ್ನು ಹೋಲುವ, ಮನುಷ್ಯರನ್ನು ಉಂಟುಮಾಡೋಣ. ಅವರು ಸಮುದ್ರದಲ್ಲಿರುವ ಮೀನುಗಳ ಮೇಲೆಯೂ ಅಂತರಿಕ್ಷದಲ್ಲಿ ಹಾರಾಡುವ ಪಕ್ಷಿಗಳ ಮೇಲೆಯೂ ದೊಡ್ಡ - ಚಿಕ್ಕ ಸಾಕುಪ್ರಾಣಿ ಹಾಗು ಕಾಡುಮೃಗಗಳ ಮೇಲೆಯೂ ನೆಲದ ಮೇಲೆ ಹರಿದಾಡುವ ಕ್ರಿಮಿಕೀಟಗಳ ಮೇಲೆಯೂ ದೊರೆತನ ಮಾಡಲಿ,” ಎಂದರು. ಹೀಗೆ ದೇವರು:


ತಗ್ಗಿದೆ ಬೇಲ್ ದೇವತೆ ಕುಗ್ಗಿದೆ ನೆಬೋ ದೇವತೆ ಅವುಗಳ ಪ್ರತಿಮೆಗಳನು ಕತ್ತೆಗಳು ಹೊತ್ತಿವೆ. ನೀವು ಮೆರವಣಿಗೆಯಾಗಿ ಹೊರುತ್ತಿದ್ದ ಆ ಬೊಂಬೆಗಳೆ, ಭಾರವಾದ ಹೊರೆಯಾಗಿವೆ, ಬಳಲಿದಾ ಪಶುಗಳಿಗೆ


ಕಟ್ಟಬಲ್ಲೆಯಾ ಅದನು ಹಗ್ಗದಿಂದ ನೇಗಿಲ ಸಾಲಿಗೆ ಕುಂಟೆ ಎಳೆಯಲು ಅದು ನಿನ್ನ ಹಿಂದೆ?


ಬೆಳೆಯನು ಅದು ನಿನಗೆ ಹೊತ್ತು ತರುವುದೆಂದು ನಂಬುವೆಯಾ? ಕಣದಲಿ ನಿನಗೆ ಕಾಳನು ಕೂಡಿಸುವುದೆಂಬ ನಂಬಿಕೆ ನಿನಗಿದೆಯಾ?


ಅವರನ್ನು ದೇವರೇ ಕರೆದು ತಂದ ಈಜಿಪ್ಟಿನಿಂದ ಅವರಿಗಿದೆ ಕಾಡುಕೋಣದಂಥ ಶಕ್ತಿಸಾಮರ್ಥ್ಯ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು